Asia Cup T20: ಟೀಮ್ ಇಂಡಿಯಾದ ಹೆಸರಿನಲ್ಲಿದೆ ದೊಡ್ಡ ದಾಖಲೆ: ಈ ಬಾರಿ ಯಾರು ಅಳಿಸುತ್ತಾರೆ?
ಸೆಪ್ಟಂಬರ್ 9ರಿಂದ ಯುಎಇನಲ್ಲಿ ಏಷ್ಯಾ ಕಪ್ ಟಿ20 ಟೂರ್ನಿ ಆರಂಭವಾಗಲಿದೆ. ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಈ ಬಾರಿ ಟಿ20 ಫಾರ್ಮೆಟ್ ನಲ್ಲಿ ಆಡಿಸಲಾಗುತ್ತಿದೆ. ಈ ಟೂರ್ನಿಯಲ್ಲಿ ಯಾವುದೇ ತಂಡ ಮಾಡದ ಸಾಧನೆಯನ್ನು ಟೀಮ್ ಇಂಡಿಯಾ ಮಾಡಿದೆ. ಈ ಬಾರಿಯ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಕ್ಲಬ್‌ಗೆ ಯಾವ ತಂಡವಾದ್ರೂ ಸೇರುತ್ತದಾ ಎಂಬುದು ಕುತೂಹಲ ಮೂಡಿಸಿದೆ. ಹಾಗಿದ್ರೆ ಟೀಮ್ ಇಂಡಿಯಾ ನಿರ್ಮಿಸಿರುವ ದಾಖಲೆ ಏನು ಎಂಬ ಬಗ್ಗೆ ವರದಿ ಇಲ್ಲಿದೆ.
ಟೀಮ್ ಇಂಡಿಯಾ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ 200ಕ್ಕೂ ಹೆಚ್ಚು ರನ್ ಬಾರಿಸಿದ ಏಕೈಕ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೀಗಾಗಿ ಇದು ಒಂದು ದಾಖಲೆ ಆಗಿದೆ. ಈ ಬಾರಿ ಈ ವಿಶೇಷ ಕ್ಲಬ್‌ಗೆ ಬೇರೆ ತಂಡಗಳು ಸ್ಥಾನ ಪಡೆಯುತ್ತವಾ ಎಂಬ ಪ್ರಶ್ನೆಗಳು ಉದ್ಭವಿಸಿದೆ.

2022ರ ಏಷ್ಯಾ ಕಪ್ ದುಬೈನಲ್ಲಿ ಆಡಯೋಜಿಸಲಾಗಿತ್ತು. ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ, ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ಈ ಸಾಧನೆ ಮಾಡಿತ್ತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 212 ರನ್ ಸೇರಿಸಿತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಶತಕ ಬಾರಿಸಿದ್ದರು. ಏಷ್ಯಾ ಕಪ್ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತ 200ಕ್ಕೂ ಹೆಚ್ಚು ರನ್ ಕಲೆ ಹಾಕಿದ ದಾಖಲೆ ಬರೆದಿತ್ತು.
ಪಾಕ್‌ಗೆ ಎರಡನೇ ಸ್ಥಾನ
ಏಷ್ಯಾ ಕಪ್‌ನಲ್ಲಿ ಗರಿಷ್ಠ ರನ್ ಕಲೆ ಹಾಕಿದ ಎರಡನೇ ತಂಡ ಎಂಬ ಹೆಗ್ಗಳಿಕೆ ಪಾಕಿಸ್ತಾನ ತಂಡದ ಪಾತ್ರವಾಗಿದೆ. 2022ರಲ್ಲಿ ಶಾರ್ಜಾದಲ್ಲಿ ನಡೆದಿದ್ದ ಹಾಂಗ್ ಕಾಂಗ್ ವಿರುದ್ಧ ಪಾಕಿಸ್ತಾನ ಎರಡು ವಿಕೆಟ್‌ಗಳ ನಷ್ಟಕ್ಕೆ 193 ರನ್‌ಗಳನ್ನು ಗಳಿಸಿದೆ. ಇನ್ನು ಏಷ್ಯಾ ಕಪ್ ಇತಿಹಾಸದಲ್ಲಿ ಕೇವಲ 2ರಲ್ಲಿ ಮಾತ್ರ ನಡೆದಿದೆ. ಇನ್ನು 2022ರ ಏಷ್ಯಾ ಕಪ್ ಟೂರ್ನಿಯಲ್ಲಿ ಗರಿಷ್ಠ ರನ್‌ಗಳ ಪಟ್ಟಿಯಲ್ಲಿ ಈ ಟೂರ್ನಿ ಸ್ಥಾನ ಪಡೆದಿದೆ. ಇನ್ನು 2016ರಲ್ಲಿ ಮೊದಲ ಬಾರಿಗೆ ಏಷ್ಯಾ ಕಪ್ ನಡೆದಾಗ ಓಮನ್ ಅತ್ಯಧಿಕ ರನ್ ದಾಖಲಿಸಿದ ಹಿರಿಮೆ ತನ್ನದಾಗಿಸಿಕೊಂಡಿತ್ತು. ಈ ಪಂದ್ಯದಲ್ಲಿ ಓಮನ್ 5 ವಿಕೆಟ್ ನಷ್ಟಕ್ಕೆ 180 ರನ್ ಸೇರಿಸಿತ್ತು.

ಭಾರತ ಈ ಬಾರಿಯ ಏಷ್ಯಾಕಪ್‌ಗೆ ಆತಿಥ್ಯ ನೀಡಿತ್ತು. ಆದರೆ ಪಾಕಿಸ್ತಾನ ಭಾರತಕ್ಕೆ ಪ್ರವಾಸ ಬೆಳೆಸದೇ ಇರುವುದರಿಂದ ಈ ಬಾರಿ ಟೂರ್ನಿ ಯುಎಇನಲ್ಲಿ ನಡೆಯಲಿದೆ. 2022ರಿಂದ ಕ್ರಿಕೆಟ್ ಆಡುವ ವಿಧಾನ ಬದಲಾಗಿದೆ. ಅಲ್ಲದೆ ಆಕ್ರಮಣಕಾರಿ ಆಟ ಮನೆ ಮಾಡಿದೆ. ಈ ಬಾರಿಯ ಏಷ್ಯಾ ಕಪ್‌ನಲ್ಲಿ ಯಾವೆಲ್ಲಾ ಹೊಸ ದಾಖಲೆಗಳು ನಿರ್ಮಾಣವಾಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ. ಟೀಮ್ ಇಂಡಿಯಾ ಈ ಟೂರ್ನಿಯಲ್ಲಿ ಸೆ.10 ರಂದು ತನ್ನ ಅಭಿಯಾನ ಆರಂಭಿಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications