ಜೂನ್ 6 ರಿಂದ ಅಫ್ಘಾನಿಸ್ತಾನ ವಿರುದ್ಧ ಭಾರತ ಹೋರಾಟ: ವೇಳಾಪಟ್ಟಿ ಬಿಡುಗಡೆ
ಭಾರತದಲ್ಲಿ ಸದ್ಯ ಟಿ20 ವಿಶ್ವಕಪ್ ನಡೆಯುತ್ತಿದೆ. ಈ ವಿಶ್ವಕಪ್ ಮಾರ್ಚ್ 8 ರಂದು ಕೊನೆಯಾಗುತ್ತದೆ. ಇದಾದ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭವಾಗಲಿದೆ. ಈ ಲೀಗ್ ಮುಗಿದ ಬಳಿಕ ಭಾರತ ಸಾಲು ಸಾಲು ಅಂತಾರಾಷ್ಟ್ರೀಯ ಸರಣಿಗಳಲ್ಲಿ ಭಾಗವಹಿಸುತ್ತದೆ. ಭಾರತ ಹಾಗೂ ಅಫ್ಘಾನಿಸ್ತಾನ ತಂಡಗಳ ನಡುವೆ ಏಕದಿನ ಹಾಗೂ ಏಕೈಕ ಟೆಸ್ಟ್ ಸರಣಿ ನಡೆಯುವ ಬಗ್ಗೆ ಈ ಹಿಂದೆ ಮಾಹಿತಿ ಇತ್ತು. ಈಗ ಈ ಸರಣಿಯ ವೇಳಾಪಟ್ಟಿ ಬಿಡುಗಡೆ ಆಗಿದೆ.
ಈ ಸರಣಿಯಲ್ಲಿ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಆಡುವುದನ್ನು ಕಾಣಬಹುದಾಗಿದೆ. ಶುಭಮನ್ ಗಿಲ್ ಕೂಡ ಬಹಳ ಸಮಯದ ನಂತರ ತಂಡವನ್ನು ಮುನ್ನಡೆಸಲಿದ್ದಾರೆ. ಅಫ್ಘಾನಿಸ್ತಾನ ವಿರುದ್ದ ಸರಣಿ ಜೂನ್‌ನಲ್ಲಿ ಆರಂಭವಾಗಲಿದೆ. ಈ ವೇಳೆ ಆಫ್ಘಾನ ಒಂದು ಟೆಸ್ಟ್ ಹಾಗೂ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ.

ಬಿಸಿಸಿಐ ಘೋಷಿಸಿದ ವೇಳಾಪಟ್ಟಿಯ ಪ್ರಕಾರ, ಪ್ರವಾಸದ ಆರಂಭದಲ್ಲಿ ಅಫ್ಘಾನಿಸ್ತಾನ ಏಕೈಕ ಟೆಸ್ಟ್ ಪಂದ್ಯವನ್ನು ಆಡಲಿದೆ. ಈ ಪಂದ್ಯ ಜೂನ್ 6 ರಿಂದ 10 ರವರೆಗೆ ನ್ಯೂ ಚಂಡೀಗಢದಲ್ಲಿ ಟೆಸ್ಟ್ ಪಂದ್ಯ ನಡೆಯಲಿದೆ. ನಂತರ ಮೂರು ಏಕದಿನ ಪಂದ್ಯಗಳು ನಡೆಯಲಿವೆ.
ಜೂನ್ 14 ರಿಂದ ಏಕದಿನ ಸರಣಿ
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ಜೂನ್ 14 ರಂದು ಧರ್ಮಶಾಲಾದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಭರವಸೆಯ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅಂಗಳಕ್ಕೆ ಇಳಿಯಲಿದ್ದಾರೆ. ಈ ಸರಣಿಯ ಎರಡನೇ ಪಂದ್ಯ ಜೂನ್ 17 ರಂದು ಲಕ್ನೋದಲ್ಲಿ, ಮೂರನೇ ಮತ್ತು ಕೊನೆಯ ಪಂದ್ಯ ಜೂನ್ 20 ರಂದು ಚೆನ್ನೈನಲ್ಲಿ ನಡೆಯಲಿದೆ. ಈ ಸರಣಿ ಮುಂದಿನ ವರ್ಷ ದಕ್ಷಿಣ ಆಫ್ರಿಕಾದ ಆತಿಥ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ದೃಷ್ಟಿಯಿಂದ ಮಹತ್ವ ಪಡೆದಿದೆ.
ಭಾರತ vs ಅಫ್ಘಾನಿಸ್ತಾನ ಸರಣಿ ವೇಳಾಪಟ್ಟಿ
ಏಕೈಕ ಟೆಸ್ಟ್: ಜೂನ್ 6-10, ಮುಲ್ಲನ್‌ಪುರ
ಮೊದಲ ಏಕದಿನ ಪಂದ್ಯ: ಜೂನ್ 14, ಧರ್ಮಶಾಲಾ
ಎರಡನೇ ಏಕದಿನ ಪಂದ್ಯ: ಜೂನ್ 17, ಲಕ್ನೋ
ಮೂರನೇ ಏಕದಿನ ಪಂದ್ಯ: ಜೂನ್ 20, ಚೆನ್ನೈ
ಸ್ಟಾರ್‌ಗಳು ಕಣಕ್ಕೆ
ಅಫ್ಘಾನಿಸ್ತಾನ ವಿರುದ್ಧ ಸರಣಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಣಕ್ಕೆ ಇಳಿಯಲಿದ್ದಾರೆ. ಈ ಸ್ಟಾರ್ ಆಟಗಾರರು ಈಗ ಬರೀ ಏಕದಿನ ಫಾರ್ಮೆಟ್‌ನಲ್ಲಿ ಮಾತ್ರ ಭಾರತದ ಪರ ಆಡುತ್ತಿದ್ದು, ಕುತೂಹಲ ಮೂಡಿಸಿದೆ. ಟಿ20 ವಿಶ್ವಕಪ್‌ನಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದ ಶುಭಮನ್ ಗಿಲ್ ಮತ್ತೆ ಬ್ಲ್ಯೂ ಜೆರ್ಸಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಈ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿ ಮುಂದಿವ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್ ಆಡುವ ಬಯಕೆಯನ್ನು ವಿರಾಟ್, ರೋಹಿತ್ ಕಾಣುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications