IND vs PM XI: ಯುವ ಆಟಗಾರರ ಆರ್ಭಟ; ಭಾರತಕ್ಕೆ 6 ವಿಕೆಟ್‌ಗಳ ಗೆಲುವು
ಕ್ಯಾನ್‌ಬೆರಾದ ಮನುಕಾ ಓವಲ್‌ನಲ್ಲಿ ನಡೆದ ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ ವಿರುದ್ಧದ ಎರಡು ದಿನಗಳ ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದೆ. ಈ ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾ ಯುವ ಆಟಗಾರರಾದ ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಗಮನ ಸೆಳೆದರೆ, ಬೌಲಿಂಗ್‌ನಲ್ಲಿ ಹರ್ಷಿತ್ ರಾಣಾ ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ ತಂಡವನ್ನು ಕಟ್ಟಿ ಹಾಕಿದರು. ಆಸ್ಟ್ರೇಲಿಯಾ ಪರ ಯುವ ಬ್ಯಾಟರ್ ಸ್ಯಾಮ್ ಕಾನ್‌ಸ್ಟಂಟ್ಸ್ ಅದ್ಭುತ ಶತಕ ಸಿಡಿಸಿದರೂ, ಟೀಮ್ ಇಂಡಿಯಾ 5 ವಿಕೆಟ್‌ಗಳನ್ನು ಕಳೆದುಕೊಂಡು ಗುರಿ ಮುಟ್ಟಿತ್ತು. ಇದು ಡಿಸೆಂಬರ್ 6 ರಿಂದ ಅಡಿಲೇಡ್‌ನಲ್ಲಿ ನಡೆಯಲಿರುವ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾಗೆ ಉತ್ತಮ ತಯಾರಿಯಾಗಿದೆ.
ಟೀಮ್ ಇಂಡಿಯಾ ಮತ್ತು ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ ನಡುವಿನ ಅಭ್ಯಾಸ ಪಂದ್ಯ ಮಳೆಯಿಂದಾಗಿ ಶನಿವಾರ (ನವೆಂಬರ್ 30) ಮೊದಲ ದಿನದ ಆಟ ನಡೆದಿರಲಿಲ್ಲ. ಭಾನುವಾರ ಶುರುವಾದ ಪಂದ್ಯದ ಎರಡನೇ ದಿನದಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹರ್ಷಿತ್ ರಾಣಾ ಉರಿ ಬೌಲಿಂಗ್ ದಾಳಿಗೆ ತತ್ತರಿಸಿದ ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ ತಂಡ 43.2 ಓವರ್‌ಗಳಲ್ಲಿ 240 ರನ್‌ಗಳಿಗೆ ಆಲೌಟ್ ಆಯಿತು. 19 ವರ್ಷದ ಬ್ಯಾಟರ್ ಸ್ಯಾಮ್ ಕಾನ್‌ಸ್ಟಾಸ್ 107 ರನ್ ಗಳಿಸಿ ಮಿಂಚಿದರು. ಭಾರತದ ಪರ ಹರ್ಷಿತ್ ರಾಣಾ ಗರಿಷ್ಠ 4 ವಿಕೆಟ್ ಪಡೆದರು. ಇದಕ್ಕೆ ಉತ್ತರವಾಗಿ 46 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಭಾರತ ಗೆಲುವಿನ ನಗೆ ಬೀರಿತು.

ಗಿಲ್ ಅಮೋಘ ಪ್ರದರ್ಶನ
ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ ವಿರುದ್ಧ ಗಾಯದಿಂದ ಮರಳಿದ ಶುಭಮನ್ ಗಿಲ್ ಅದ್ಭುತ ಅರ್ಧಶತಕ ಬಾರಿಸಿದರು. ಅವರು 62 ಎಸೆತಗಳಲ್ಲಿ 50 ರನ್‌ಗಳನ್ನು ಕಲೆ ಹಾಕಿ ಔಟ್ ಆದರು. ಈ ಮೂಲಕ ಅವರು ಅಡಿಲೇಡ್ ಟೆಸ್ಟ್ ಪಂದ್ಯಕ್ಕೆ ರೆಡಿ ಎಂದು ಆಸ್ಟ್ರೇಲಿಯಾ ತಂಡಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಗಿಲ್ ಅಬ್ಬರಕ್ಕೂ ಮುನ್ನ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ 45 ರನ್‌ಗಳ ಕೊಡುಗೆ ನೀಡಿದರು. ಪರ್ತ್ ಟೆಸ್ಟ್ ಪಂದ್ಯದಂತೆ ಕ್ಯಾನ್‌ಬೆರಾದಲ್ಲಿಯೂ ಜೈಸ್ವಾಲ್ ಬ್ಯಾಟಿಂಗ್ ಮಾಡಿದರು.
ಕೆಎಲ್ ರಾಹುಲ್ 27 ರನ್ ಗಳಿಸಿದರೆ, ನಾಯಕ ರೋಹಿತ್ ಶರ್ಮಾ ಕೇವಲ 3 ರನ್‌ಗೆ ಔಟಾದರು. ಜವಾಬ್ದಾರಿಯುತ ಇನ್ನಿಂಗ್ಸ್ ಆಡಿದ ನಿತೀಶ್‌ಕುಮಾರ್ ರೆಡ್ಡಿ 32 ಎಸೆತಗಳಲ್ಲಿ 42 ರನ್ ಬಾರಿಸಿ ಔಟಾದರು. ರವೀಂದ್ರ ಜಡೇಜಾ 27, ಸರ್ಫರಾಜ್ ಖಾನ್ 1 ರನ್ ಗಳಿಸಿ ವಿಕೆಟ್ ಕಳದುಕೊಂಡರು. ಕೊನೆಯಲ್ಲಿ ವಾಷಿಂಗ್ಟನ್ ಸುಂದರ್ 42 ರನ್ ಮತ್ತು ದೇವದತ್ ಪಡಿಕ್ಕಲ್ 4 ರನ್ ಗಳಿಸಿ ಅಜೇಯರಾಗಿ ಉಳಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications