WTC ಫೈನಲ್ ಪಂದ್ಯದ ಅಭ್ಯಾಸದ ವೇಳೆ ದೊಡ್ಡ ಹೊಡೆತಗಳನ್ನು ಬಾರಿಸಿದ ಪಂತ್; ವಿಡಿಯೋ ನೋಡಿ

ಜೂನ್ 18-22ರವರೆಗೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಇದು ಟೆಸ್ಟ್ ಕ್ರಿಕೆಟ್‌ನ ವಿಶ್ವಕಪ್ ಎಂದೇ ಖ್ಯಾತಿಯನ್ನು ಪಡೆದುಕೊಳ್ಳುತ್ತಿದ್ದು ದಿನದಿಂದ ದಿನಕ್ಕೆ ಈ ಪಂದ್ಯದ ಮೇಲೆ ನಿರೀಕ್ಷೆಗಳು ಹೆಚ್ಚಾಗುತ್ತಿವೆ.
WTC Final ಗೆಲ್ಲಬೇಕೆಂದರೆ ಆ ಸ್ಟಾರ್ ಬೌಲರ್‌ನ್ನು ತಂಡದಿಂದ ಕೈಬಿಟ್ಟು ಸಿರಾಜ್‌ಗೆ ಅವಕಾಶ ಕೊಡಿ: ಹರ್ಭಜನ್ ಸಿಂಗ್
ಜೂನ್ 3ರಂದು ಇಂಗ್ಲೆಂಡ್ ತಲುಪಿದ್ದ ಟೀಮ್ ಇಂಡಿಯಾ ತಂಡ ವ್ಯವಸ್ಥಿತ ಹೋಟೆಲ್ ಕ್ವಾರಂಟೈನ್‌ಗೆ ಒಳಗಾಗಿತ್ತು. ಹೀಗೆ ಕ್ವಾರಂಟೈನ್ ನಿಯಮವನ್ನು ಮುಗಿಸಿರುವ ಟೀಮ್ ಇಂಡಿಯಾ ತಂಡದ ಆಟಗಾರರು ಗುಂಪುಗುಂಪಾಗಿ ನೆಟ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಐಪಿಎಲ್ ಮುಂದೂಡಲ್ಪಟ್ಟಾಗಿನಿಂದ ಯಾವುದೇ ರೀತಿಯ ಕ್ರಿಕೆಟ್ ಪಂದ್ಯಗಳಲ್ಲಿಯೂ ಭಾಗವಹಿಸದ ಆಟಗಾರರು ನೆಟ್ ಅಭ್ಯಾಸದಲ್ಲಿ ಭರ್ಜರಿ ತಾಲೀಮು ನಡೆಸುತ್ತಿದ್ದು ಬೆವರಿಳಿಸಿದ್ದಾರೆ.
ಟೀಮ್ ಇಂಡಿಯಾ ಆಟಗಾರರು ತೀವ್ರವಾದ ನೆಟ್ ಅಭ್ಯಾಸದಲ್ಲಿ ತೊಡಗಿರುವ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಈ ವಿಡಿಯೋದಲ್ಲಿ ರಿಷಭ್ ಪಂತ್ ದೊಡ್ಡ ಹೊಡೆತಗಳನ್ನು ಬಾರಿಸುತ್ತಿದ್ದಾರೆ ಹಾಗೂ ವಿರಾಟ್ ಕೊಹ್ಲಿ ಕೂಡ ಬ್ಯಾಟಿಂಗ್ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ. ಜಸ್ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಶಮಿ ಸೇರಿದಂತೆ ಇನ್ನೂ ಕೆಲ ಆಟಗಾರರು ಅಭ್ಯಾಸದಲ್ಲಿ ತೊಡಗಿಕೊಂಡಿರುವುದನ್ನು ಈ ವಿಡಿಯೋದಲ್ಲಿ ನಾವು ಕಾಣಬಹುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications