India T20 Champion: 11 ವರ್ಷ, 132 ತಿಂಗಳು, 4020 ದಿನಗಳ ಬಳಿಕ ವಿಶ್ವಕಪ್ ಎತ್ತಿ ಹಿಡಿದ ಟೀಮ್ ಇಂಡಿಯಾ
ಜೂನ್ 30 ಭಾನುವಾರ, ಟಿ20 ವಿಶ್ವಕಪ್ 2024ರ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಗೆದ್ದು ಐಸಿಸಿ ಟ್ರೋಫಿಯ ಬರವನ್ನು ಕೊನೆಗೊಳಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಎರಡನೇ ಟಿ20 ವಿಶ್ವಕಪ್ ಅನ್ನು ಗೆದ್ದ ದಾಖಲೆ ಬರೆದಿದೆ.
ಫೈನಲ್ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾದಿಂದ ಗೆಲುವನ್ನು ಕಸಿದುಕೊಳ್ಳವ ಮೂಲಕ 11 ವರ್ಷ, 132 ತಿಂಗಳು ಮತ್ತು 4020 ದಿನಗಳ ನಂತರ ಐಸಿಸಿ ಟ್ರೋಫಿ ಗೆದ್ದಿದೆ. ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ 7 ರನ್‌ಗಳ ರೋಚಕ ಜಯ ದಾಖಲಿಸಿತು.
ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ತಂಡವು ಐತಿಹಾಸಿಕ ಗೆಲುವು ಸಾಧಿಸಲು ಪ್ರಮುಖ ಕೊಡುಗೆ ನೀಡಿದರು. ಆದರೆ ಕೊನೆಯಲ್ಲಿ ಸೂರ್ಯಕುಮಾರ್ ಯಾದವ್ ಅದ್ಭುತ ಕ್ಯಾಚ್ ಅನ್ನು ಹಿಡಿಯುವ ಮೂಲಕ ಟೀಮ್ ಇಂಡಿಯಾ ಚಾಂಪಿಯನ್ ಆಗಲು ಪ್ರಮುಖ ಕಾರಣನಾದರು.

ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಟೀಮ್ ಇಂಡಿಯಾ ಮೊದಲ ಓವರ್‌ನಲ್ಲಿ ಉತ್ತಮ ಆರಂಭ ಪಡೆಯಿತು. ಆದರೆ ಎರಡನೇ ಓವರ್‌ನಲ್ಲಿ ಕೇಶವ್ ಮಹಾರಾಜ್ ಅವರು, ರೋಹಿತ್ ಮತ್ತು ರಿಷಬ್ ಪಂತ್ ವಿಕೆಟ್ ಪಡೆಯುವ ಮೂಲಕ ಭಾರತೀಯ ಅಭಿಮಾನಿಗಳನ್ನು ಉಸಿರುಗಟ್ಟಿಸಿದರು.
ಆದರೆ ವಿರಾಟ್ ಕೊಹ್ಲಿ ಇನ್ನೊಂದು ತುದಿಯಿಂದ ಅಬ್ಬರ ಬ್ಯಾಟಿಂಗ್ ಮಾಡುವ ಮೂಲಕ ಟೀಮ್ ಇಂಡಿಯಾಕ್ಕೆ ಆಸರೆಯಾದರು. ವಿರಾಟ್ 59 ಎಸೆತಗಳಲ್ಲಿ 76 ರನ್ ಗಳಿಸಿ ಅತ್ಯುತ್ತಮ ಇನ್ನಿಂಗ್ಸ್ ಆಡಿದರು. ಅಕ್ಸರ್ ಪಟೇಲ್ (47) ಕೂಡ ಉತ್ತಮ ಬ್ಯಾಟಿಂಗ್ ಮಾಡುವ ಮೂಲಕ ಭಾರತ 176 ರನ್ ಕಲೆ ಹಾಕಲು ನೆರವಾದರು.
ಪಂದ್ಯಕ್ಕೆ ತಿರುವು ಕೊಟ್ಟ ಹಾರ್ದಿಕ್ ಪಾಂಡ್ಯ
ಟೀಮ್ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಎರಡು ಓವರ್ ಗಳಲ್ಲಿ ಪಂದ್ಯಕ್ಕೆ ತಿರುವು ಕೊಟ್ಟರು.
ಪಾಂಡ್ಯ ತಮ್ಮ ಮೂರನೇ ಓವರ್‌ನಲ್ಲಿ ಹೆನ್ರಿಚ್ ಕ್ಲಾಸೆನ್‌ಗೆ ಪೆವಿಲಿಯನ್ ಹಾದಿಯನ್ನು ತೋರಿಸುವ ಮೂಲಕ ಭಾರತದ ಗೆಲುವಿನ ಆಸೆ ಚಿಗುರಿಸಿದರು.
ಇದಾದ ಬಳಿಕ ಜಸ್ಪ್ರೀತ್ ಬುಮ್ರಾ ಉಳಿದ ಕೆಲಸವನ್ನು ಪೂರ್ಣಗೊಳಿಸಿದರು. ಮಾರ್ಕೊ ಜಾನ್ಸೆನ್ ಅವರ ವಿಕೆಟ್ ಪಡೆಯುವ ಮೂಲಕ ಬುಮ್ರಾ ದಕ್ಷಿಣ ಆಫ್ರಿಕಾವನ್ನು ಬಗ್ಗು ಬಡಿದರು.
.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications