Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಬಾರ್ಡರ್‌ ಗವಾಸ್ಕರ್ ಟ್ರೋಫಿ: ಟೀಮ್ ಇಂಡಿಯಾಕ್ಕೆ ಕಾಡಲಿದೆ ಶಮಿ ಅನುಪಸ್ಥಿತಿ

ಭಾರತ ಹಾಗೂ ನ್ಯೂಜಿಲೆಂಡ್‌ ನಡವುಣ ಎರಡನೇ ಟೆಸ್ಟ್‌ ಪುಣೆಯಲ್ಲಿ ನಡೆದಿತ್ತು. ಈ ಪಂದ್ಯದಲ್ಲೀ ಟೀಮ್ ಇಂಡಿಯಾ ಸೋಲು ಕಂಡಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ನ್ಯೂಜಿಲೆಂಡ್‌ ಮುನ್ನಡೆ ಸಾಧಿಸಿದ್ದು, ಸರಣಿಯನ್ನು ವಶಕ್ಕೆ ಪಡೆದಿದೆ. ಟೀಮ್ ಇಂಡಿಯಾದ ಪ್ರದರ್ಶನದ ಬಗ್ಗೆ ಮಾಜಿ ಕ್ರಿಕೆಟ್ ಆಟಗಾರರು, ಕ್ರಿಕೆಟ್‌ ವಿಶ್ಲೇಷಕರು ತಮ್ಮ ತಮ್ಮ ಅಭಿಪ್ರಾಯವನ್ನು ನೀಡಿದ್ದಾರೆ.

ನ್ಯೂಜಿಲೆಂಡ್‌ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ತನ್ನ ಅನುಭವಿ ಪೇಸ್‌ ಬೌಲರ್‌ ಮೊಹಮ್ಮದ್‌ ಶಮಿ ಅವರನ್ನು ಮಿಸ್ ಮಾಡಿಕೊಂಡಿತ್ತು ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ. ಅವರ ಅನುಪಸ್ಥಿತಿ ತಂಡಕ್ಕೆ ಬಹುವಾಗಿ ಕಾಡಿದೆ ಆಸ್ಟ್ರೇಲಿಯಾ ತಂಡದ ಮುಖ್ಯ ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್ ಕೂಡ ಈ ಬಗ್ಗೆ ತಮ್ಮ ಅಭಿಪ್ರಾಯ ನೀಡಿದ್ದಾರೆ.

Team India Suffers Major Blow as Mohammed Shami Ruled Out of Australia Test Series

ಬಾರ್ಡರ್‌ ಗವಾಸ್ಕರ್‌ ಸರಣಿ

ನವೆಂಬರ್‌ನಲ್ಲಿ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್‌ ಗವಾಸ್ಕರ್ ಸರಣಿ ನಡೆಯಲಿದೆ. ಈ ಸರಣಿಗೆ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ಈ ಪ್ರವಾಸದಲ್ಲಿ ಟೀಮ್ ಇಂಡಿಯಾ ಐದು ಪಂದ್ಯಗಳ ಟೆಸ್ಟ್‌ ಸರಣಿ ಆಡಲಿದೆ. ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ದೃಷ್ಟಿಯಿಂದ ಈ ಸರಣಿ ಮಹತ್ವ ಪಡೆದಿದೆ. ಯಾರು ಈ ಸರಣಿಯಲ್ಲಿ ಜಯ ಸಾಧಿಸುತ್ತಾರೋ ಅವರು, ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪ್ರವೇಶಿಸುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

ಕಾಡಲಿದೆ ಶಮಿ ಅನುಪಸ್ಥಿತಿ

ಆಸೀಸ್ ಪ್ರವಾಸಕ್ಕೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ತಂಡದಲ್ಲಿ ಮೊಹಮ್ಮದ್ ಶಮಿ ಅವರು ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಏಕದಿನ ವಿಶ್ವಕಪ್‌ನಲ್ಲಿ ಭರ್ಜರಿ ಪ್ರದರ್ಶನ ನಿಡಿದ್ದ ಶಮಿ, ಫೈನಲ್‌ ಬಳಿಕ ಗಾಯಕ್ಕೆ ತುತ್ತಾಗಿದ್ದರು. ಅಲ್ಲದೆ ಶಸ್ತ್ರ ಚಿಕಿತ್ಸೆ ಸಹ ಮಾಡಿಸಿಕೊಂಡಿದ್ದರು. ಟೀಮ್ ಇಂಡಿಯಾ ಸ್ವಿಂಗ್ ಬೌಲರ್‌ ಶಮಿಯನ್ನು ಮಿಸ್ ಮಾಡಿಕೊಳ್ಳಲಿದೆ ಎಂದು ಆಸ್ಟ್ರೇಲಿಯಾ ತಂಡದ ಮುಖ್ಯ ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಆಸೀಸ್ ಕೋಚ್‌ ಹೇಳಿದ್ದೇನು?

ನಮ್ಮ ಬ್ಯಾಟರ್‌ಗಳು ಶಮಿ ಸ್ವಭಾವ, ಅವರ ಲೈನ್‌ ಹಾಗೂ ಲೆಂಥ್‌, ಅವರು ಬೌಲಿಂಗ್ ನಡೆಸುವ ರೀತಿ ಬಗ್ಗೆ ನಮ್ಮ ಬ್ಯಾಟರ್‌ಗಳು ಮಾತನಾಡಿಕೊಂಡಿದ್ದಾರೆ. ಇದನ್ನೆಲ್ಲಾ ನೋಡಿದಾಗ ಟೀಮ್ ಇಂಡಿಯಾಕ್ಕೆ ಶಮಿ ಎಷ್ಟು ಇಂಪಾರ್ಟೆಂಟ್‌ ಎಂಬುದು ತಿಳಿಯುತ್ತದೆ ಎಂದು ಆಸೀಸ್ ಕೋಚ್‌ ಹೇಳಿದ್ದಾರೆ.

Team India Suffers Major Blow as Mohammed Shami Ruled Out of Australia Test Series

ಇನ್ನು ಟೀಮ್ ಇಂಡಿಯಾದ ಯಾರ್ಕರ್‌ ಸ್ಪೇಷಲಿಸ್ಟ್‌ ಬುಮ್ರಾ ಸಹ ಶಮಿ ಅವರನ್ನು ಮಿಸ್ ಮಾಡಿಕೊಳ್ಳಲಿದ್ದಾರೆ. ಶಮಿ ಬುಮ್ರಾ ಅವರಿಗೆ ಚೆನ್ನಾಗಿ ಸಾಥ್ ನೀಡುತ್ತಿದ್ದರು. ನಿಜಕ್ಕೂ ರೋಹಿತ್ ಪಡೆ ಈ ಜೋಡಿಯನ್ನು ಮಿಸ್ ಮಾಡಿಕೊಳ್ಳಲಿದೆ ಎಂದು ಮುಖ್ಯ ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್ ತಿಳಿಸಿದ್ದಾರೆ.

ಕಳೆದ ಬಾರಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಾಗ ಆಡಿದ ಧಾಟಿ ಇನ್ನು ಸಹ ನಮ್ಮ ದೇಶವಾಸಿಗಳ ಮನಸ್ಸಿನಲ್ಲಿ ಹಸಿರಾಗಿದೆ. ಭಾರತದ ಬೆಂಚ್‌ ಸ್ಟ್ರೆಂತ್ ಎಷ್ಟು ದೊಡ್ಡದು ಎಂಬುದು ನಮಗೆ ತಿಳಿದಿದೆ ಎಂದು ತಿಳಿಸಿದ್ದಾರೆ. ನಾವು ಟೀಮ್ ಇಂಡಿಯಾವನ್ನು ಹಗರುವಾಗಿ ನೋಡುತ್ತಿಲ್ಲ ಎಂದು ಆಸ್ಟ್ರೇಲಿಯಾದ ಕೋಚ್ ಹೇಳಿದ್ದಾರೆ.

Story first published: Monday, October 28, 2024, 7:30 [IST]
Other articles published on Oct 28, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+