Asia Cup T20 IND vs PAK: ಪಾಕ್ ವಿರುದ್ಧ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ಕೆ
ಭಾರತ ಹಾಗೂ ಪಾಕಿಸ್ತಾನ ನಡುವಣ ಹೈ ವೋಲ್ಟೇಜ್ ಪಂದ್ಯ ದುಬೈನಲ್ಲಿ ನಡೆಯಲಿದೆ. ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದಾಗಿದೆ. ಏಷ್ಯಾ ಕಪ್ ಟಿ20 ಟೂರ್ನಿಯ ಎರಡನೇ ಸೂಪರ್ 4 ಪಂದ್ಯ ಇದಾಗಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತು.
ಲೀಗ್ ಹಂತದಲ್ಲಿ ಉಭಯ ತಂಡಗಳು ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದವು. ಈ ವೇಳೆ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿ 7 ವಿಕೆಟ್‌ಗಳಿಂದ ಜಯ ಸಾಧಿಸಿತ್ತು. ಲೀಗ್ ಹಂತದಲ್ಲಿ ಆಡಿದ ಮೂರು ಪಂದ್ಯಗಳನ್ನು ಆಡಿರುವ ಟೀಮ್ ಇಂಡಿಯಾ ಅಜೇಯವಾಗಿ ಸೂಪರ್ 4 ಹಂತ ತಲುಪಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದರೆ, ಫೈನಲ್‌ಗೆ ಪ್ರವೇಶಿಸುವ ಆಸೆ ಹತ್ತಿರವಾಗುತ್ತದೆ. ಈ ಪಂದ್ಯದಲ್ಲಿ ಸ್ಟಾರ್ ಆಟಗಾರರು ಕಣಕ್ಕೆ ಇಳಿಯುತ್ತಿದ್ದು ಎಲ್ಲರ ಕಣ್ಣುಗಳು ಅವರ ಮೇಲೆ ನೆಟ್ಟಿವೆ. ಒಂದೇ ಟೂರ್ನಿಯಲ್ಲಿ ಭಾರತ ಹಾಗೂ ಪಾಕ್ ತಂಡಗಳು ಒಂದೇ ಟೂರ್ನಿಯಲ್ಲಿ ಎರಡನೇ ಬಾರಿ ಮುಖಾಮುಖಿ ಆಗುತ್ತಿವೆ.

ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿ ಜಯ ಸಾಧಿಸಿತ್ತು. ಪಂದ್ಯ ಮುಗಿದ ಬಳಿಕ ಟೀಮ್ ಇಂಡಿಯಾ ಆಟಗಾರರು ಪಾಕ್ ಆಟಗಾರರೊಂದಿಗೆ ಹ್ಯಾಂಡ್ ಶೇಕ್ ಮಾಡದೇ ಇರುವುದು ದೊಡ್ಡ ವಿವಾದ ವಾಗಿತ್ತು. ಈ ವಿವಾದದ ಬಳಿಕ ಉಭಯ ತಂಡಗಳು ಇದೇ ಮೊದಲ ಬಾರಿಗೆ ಅಂಗಳದಲ್ಲಿ ಕಾದಾಟ ನಡೆಸುತ್ತಿವೆ. ಹೀಗಾಗಿ ಕುತೂಹಲ ಮನೆ ಮಾಡಿದೆ.ಈ ಪಂದ್ಯದಲ್ಲಿ ಉಭಯ ತಂಡಗಳು ಎರಡು ಬದಲಾವಣೆ ಮಾಡಿಕೊಂಡಿವೆ. ಗಾಯಾಳು ಅಕ್ಷರ್ ಪಟೇಲ್ ಚೇತರಿಸಿಕೊಂಡಿದ್ದು ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ.
ಭಾರತ ತಂಡ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಶಿವಂ ದುಬೆ, ಕುಲ್ ದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ,
ಪಾಕ್ ತಂಡ: ಸಾಹಿಬ್ಜಾದ ಫರ್ಹಾನ್, ಸೈಮ್ ಅಯೂಬ್, ಫಖರ್ ಜಮಾನ್, ಸಲ್ಮಾನ್ ಆಗಾ, ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಮೊಹಮ್ಮದ್ ಹ್ಯಾರಿಸ್, ಶಾಹೀನ್ ಶಾ ಅಫ್ರಿದಿ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್, ಹುಸೇನ್ ತಲಾತ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications