Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ICC World Cup 2023: ವಿಶ್ವಕಪ್ ನಲ್ಲಿ ಭಾರತದ ಪರ ಹೆಚ್ಚು ವಿಕೆಟ್‌ ಪಡೆದ ಟಾಪ್ 4 ಬೌಲರ್ಸ್‌, ಅದರಲ್ಲಿ ಇಬ್ಬರು ಕನ್ನಡಿಗರು

ಭಾರತದಲ್ಲಿ ಏಕದಿನ ವಿಶ್ವಕಪ್‌ ಆಯೋಜಿಸಲಾಗುತ್ತಿದೆ. ಈ ಬಾರಿ ಟೀಮ್ ಇಂಡಿಯಾ ಕಪ್‌ ಗೆ ಮುತ್ತಿಡುವ ಹಾಟ್ ಫೆವರೀಟ್‌ ತಂಡ ಎಂದೇ ಹೇಳಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಟೀಮ್ ಇಂಡಿಯಾ ನೀಡಿದ ಪ್ರದರ್ಶನವೇ ಇದಕ್ಕೆ ಸಾಕ್ಷಿ. ತವರಿನ ಅಭಿಮಾನಿಗಳ ಸಮ್ಮುಖದಲ್ಲಿ ಎರಡನೇ ಬಾರಿ ವಿಶ್ವಕಪ್‌ ವಿಜೇತರಾಗುವ ಕನಸು ಬ್ಲ್ಯೂ ಬಾಯ್ಸ್‌ ದ್ದಾಗಿದೆ.

ಇಂಗ್ಲೆಂಡ್‌ ನಲ್ಲಿ ನಡೆದಿದ್ದ 1983ರ ವಿಶ್ವಕಪ್‌ ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿತ್ತು. 2011ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ಎರಡನೇ ಬಾರಿಗೆ ವಿಶ್ವಕಪ್ ಗೆದ್ದಿತ್ತು. ಈ ಮೂಲಕ ಟೀಮ್ ಇಂಡಿಯಾ ಎರಡು ಬಾರಿ ಏಕದಿನ ವಿಶ್ವಕಪ್ ಗೆದ್ದುಕೊಂಡಿದೆ. ಟೀಮ್ ಇಂಡಿಯಾ ಮತ್ತೊಮ್ಮೆ ವಿಶ್ವಕಪ್‌ ಗೆ ಮೂರನೇ ಬಾರಿ ಮುತ್ತಿಡುವ ಕನಸು ಕಾಣುತ್ತಿದೆ.

team-indias-top-four-bowlers

ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ವಿಶ್ವಕಪ್ ಪ್ರವೇಶಿಸಲಿದೆ. ಭಾರತದ ಬ್ಯಾಟ್ಸ್‌ಮನ್‌ಗಳ ಹೊರತಾಗಿ ತಂಡದ ಬೌಲರ್‌ಗಳ ಪ್ರದರ್ಶನವೂ ಬಹು ಮುಖ್ಯ. ಒಟ್ಟಾರೆ ವಿಶ್ವಕಪ್‌ ನಲ್ಲಿ ಟೀಮ್ ಇಂಡಿಯಾ ಪರ ವಿಕೆಟ್‌ ಬೇಟೆಯಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಳ್ಳುವ ಬೌಲರ್‌ ಗಳ ಪಟ್ಟಿ ಇಲ್ಲಿದೆ.

ಅಗ್ರ ಸ್ಥಾನದಲ್ಲಿ ಕನ್ನಡಿಗ ಹಾಗೂ ಜಹೀರ್‌

ಭಾರತ ಪರ ವಿಶ್ವಕಪ್ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಜಹೀರ್ ಖಾನ್ ಮೊದಲ ಸ್ಥಾನದಲ್ಲಿದ್ದಾರೆ. ಜಹೀರ್ ಖಾನ್ 23 ವಿಶ್ವಕಪ್ ಪಂದ್ಯಗಳಲ್ಲಿ 44 ವಿಕೆಟ್ ಪಡೆದಿದ್ದಾರೆ. ಕನ್ನಡಿಗ ಜಾವಗಲ್ ಶ್ರೀನಾಥ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ಜಾವಗಲ್ ಶ್ರೀನಾಥ್ 34 ಪಂದ್ಯಗಳಲ್ಲಿ 44 ವಿಕೆಟ್‌ ಪಡೆದಿದ್ದಾರೆ. ಇದರ ನಂತರ ವೇಗದ ಬೌಲರ್ ಮೊಹಮ್ಮದ್ ಶಮಿ ಕಾಣಿಸಿಕೊಳ್ಳುತ್ತಾರೆ. ಮೊಹಮ್ಮದ್ ಶಮಿ ಭಾರತ ಪರ 11 ವಿಶ್ವಕಪ್ ಪಂದ್ಯಗಳಲ್ಲಿ 31 ವಿಕೆಟ್ ಪಡೆದಿದ್ದಾರೆ.

ಅನಿಲ್ ಕುಂಬ್ಳೆ 18 ವಿಶ್ವಕಪ್ ಪಂದ್ಯಗಳಲ್ಲಿ 31 ವಿಕೆಟ್

ಈ ಮೂಲಕ ಭಾರತ ಪರ ವಿಶ್ವಕಪ್ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್-3 ಬೌಲರ್‌ಗಳ ಪಟ್ಟಿಯಲ್ಲಿ ಜಹೀರ್ ಖಾನ್, ಜಾವಗಲ್ ಶ್ರೀನಾಥ್ ಮತ್ತು ಮೊಹಮ್ಮದ್ ಶಮಿ ಇದ್ದಾರೆ. ಭಾರತದ ಸ್ಪಿನ್ನರ್ ಅನಿಲ್ ಕುಂಬ್ಳೆ ಈ ಪಟ್ಟಿಯಲ್ಲಿದ್ದಾರೆ.

ಅನಿಲ್ ಕುಂಬ್ಳೆ ಅವರು 18 ವಿಶ್ವಕಪ್ ಪಂದ್ಯಗಳಲ್ಲಿ 31 ಎದುರಾಳಿ ಬ್ಯಾಟ್ಸ್‌ಮನ್‌ಗಳಿಗೆ ಪೆವಿಲಿಯನ್ ಹಾದಿ ತೋರಿಸಿದ್ದಾರೆ. ಭಾರತದ ಮಾಜಿ ನಾಯಕ ಕಪಿಲ್ ದೇವ್ ಅವರ ಹೆಸರು ಸಹ ಈ ಪಟ್ಟಿಯಲ್ಲಿದೆ. ಕಪಿಲ್ ದೇವ್ 26 ಪಂದ್ಯಗಳಲ್ಲಿ 28 ವಿಕೆಟ್ ಪಡೆದಿದ್ದಾರೆ.

Story first published: Wednesday, October 4, 2023, 20:26 [IST]
Other articles published on Oct 4, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+