ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿದಾಯದ ಪಂದ್ಯವಾಡುತ್ತಿರುವ ಜೂಲನ್ ಗೋಸ್ವಾಮಿ: ಭಾವುಕರಾದ ನಾಯಕಿ ಹರ್ಮನ್‌ಪ್ರೀತ್ ಕೌರ್: ವಿಡಿಯೋ

Tears fill Harmanpreet Kaurs face as Jhulan Goswami plays in her final game at Lords

ಇಂಗ್ಲೆಂಡ್ ಮಹಿಳೆಯರ ವಿರುದ್ಧ ಭಾರತದ ಮಹಿಳೆಯರ ಏಕದಿನ ಸರಣಿಯ ಅಂತಿಮ ಪಂದ್ಯ ಇಂದು ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದ ಮೂಲಕ ಭಾರತದ ಹಿರಿಯ ವೇಗದ ಬೌಲರ್ ಜೂಲನ್ ಗೋಸ್ವಾಮಿ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನಕ್ಕೆ ವಿದಾಯವನ್ನು ಹೇಳಿತ್ತಿದ್ದಾರೆ. ಹೀಗಾಗಿ ಈ ಪಂದ್ಯದ ಆರಂಭಕ್ಕೂ ಮುನ್ನ ಜೂಲನ್ ಗೋಸ್ವಾಮಿ ಅವರನ್ನು ಮೈದಾನದಲ್ಲಿ ಗೌರವಿಸಲಾಗಿದೆ. ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ನಾಯಕಿ ಹರ್ಮನ್‌ಪ್ರೀತ್ ಕೌರ್ ಭಾವುಕವಾಗಿ ಕಣ್ಣೀರು ಸುರಿಸಿದ್ದಾರೆ.

39ರ ಹರೆಯದ ಜೂಲನ್ ಗೋಸ್ವಾಮಿ ಭಾರತದ ಪರವಾಗಿ ಸುದೀರ್ಘ ಕಾಲ ಆಡಿದ ಅನುಭವ ಹೊಂದಿದ್ದು ಲಾರ್ಡ್ಸ್ ಮೈದಾನದಲ್ಲಿ ತಮ್ಮ ವೃತ್ತಿ ಜೀವನಕ್ಕೆ ವಿದಾಯ ಹೇಳುತ್ತಿದ್ದಾರೆ. ಈ ಸಂದರ್ಭದಲ್ಲಿ ವಿಶೇಷ ಸ್ಮರಣಿಕೆಯನ್ನು ನೀಡಿ ಜೂಲನ್ ಗೋಸ್ವಾಮಿಯನ್ನು ಗೌರವಿಸಲಾಯಿತು. ಈ ಕ್ಷಣದಲ್ಲಿ ನಾಯಕಿ ಹರ್ಮನ್‌ಪ್ರೀತ್ ಕೌರ್ ಭಾವುಕರಾಗಿದ್ದಾರೆ. 32ರ ಹರೆಯದ ಹರ್ಮನ್‌ಪ್ರೀತ್ ಜೂಲನ್ ಗೋಸ್ವಾಮಿ ನಾಯಕತ್ವದಲ್ಲಿಯೇ 2009ರಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

ಅಂತಿಮ ಪಂದ್ಯದ ಬಳಿಕ ಕಣ್ಣೀರಿಟ್ಟ ಟೆನಿಸ್ ಲೆಜೆಂಡ್ ರೋಜರ್ ಫೆಡರರ್: ಗೆಳೆಯನನ್ನು ಬೀಳ್ಕೊಟ್ಟ ರಾಫಾಅಂತಿಮ ಪಂದ್ಯದ ಬಳಿಕ ಕಣ್ಣೀರಿಟ್ಟ ಟೆನಿಸ್ ಲೆಜೆಂಡ್ ರೋಜರ್ ಫೆಡರರ್: ಗೆಳೆಯನನ್ನು ಬೀಳ್ಕೊಟ್ಟ ರಾಫಾ

ಮಿಥಾಲಿ ರಾಜ್ ಬಳಿಕ ಮತ್ತೋರ್ವ ದಿಗ್ಗಜ ಆಟಗಾರ್ತಿಯ ವಿದಾಯ

ಮಿಥಾಲಿ ರಾಜ್ ಬಳಿಕ ಮತ್ತೋರ್ವ ದಿಗ್ಗಜ ಆಟಗಾರ್ತಿಯ ವಿದಾಯ

ಕಳೆದ ಮಾರ್ಚ್‌ನಲ್ಲಿ ನ್ಯೂಜಿಲೆಂಡ್‌ನಲ್ಲಿ ನಡೆದ ಏಕದಿನ ಮಾದರಿಯ ವಿಶ್ವಕಪ್‌ನ ನಂತರ ಜೂಲನ್ ಗೋಸ್ವಾಮಿ ಯಾವುದೇ ಸರಣಿಯಲ್ಲಿ ಭಾಗಿಯಾಗಿರಲಿಲ್ಲ. ಆದರೆ ಬಿಸಿಸಿಐ ಆಯ್ಕೆ ಸಮಿತಿಯು ಇಂಗ್ಲೆಂಡ್ ಪ್ರವಾಸಕ್ಕೆ ಜೂಲನ್ ಅವರನ್ನು ಆಯ್ಕೆ ಮಾಡಿದ ಬಳಿಕ ಜೂಲನ್ ಗೋಸ್ವಾಮಿ ಈ ಸರಣಿಯ ನಂತರ ನಿವೃತ್ತಿ ಘೋಷಣೆ ಮಾಡಲಿದ್ದಾರೆ ಎಂದು ಸುದ್ದಿಯಾಗಿತ್ತು. ನಂತರ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಇತ್ತೀಚೆಗೆ ಜೂಲನ್ ಗೋಸ್ವಾಮಿ ನಿವೃತ್ತಿ ವಿಚಾರವನ್ನು ಬಹಿರಂಗಪಡಿಸಿದ್ದರು.

ಮಹಿಳಾ ಕ್ರಿಕೆಟ್‌ನಲ್ಲಿ ಅತ್ಯುತ್ತಮ ದಾಖಲೆಯನ್ನು ಹೊಂದಿರುವ ಜೂಲನ್ ಗೋಸ್ವಾಮಿ ಎಲ್ಲಾ ಮಾದರಿಯಲ್ಲಿಯೂ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ್ತಿಯಾಗಿ ನಿವೃತ್ತಿಯಾಗಲಿದ್ದಾರೆ. ಮೂರು ಮಾದರಿಗಳಲ್ಲಿ ಒಟ್ಟು ಸೇರಿಸಿದರೆ ಗೋಸ್ವಾಮಿ 352 ವಿಕೆಟ್ ಪಡೆದುಕೊಂಡಿದ್ದು ಈ ಸಾಧನೆ ಮಾಡಿದ್ದಾರೆ. ಇನ್ನು ಈ ವರ್ಷಾರಂಭದಲ್ಲಿ ಭಾರತದ ಮಾಜಿ ನಾಯಕಿ ಹಾಗೂ ಜೂಲನ್ ಗೋಸ್ವಾಮಿ ಅವರ ಸುದೀರ್ಘ ಕಾಲದ ಸಹಪಾಠಿ ಮಿಥಾಲಿ ರಾಜ್ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಸಂಕಷ್ಟದಲ್ಲಿ ಟೀಮ್ ಇಂಡಿಯಾ

ಸಂಕಷ್ಟದಲ್ಲಿ ಟೀಮ್ ಇಂಡಿಯಾ

ಇನ್ನು ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್‌ಗೆ ಇಳಿದಿದೆ. ಆದರೆ ಭಾರತದ ಬ್ಯಾಟಿಂಗ್ ವಿಭಾಗ ಲಾರ್ಡ್ಸ್ ಮೈದಾನದಲ್ಲಿ ಬ್ಯಾಟಿಂಗ್ ನಡೆಸಲು ಪರದಾಡಿದೆ. ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಹೊರತುಪಡಿಸಿ ಉಳಿದ ಆಟಗಾರ್ತಿಯರಿಂದ ಉತ್ತಮ ಪ್ರದರ್ಶನ ಬಾರದ ಕಾರಣ ಸವಾಲಿನ ಮೊತ್ತ ಪೇರಿಸುವುದು ಅಸಾಧ್ಯ ಎಂಬಂಥಾ ಪರಿಸ್ಥಿತಿಯಲ್ಲಿದೆ. ಸ್ಮೃತಿ ಮಂಧಾನ ಈ ಪಂದ್ಯದಲ್ಲಿ ಜವಾಬ್ಧಾರಿಯುತ ಪ್ರದರ್ಶನ ನೀಡಿದ್ದು ಅರ್ಧ ಶತಕ ಸಿಡಿಸಿದ್ದಾರೆ.

ಸರಣಿ ಗೆದ್ದಿರುವ ಭಾರತ: ಇನ್ನು ಇಂಗ್ಲೆಂಡ್ ಮಹಿಳೆಯರ ವಿರುದ್ಧದ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿಯೂ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿದೆ. ಈ ಮೂಲಕ ಸರಣಿಯನ್ನು ಈಗಾಗಲೇ ತನ್ನ ವಶಕ್ಕೆ ಪಡೆದುಕೊಂಡಿದ್ದು ಅಂತಿಮ ಪಂದ್ಯವನ್ನು ಕುಡ ಗೆದ್ದು ಸರಣಿಯನ್ನು ವೈಟ್‌ವಾಶ್ ಮೂಲಕ ವಶಕ್ಕೆ ಪಡೆಯುವ ನಿರೀಕ್ಷೆ ಮೂಡಿಸಿತ್ತು.

ಆಡುವ ಬಳಗ ಹೀಗಿದೆ

ಆಡುವ ಬಳಗ ಹೀಗಿದೆ

ಇಂಗ್ಲೆಂಡ್ ಆಡುವ ಬಳಗ: ಟಮ್ಮಿ ಬ್ಯೂಮಾಂಟ್, ಎಮ್ಮಾ ಲ್ಯಾಂಬ್, ಸೋಫಿಯಾ ಡಂಕ್ಲೆ, ಆಲಿಸ್ ಕ್ಯಾಪ್ಸೆ, ಡೇನಿಯಲ್ ವ್ಯಾಟ್, ಆಮಿ ಜೋನ್ಸ್ (ನಾಯಕಿ & ವಿಕೆಟ್ ಕೀಪರ್), ಫ್ರೇಯಾ ಕೆಂಪ್, ಸೋಫಿ ಎಕ್ಲೆಸ್ಟೋನ್, ಷಾರ್ಲೆಟ್ ಡೀನ್, ಕೇಟ್ ಕ್ರಾಸ್, ಫ್ರೇಯಾ ಡೇವಿಸ್
ಬೆಂಚ್: ಲಾರೆನ್ ಬೆಲ್, ಇಸ್ಸಿ ವಾಂಗ್, ಮಾಯಾ ಬೌಚಿಯರ್, ಆಲಿಸ್ ಡೇವಿಡ್ಸನ್ ರಿಚರ್ಡ್ಸ್

ಭಾರತ ಆಡುವ ಬಳಗ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಹರ್ಮನ್‌ಪ್ರೀತ್ ಕೌರ್ (ನಾಯಕಿ), ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ದಯಾಲನ್ ಹೇಮಲತಾ, ಜೂಲನ್ ಗೋಸ್ವಾಮಿ, ರೇಣುಕಾ ಸಿಂಗ್, ರಾಜೇಶ್ವರಿ ಗಾಯಕ್ವಾಡ್
ಬೆಂಚ್: ಸ್ನೇಹ ರಾಣಾ, ಸಬ್ಬಿನೇನಿ ಮೇಘನಾ, ಮೇಘನಾ ಸಿಂಗ್, ಜೆಮಿಮಾ ರಾಡ್ರಿಗಸ್, ತಾನಿಯಾ ಭಾಟಿಯಾ, ಸಿಮ್ರಾನ್ ಬಹದ್ದೂರ್

Story first published: Saturday, September 24, 2022, 18:00 [IST]
Other articles published on Sep 24, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X