Team India: ಗ್ರೀನ್ ಪಾರ್ಕ್‌ನಲ್ಲಿ ಟೀಮ್ ಇಂಡಿಯಾ ಟೆಸ್ಟ್ ದಾಖಲೆ
ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂ ಮೊದಲ ಬಾರಿಗೆ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಉಭಯ ತಂಡಗಳ ಟೆಸ್ಟ್ ಪಂದ್ಯವೂ ಸೆಪ್ಟೆಂಬರ್ 27 ರಿಂದ ಆರಂಭವಾಗಲಿದೆ. ಈ ಸ್ಟೇಡಿಯಂನಲ್ಲಿ ಭಾರತ ತನ್ನ 24ನೇ ಟೆಸ್ಟ್ ಪಂದ್ಯವನ್ನು ಆಡುವ ಉತ್ಸಾಹದಲ್ಲಿದೆ.
ತವರಿನ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾದ ಅಭೇದ್ಯ ಕೋಟೆಯನ್ನು ಭೇದಿಸುವುದು ಎದುರಾಳಿ ತಂಡಗಳಿಗೆ ಅಸಾಧ್ಯವಾಗಿದೆ. ಹಾಗೆಯೇ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲೂ ಟೀಮ್ ಇಂಡಿಯಾ ವಿರುದ್ಧ ಗೆಲುವು ಸಾಧಿಸಿವುದು ಕನಸಿನ ಮಾತಾಗಿದೆ. ಏಕೆಂದರೆ ಸುಮಾರು 41 ವರ್ಷಗಳಿಂದ ಈ ಸ್ಟೇಡಿಯಂನಲ್ಲಿ ಭಾರತ ಅಜೇಯವಾಗಿದೆ. ವಿಶ್ವ ಟೆಸ್ಟ್ ಕ್ರಿಕೆಟ್‌ನಲ್ಲಿಯೂ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಪ್ರಾಬಲ್ಯ ಸಾಧಿಸಿದೆ. ಹೀಗಾಗಿ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿಯೂ ಆಗ್ರಸ್ಥಾನದಲ್ಲಿದೆ.

ಗ್ರೀನ್ ಪಾರ್ಕ್ ದಾಖಲೆ
ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ಅದ್ಭುತ ದಾಖಲೆಗಳನ್ನು ಮಾಡಿದೆ. ಈ ಸ್ಟೇಡಿಯಂನಲ್ಲಿ ಇದುವರೆಗೆ 23 ಟೆಸ್ಟ್ ಪಂದ್ಯಗಳು ನಡೆದಿದೆ. ಇದರಲ್ಲಿ ಭಾರತ 7 ಟೆಸ್ಟ್ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, 3 ರಲ್ಲಿ ಸೋಲು ಕಂಡಿದೆ. ಉಳಿದಂತೆ 13 ಟೆಸ್ಟ್ ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ. ಭಾರತ ಗೆದ್ದಿರುವ 7 ಟೆಸ್ಟ್ ಪಂದ್ಯಗಳಲ್ಲಿ ಎದುರಾಳಿ ತಂಡವನ್ನು ಭಾರಿ ಅಂತರದಿಂದ ಮಣಿಸಿರುವುದು ವಿಶೇಷ.
ಈ ಸ್ಟೇಡಿಯಂನಲ್ಲಿ ಕೊನೆಯ ಟೆಸ್ಟ್ ಪಂದ್ಯ ಸುಮಾರು 3 ವರ್ಷಗಳ ಹಿಂದೆ 2021ರಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದಿತ್ತು. ಈ ಪಂದ್ಯವೂ ಡ್ರಾ ಆಗಿತ್ತು. ಇದಕ್ಕೂ ಮುನ್ನ ಸುಮಾರು 41 ವರ್ಷಗಳ ಹಿಂದೆ ಇದೇ ಮೈದಾನದಲ್ಲಿ ಟೀಮ್ ಇಂಡಿಯಾ ತನ್ನ ಕೊನೆಯ ಟೆಸ್ಟ್ ಪಂದ್ಯವನ್ನು ಸೋತಿತ್ತು. 1983 ಅಕ್ಟೋಬರ್ 21 ರಂದು ನಡೆದ ಟೆಸ್ಟ್ ಪಂದ್ಯದಲ್ಲಿ ಭಾರತ ವಿರುದ್ಧ ವೆಸ್ಟ್ ಇಂಡೀಸ್ 83 ರನ್‌ಗಳ ಭರ್ಜರಿ ಜಯ ದಾಖಲಿಸಿತ್ತು.
ಬಾಂಗ್ಲಾದೇಶ ಗೆಲುವು ಅಸಾಧ್ಯ
ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಟೀಮ್ ಇಂಡಿಯಾ ಸೋಲಿಸಿತ್ತು. ಇದೀಗ ಎರಡನೇ ಟೆಸ್ಟ್ ಗೆಲುವಿನ ಮೇಲೆ ಕಣ್ಣಿಟ್ಟಿರುವ ಬಾಂಗ್ಲಾದೇಶ ತಂಡ ಟೀಮ್ ಇಂಡಿಯಾವನ್ನು ಸೋಲಿಸುವುದು ಸವಾಲಾಗಿದೆ.
ಏಕೆಂದೆರೆ ಕಳೆದ 12 ವರ್ಷಗಳಿಂದ ಭಾರತ ತವರಿನಲ್ಲಿ ಯಾವುದೇ ಟೆಸ್ಟ್ ಸರಣಿಯನ್ನು ಸೋತಿಲ್ಲ. 2012ರ ನವೆಂಬರ್ ತಿಂಗಳಲ್ಲಿ ಇಂಗ್ಲೆಂಡ್ ವಿರುದ್ಧದ ಕೊನೆಯ ಬಾರಿ ತವರಿನಲ್ಲಿ ಟೆಸ್ಟ್ ಸರಣಿಯನ್ನು ಕಳೆದುಕೊಂಡಿತ್ತು. 2012 ನಂತರ ತವರಿನಲ್ಲಿ ನಡೆದ 52 ಟೆಸ್ಟ್ ಪಂದ್ಯಗಳಲ್ಲಿ ಭಾರತ ಕೇವಲ 4 ಟೆಸ್ಟ್ ಪಂದ್ಯಗಳಲ್ಲಿ ಮಾತ್ರ ಸೋಲು ಕಂಡಿದ್ದರೆ, 41 ರಲ್ಲಿ ಜಯ ದಾಖಲಿಸಿದೆ. 7 ಟೆಸ್ಟ್ ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ. ಈ ಅಂಕಿಅಂಶಗಳ ಪ್ರಕಾರ ಟೀಮ್ ಇಂಡಿಯಾವನ್ನು ಎರಡನೇ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ಸೋಲಿಸುವುದು ಅಸಾಧ್ಯ.
ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್‌ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್‌ದೀಪ್ ಯಾದವ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications