For Quick Alerts
ALLOW NOTIFICATIONS  
For Daily Alerts
 

ICC Award: ವಿರಾಟ್ ಕೊಹ್ಲಿ ಮುಡಿಗೆ ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿ

ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿ ದಾಖಲೆಯ ಮೇಲೆ ದಾಖಲೆಯನ್ನು ಬರೆದಿರುವ ಟೀಮ್ ಇಂಡಿಯಾದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಮುಡಿಗೆ ಮತ್ತೊಂದು ಗರಿ ಸಂದಿದೆ. ಏಕದಿನ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಸೋತರೂ ವಿರಾಟ್‌ ತಮ್ಮ ಸ್ಥಿರ ಆಟದ ಮೂಲಕ ಗಮನ ಸೆಳೆದಿದ್ದರು. ಅಲ್ಲದೆ ಟೂರ್ನಿಯ ಶ್ರೇಷ್ಠ ಆಟಗಾರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು. ಈಗ ವಿರಾಟ್‌ ಅವರ ಮನೆಯ ಶೋಕೆಸ್‌ನ್ನು ಇನ್ನೊಂದು ಐಸಿಸಿ ಪ್ರಶಸ್ತಿ ಸೇರಿದೆ. ವಿರಾಟ್‌ ಕೊಹ್ಲಿ ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಈ ಪ್ರಶಸ್ತಿಯನ್ನು ವಿರಾಟ್ ಕೊಹ್ಲಿ ನಾಲ್ಕನೇ ಬಾರಿಗೆ ಈ ಪ್ರಶಸ್ತಿ ಗೆದ್ದು ಬೀಗಿದ್ದಾರೆ. 2023 ರ ಮೊದಲು, ವಿರಾಟ್ ಕೊಹ್ಲಿ 2012, 2017 ಮತ್ತು 2018 ರಲ್ಲಿ ಐಸಿಸಿ ವರ್ಷದ ಏಕದಿನ ಕ್ರಿಕೆಟಿಗರಾದರು. ವಿರಾಟ್ ಕೊಹ್ಲಿ ಏಕದಿನ ವಿಶ್ವಕಪ್‌ನಲ್ಲಿ ನೀಡಿದ ಪ್ರದರ್ಶನದ ಫಲವಾಗಿ ಟೀಂ ಇಂಡಿಯಾ ಸತತ 10 ಪಂದ್ಯಗಳನ್ನು ಗೆದ್ದು ಫೈನಲ್ ತಲುಪುವಲ್ಲಿ ಯಶಸ್ವಿಯಾಗಿತ್ತು.

Team india star Virat Kohli named the ICC Mens ODI Cricketer of the Year for 2023

ಕಳೆದ ವರ್ಷ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು ಮತ್ತು 27 ಪಂದ್ಯಗಳಲ್ಲಿ 1377 ರನ್ ಗಳಿಸಿದ್ದರು. ಇಷ್ಟೇ ಅಲ್ಲ, ಏಳು ವರ್ಷಗಳ ಸುದೀರ್ಘ ಅಂತರದ ನಂತರ ವಿರಾಟ್ ಕೊಹ್ಲಿ ಕಳೆದ ವರ್ಷ ಬೌಲಿಂಗ್ ಮಾಡಿ ವಿಕೆಟ್ ಕೂಡ ಪಡೆದಿದ್ದರು. ಸತತ ಮೂರು ವರ್ಷಗಳಿಂದ ಶತಕ ಸಿಡಿಸದೇ ಇದ್ದ ವಿರಾಟ್ ಕೊಹ್ಲಿ ಟೀಕೆಗೆ ಗುರಿಯಾಗುತ್ತಿದ್ದರು. ಒಂದು ಕಾಲದಲ್ಲಿ ವಿರಾಟ್ ಕೊಹ್ಲಿ ತಂಡದಲ್ಲಿ ಮುಂದುವರಿದಿರುವ ಬಗ್ಗೆಯೂ ಪ್ರಶ್ನೆಗಳು ಎದ್ದಿದ್ದವು. ಆದರೆ ವಿರಾಟ್ ಕೊಹ್ಲಿ 2022 ರಲ್ಲಿ ಭರ್ಜರಿಯಾಗಿ ಪುಟಿದೇಳುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. 2022ರಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ ಶತಕ ಸಿಡಿಸಿ, ಶತಕದ ಬರವನ್ನು ನೀಗಿಸಿಕೊಂಡಿದ್ದರು. ಇಲ್ಲಿಂದ ವಿರಾಟ್ ಹಿಂತಿರೂಗಿ ನೋಡಿದ್ದೇ ಇಲ್ಲ.

ಭಾರತದಲ್ಲಿ ನಡೆದ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ 11 ಇನ್ನಿಂಗ್ಸ್‌ಗಳಲ್ಲಿ 765 ರನ್ ಗಳಿಸಿದ್ದಾರೆ. ಅಷ್ಟೇ ಅಲ್ಲ, ಸಚಿನ್ ತೆಂಡೂಲ್ಕರ್ ಅವರ 20 ವರ್ಷಗಳ ಹಳೆಯ ದಾಖಲೆಯನ್ನು ಮುರಿದು ವಿರಾಟ್ ಕೊಹ್ಲಿ ಏಕದಿನ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

Team india star Virat Kohli named the ICC Mens ODI Cricketer of the Year for 2023

ಏಕದಿನದಲ್ಲಿ ವಿರಾಟ್ ಕೊಹ್ಲಿ

ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿಯಂತಹ ಬ್ಯಾಟ್ಸ್‌ಮನ್ ಮತ್ತೊಬ್ಬರಿಲ್ಲ. ಏಕದಿನ ಕ್ರಿಕೆಟ್‌ನಲ್ಲಿ 50 ಶತಕಗಳನ್ನು ಸಿಡಿಸಿದ ವಿಶ್ವದ ಏಕೈಕ ಬ್ಯಾಟ್ಸ್‌ಮನ್ ಎಂಬ ಹಿರಿಮೆ ವಿರಾಟ್ ಕೊಹ್ಲಿ ಅವರದ್ದು. ಇದಕ್ಕೂ ಮೊದಲು ಏಕದಿನ ಮಾದರಿಯಲ್ಲಿ 49 ಶತಕಗಳನ್ನು ಬಾರಿಸಿದ್ದ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ದಾಖಲೆಯಾಗಿತ್ತು. ಇಲ್ಲಿಯವರೆಗೆ ವಿರಾಟ್ ಕೊಹ್ಲಿ 292 ಏಕದಿನ ಪಂದ್ಯಗಳ 280 ಇನ್ನಿಂಗ್ಸ್‌ಗಳಲ್ಲಿ 58.68 ಸರಾಸರಿಯಲ್ಲಿ 13848 ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಏಕದಿನದಲ್ಲಿ 50 ಶತಕಗಳನ್ನು ಸಿಡಿಸಿದ್ದಲ್ಲದೆ, 72 ಅರ್ಧಶತಕಗಳನ್ನು ಸಹ ಗಳಿಸಿದ್ದಾರೆ.

Story first published: Thursday, January 25, 2024, 18:28 [IST]
Other articles published on Jan 25, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+