Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ICC ODI Rankings: ಎರಡನೇ ಸ್ಥಾನಕ್ಕೆ ಬಡ್ತಿ ಪಡೆದ ರೋಹಿತ್‌ ಶರ್ಮಾ: ಟಾಪ್‌ 5ರಲ್ಲಿ ಮೂವರು ಭಾರತೀಯರು

ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಐಪಿಎಲ್‌ ಬಳಿಕ ಮಂಗಳವಾರ ಮತ್ತೆ ಅಭ್ಯಾಸ ಆರಂಭಿಸಿದ್ದಾರೆ. ಈ ವೇಳೆ ಬುಧವಾರ ರೋಹಿತ್‌ ಶರ್ಮಾ ಮುಖದಲ್ಲಿ ಮಂದಹಾಸ ಮೂಡಿಸುವ ಸುದ್ದಿಯೊಂದು ಬಂದಿದೆ. ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಇವರು ಒಂದು ಸ್ಥಾನ ಜಿಗಿತ ಕಂಡಿದ್ದು, ಸದ್ಯ ಎರಡನೇ ಶ್ರೇಯಾಂಕವನ್ನು ತಲುಪಿದ್ದಾರೆ. ಪಾಕಿಸ್ತಾನದ ಸ್ಟಾರ್ ಆಟಗಾರ ಬಾಬರ್ ಅಜಮ್‌ ಲಯ ಕಂಡುಕೊಳ್ಳುವಲ್ಲಿ ಪರದಾಟ ನಡೆಸುತ್ತಿದ್ದು, ಒಂದು ಸ್ಥಾನ ಕುಸಿತ ಕಂಡಿದ್ದಾರೆ.

ರೋಹಿತ್ ಶರ್ಮಾ ಕೊನೆಯ ಬಾರಿಗೆ ಏಕದಿನ ಫಾರ್ಮೆಟ್‌ನಲ್ಲಿ ಭಾರತದ ಪರ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ನಲ್ಲಿ ಕಾಣಿಸಿಕೊಂಡಿದ್ದರು. ಈ ಪಂದ್ಯದಲ್ಲಿ ರೋಹಿತ್‌ ನ್ಯೂಜಿಲೆಂಡ್‌ ವಿರುದ್ಧ 76 ರನ್‌ಗಳ ಇನಿಂಗ್ಸ್‌ ಕಟ್ಟಿ ತಂಡಕ್ಕೆ ನೆರವಾಗಿದ್ದರು. ಆ ಬಳಿಕ ಇವರು ಒಂದೇ ಒಂದು ಏಕದಿನ ಪಂದ್ಯವನ್ನು ಆಡದೇ ಇದ್ದರೂ, ಬಾಬರ್‌ ಅಜಮ್‌ ಅವರ ಕಳಪೆ ಫಾರ್ಮ್‌ ಲಾಭ ರೋಹಿತ್‌ ಅವರಿಗೆ ಸಿಕ್ಕಿದೆ. ಸದ್ಯ ರೋಹಿತ್‌ 756 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

Team India s Rohit Sharma Climbs to 2nd Spot in ICC ODI Rankings Displacing Babar Azam

ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್‌ ಶುಭಮನ್‌ ಗಿಲ್‌ ಈ ಫಾರ್ಮೆಟ್‌ನಲ್ಲಿ ನಂಬರ್ 1 ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಇವರು 784 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದು, ಮೊದಲ ಸ್ಥಾನದಲ್ಲಿದ್ದಾರೆ. ಇನ್ನು ಪಾಕಿಸ್ತಾನದ ಬಾಬರ್ ಅಜಮ್ 751 ಅಂಕಗಳೊಂದಿಗೆ ಎರಡನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್‌ ವಿರಾಟ್ ಕೊಹ್ಲಿ 736 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಾಲ್ಕನೇ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ.

ಟಾಪ್‌ 5ರಲ್ಲಿ ಮೂವರು ಭಾರತೀಯರು

ಐಸಿಸಿ ಹೊರಡಿಸಿರುವ ಶ್ರೇಯಾಂಕ ಪಟ್ಟಿಯಲ್ಲಿ ಭಾರತೀಯ ಆಟಗಾರರು ಅಬ್ಬರಿಸಿದ್ದಾರೆ. ಅಗ್ರ 5 ಸ್ಥಾನಗಳಲ್ಲಿ ಮೂರು ಸ್ಥಾನಗಳನ್ನು ಭಾರತೀಯ ಆಟಗಾರರೇ ಪಡೆದಿದ್ದಾರೆ. ಶುಭಮನ್‌ ಗಿಲ್‌ ಮೊದಲ, ರೋಹಿತ್‌ ಶರ್ಮಾ ಎರಡನೇ ಸ್ಥಾನ ಪಡೆದರೆ, ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ.

Team India s Rohit Sharma Climbs to 2nd Spot in ICC ODI Rankings Displacing Babar Azam

ಟೀಮ್ ಇಂಡಿಯಾದ ಭರವಸೆಯ ಬ್ಯಾಟರ್‌ ಶ್ರೇಯಸ್ ಅಯ್ಯರ್ ಸಹ ಟಾಪ್‌ 10ರಲ್ಲಿ ಕಾಣಿಸಿಕೊಂಡಿರುವ ಆಟಗಾರು. ಇವರು 704 ರೇಟಿಂಗ್ ಪಾಯಿಂಟ್‌ಗಳಿಂದಿಗೆ 8ನೇ ಸ್ಥಾನದಲ್ಲಿದ್ದಾರೆ. ಇನ್ನು ಕರ್ನಾಟಕದ ಸ್ಟಾರ್ ಆಟಗಾರ ಕೆಎಲ್ ರಾಹುಲ್ 638 ಅಂಕಗಳೊಂದಿಗೆ 15ನೇ ಸ್ಥಾನವನ್ನು ಹೊಂದಿದ್ದಾರೆ.

ಆಸ್ಟ್ರೇಲಿಯಾ ಪ್ರವಾಸದ ಮೇಲೆ ಕಣ್ಣು

ರೋಹಿತ್‌ ಶರ್ಮಾ ಈಗ ಆಸ್ಟ್ರೇಲಿಯಾ ಪ್ರವಾಸವನ್ನು ಎದುರು ನೋಡ್ತಾ ಇದ್ದಾರೆ. ಈ ಪ್ರವಾಸದಲ್ಲಿ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಏಕದಿನ ಸರಣಿಯನ್ನು ಆಡಲಿವೆ. ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್‌ನಲ್ಲಿ ಆಡುವ ಕನಸು ಕಾಣುತ್ತಿದ್ದಾರೆ. ಆದರೆ ಈ ವೇಳೆಗೆ ಅವರಿಗೆ 40 ವರ್ಷ ಆಗಿರುತ್ತದೆ. ಆಗ ರೋಹಿತ್ ಅವರಿಗೆ ತಂಡದಲ್ಲಿ ಸ್ಥಾನ ಲಭಿಸುತ್ತದೋ ಇಲ್ಲವೋ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ.

Story first published: Wednesday, August 13, 2025, 17:29 [IST]
Other articles published on Aug 13, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+