ಭಾರತ ಟಿ20 ತಂಡಕ್ಕೆ ಕಮ್‌ಬ್ಯಾಕ್ ಮಾಡಿದ ಮೊಹಮ್ಮದ್ ಶಮಿ: ಆದರೆ ಟಿ20 ವಿಶ್ವಕಪ್‌ಗೆ ಇಲ್ಲ!

ಈ ಬಾರಿಯ ಏಷ್ಯಾ ಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದು ಸೂಪರ್ 4 ಹಂತದಿಂದಲೇ ನಿರ್ಗಮಿಸಿತು. ತಂಡದ ಬೌಲಿಂಗ್ ವಿಭಾಗದಲ್ಲಿನ ಅನನುಭವದಿಂದಾಗಿ ಟೂರ್ನಿಯಲ್ಲಿ ವೈಫಲ್ಯ ಅನುಭವಿಸಿದ ಭಾರತ ತಂಡ ಸೂಪರ್ 4 ಹಂತದಲ್ಲಿ ಸತತ ಎರಡು ಪಂದ್ಯ ಸೋತು ನಿರ್ಗಮಿಸಿತು. ಈ ಹಿನ್ನಡೆಯ ಬಳಿಕ ಟಿ20 ವಿಶ್ವಕಪ್ ತಂಡದಲ್ಲಿ ಹಿರಿಯ ಆಟಗಾರ ಮೊಹಮ್ಮದ್ ಶಮಿಗೆ ಅವಕಾಶ ನೀಡಬೇಕು ಎಂಬ ಅಭಿಪ್ರಾಯ ಜೋರಾಗಿ ಕೇಳಿ ಬಂದಿತ್ತು.
ವಿಶ್ವಕಪ್‌ಗೆ ಇದೀಗ ತಂಡ ಘೋಷಣೆಯಾಗಿದ್ದು ಈ ತಂಡದಲ್ಲಿ ಮೊಹಮ್ಮದ್ ಶಮಿ ಅಂತಿಮ 15ರ ಬಳಗದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. ಆದರೆ ಮೊಹಮ್ಮದ್ ಶಮಿ ಮೀಸಲು ಆಟಗಾರನಾಗಿ ಆಸ್ಟ್ರೇಲಿಯಾಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಆದರೆ ಈ ಮಹತ್ವದ ಟೂರ್ನಿಗೂ ಮುನ್ನ ನಡೆಯಲಿರುವ ಎರಡು ಚುಟುಕು ಸರಣಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ತಂಡದಲ್ಲಿ ಟ20 ಮಾದರಿಗೆ ಸುದೀರ್ಘ ಕಾಲದ ಮೊಹಮ್ಮದ್ ಶಮಿ ಕಮ್‌ಬ್ಯಾಕ್ ಮಾಡಿದ್ದಾರೆ.

ಆಸ್ಟ್ರೇಲಿಯಾ, ದ. ಆಫ್ರಿಕಾ ಸರಣಿ ಮೂಲಕ ಶಮಿ ಕಮ್‌ಬ್ಯಾಕ್
ಮೊಹಮ್ಮದ್ ಶಮಿ ಭಾರತದ ಏಕದಿನ ಹಾಗೂ ಟೆಸ್ಟ್ ತಂಡದ ಪ್ರಮುಖ ಬೌಲಿಂಗ್ ಅಸ್ತ್ರವಾಗಿದ್ದರು ಕೂಡ ಟಿ20 ತಂಡದಿಂದ ಹೊರಬಿದ್ದಿದ್ದರು. ಕಳೆದ ವರ್ಷ ನಡೆದ ಟಿ20 ವಿಶ್ವಕಪ್‌ನ ಬಳಿಕ ಮೊಹಮ್ಮದ್ ಶಮಿ ಟಿ20 ತಂಡದಲ್ಲಿ ಮತ್ತೆ ಸ್ಥಾನ ಪಡೆಯಲು ವಿಫಲವಾಗಿದ್ದರು. ಆದರೆ ಮುಂಬರುವ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಮೊಹಮ್ಮದ್ ಶಮಿ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಶಮಿ ಜೊತೆಗೆ ದೀಪಕ್ ಚಾಹರ್ ಕೂಡ ಈ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ದೀಪಕ್ ಚಾಹರ್ ಕೂಡ ವಿಶ್ವಕಪ್ ತಂಡದಲ್ಲಿ ಮೀಸಲು ಆಟಗಾರನಾಗಿ ಸ್ಥಾನ ಪಡೆದುಕೊಂಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications