Asia Cup 2024: ದಾಖಲೆಯ ಮೇಲೆ ಭಾರತೀಯ ಬೌಲರ್‌ಗಳ ಕಣ್ಣು
ಟೀಮ್ ಇಂಡಿಯಾ ಹಾಗೂ ಓಮನ್ ನಡುವಣ ಏಷ್ಯಾ ಕಪ್ ಟಿ20 ಕ್ರಿಕೆಟ್‌ನ ಲೀಗ್ ಸ್ಟೇಜ್‌ನ ಕೊನೆಯ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಎಲ್ಲರ ಕಣ್ಣುಗಳು ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಜಸ್ಪ್ರೀತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ಅವರ ಮೇಲೆ ನೆಟ್ಟಿರಲಿದೆ. ಈ ಇಬ್ಬರೂ ಸ್ಟಾರ್ ಆಟಗಾರರು ದೊಡ್ಡ ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ. ಈ ಇಬ್ಬರೂ ಆಟಗಾರರು ಓಮನ್ ವಿರುದ್ಧ ಸ್ಥಿರ ಪ್ರದರ್ಶನ ನೀಡಿದ್ದೇ ಆದಲ್ಲಿ ದಾಖಲೆ ಬರೆಯಬಹುದಾಗಿದೆ.
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಅರ್ಷದೀಪ್ ಸಿಂಗ್ ಅವರ ಹೆಸರಿನಲ್ಲಿದೆ. ಒಂದು ವೇಳೆ ಇವರು ಈ ಪಂದ್ಯದಲ್ಲಿ ಆಡುವ ಅವಕಾಶವನ್ನು ಪಡೆದಲ್ಲಿ ದೊಡ್ಡ ದಾಖಲೆಯನ್ನು ಬರೆಯುವ ಕನಸಿನಲ್ಲಿದ್ದಾರೆ. ಇವರು ಈಗಾಗಲೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 99 ವಿಕೆಟ್ ಪಡೆದಿದ್ದಾರೆ. ಈ ಮೂಲಕ ಇವರು ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ. ಓಮನ್ ವಿರುದ್ಧ ಒಂದು ವಿಕೆಟ್ ಪಡೆದಿದ್ದೇ ಆದಲ್ಲಿ, ಚುಟುಕು ಕ್ರಿಕೆಟ್‌ನಲ್ಲಿ ನೂರು ವಿಕೆಟ್‌ಗಳನ್ನು ಪಡೆದ ಮೊದಲ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.

ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಸಹ ದೊಡ್ಡ ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ. ಇವರು ಓಮನ್ ವಿರುದ್ಧ 2 ವಿಕೆಟ್ ಪಡೆಯುವಲ್ಲಿ ಸಫಲರಾದರೆ, ಸ್ಪಿನ್ ಬೌಲರ್ ಯುಜುವೇಂದ್ರ ಚಹಾಲ್ ಅವರ ದಾಖಲೆಯನ್ನು ಅಳಿಸಬಲ್ಲರು. ಯುಜುವೇಂದ್ರ ಚಹಾಲ್ ಟಿ20 ಕ್ರಿಕೆಟ್‌ನಲ್ಲಿ 96 ವಿಕೆಟ್ ಪಡೆದಿದ್ದರೆ, ಹಾರ್ದಿಕ್ ಪಾಂಡ್ಯ 95 ವಿಕೆಟ್ ಕಬಳಿಸಿದ್ದಾರೆ. ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ದಾಖಲೆ ಬರೆಯುತ್ತಾರಾ ಕಾದು ನೋಡಬೇಕಿದೆ.
ದಾಖಲೆಯ ಮೇಲೆ ಬುಮ್ರಾ ಕಣ್ಣು
ಏಷ್ಯಾ ಕಪ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಬೌಲರ್‌ಗಳ ಪಟ್ಟಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರಿಗೂ ಸ್ಥಾನ. ಇವರು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಬಿಗುವಿನ ದಾಳಿ ನಡೆಸಿ, 2 ವಿಕೆಟ್ ಪಡೆದಿದ್ದರು. ಓಮನ್ ವಿರುದ್ಧದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಇವರು 3 ವಿಕೆಟ್ ಪಡೆದಲ್ಲಿ ಹಾರ್ದಿಕ್ ಪಾಂಡ್ಯ ಅವರ ದಾಖಲೆಯ ಸಮಕ್ಕೆ ನಿಲ್ಲುತ್ತಾರೆ. 4 ವಿಕೆಟ್ ಪಡೆದಿದ್ದೇ ಆದಲ್ಲಿ ಅವರ ದಾಖಲೆಯನ್ನು ಮೀರಿ ನಿಲ್ಲಲಿದ್ದಾರೆ. ಬುಮ್ರಾ ಆಡಿದ 72 ಟಿ20 ಪಂದ್ಯಗಳಲ್ಲಿ 92 ವಿಕೆಟ್ ಕಬಳಿಸಿದ್ದಾರೆ.
ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ವಿಕೆಟ್ ಸಾಧಕರು
ಅರ್ಷದೀಪ್ ಸಿಂಗ್, 63 ಪಂದ್ಯ, 99 ವಿಕೆಟ್
ಯುಜುವೇಂದ್ರ ಚಹಾಲ್, 80 ಪಂದ್ಯ, 96 ವಿಕೆಟ್
ಹಾರ್ದಿಕ್ ಪಾಂಡ್ಯ, 116 ಪಂದ್ಯ, 95 ವಿಕೆಟ್
ಜಸ್ಪ್ರೀತ್ ಬುಮ್ರಾ, 72 ಪಂದ್ಯ, 92 ವಿಕೆಟ್
ಭುವನೇಶ್ವರ್ ಕುಮಾರ್, 87 ಪಂದ್ಯ, 90 ವಿಕೆಟ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications