Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Terrorist threat: ಚಾಂಪಿಯನ್ಸ್ ಟ್ರೋಫಿ ಮೇಲೆ ಭಯೋತ್ಪಾದಕರ ಕರಿನೆರಳು; ಪ್ಲಾನ್ ಕೇಳಿದ್ರೆ ಶಾಕ್!

ಪಾಕಿಸ್ತಾನದಲ್ಲಿ ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿಯ ಸಂಭ್ರಮಾಚರಣೆ ಜೋರಾಗಿದೆ. ಫೆಬ್ರವರಿ 19 ರಿಂದ ಪ್ರಾರಂಭವಾಗಿರುವ ಈ ಮೆಗಾ ಟೂರ್ನಿಯ ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯವು ಫೆಬ್ರವರಿ 23 ರ ಭಾನುವಾರ ದುಬೈನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ರೋಹಿತ್ ಶರ್ಮಾ ನೇತೃತ್ವವ ಭಾರತ ಸೋಲಿಸಿದೆ.

ಅದ್ಭುತವಾಗಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಮೇಲೆ ಈಗ ಭಯೋತ್ಪಾದಕರ ಕರಿನೆರಳು ಬಿದ್ದಿದೆ. ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಸಂಘಟನೆಯಿಂದ ಬೆದರಿಕೆ ಇದೆ ಎಂದು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಎಚ್ಚರಿಕೆ ನೀಡಿದೆ.

Terrorist threat to Champions Trophy 2025 tournament

ವರದಿಗಳ ಪ್ರಕಾರ, ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಸಂಘಟನೆ ಪಂದ್ಯ ವೀಕ್ಷಿಸಲು ಪಾಕಿಸ್ತಾನಕ್ಕೆ ಬಂದಿರುವ ವಿದೇಶಿ ಪ್ರಜೆಗಳನ್ನು ಅಪಹರಿಸಲು ಅಥವಾ ಅವರಿಂದ ಅಪಾರ ಮೊತ್ತದ ಹಣವನ್ನು ಸುಲಿಗೆ ಮಾಡಲು ಪ್ಲಾನ್ ಮಾಡಿದೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆಯೂ ಈ ಬಗ್ಗೆ ಎಚ್ಚರಿಕೆ ನೀಡಿದೆ. ಪಾಕಿಸ್ತಾನ 1996ರ ನಂತರ ಮೊದಲ ಬಾರಿಗೆ, ಅಂದರೆ ಸುಮಾರು ಮೂರು ದಶಕಗಳ ಬಳಿಕ ಐಸಿಸಿ ಟೂರ್ನಿಯನ್ನು ಆಯೋಜಿಸುತ್ತಿದೆ. ಭದ್ರತಾ ಕಾರಣಗಳಿಂದ ಪಾಕಿಸ್ತಾನಕ್ಕೆ ಹೋಗಲು ನಿರಾಕರಿಸಿದ ಕಾರಣ ಭಾರತ ತಂಡ ಮಾತ್ರ ದುಬೈನಲ್ಲಿ ತನ್ನ ಪಂದ್ಯಗಳನ್ನು ಆಡುತ್ತಿದೆ.

ಆತಿಥೇಯ ಪಾಕಿಸ್ತಾನ ಚಾಂಪಿಯನ್ಸ್ ಟ್ರೋಫಿ ಆರಂಭವಾದಾಗಿನಿಂದ ಈಗಾಗಲೇ ಹಲವಾರು ವಿವಾದಗಳಲ್ಲಿ ಸಿಲುಕಿಕೊಂಡಿದೆ. ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಪಂದ್ಯದ ಸಮಯದಲ್ಲಿ ಭಾರತದ ಧ್ವಜವನ್ನು ಹಾರಿಸದಿರುವುದರಿಂದ ಹಿಡಿದು, ಭಾರತದ ರಾಷ್ಟ್ರಗೀತೆಯನ್ನು ತಪ್ಪಾಗಿ ನುಡಿಸುವವರೆಗೆ, ಆಯೋಜಕರು ಗೊಂದಲಕ್ಕೊಳಗಾಗಿದ್ದರು. ಇಂತಹ ಪರಿಸ್ಥಿತಿಯಲ್ಲಿ ಉಗ್ರರ ಬೆದರಿಕೆಯ ಸಾಧ್ಯತೆಯ ಬಗ್ಗೆ ಗುಪ್ತಚರ ಸಂಸ್ಥೆಯ ಎಚ್ಚರಿಕೆಯಿಂದ ಪಾಕಿಸ್ತಾನ ಸರ್ಕಾರ ಬೆಚ್ಚಿಬಿದ್ದಿದೆ.

ಲಾಹೋರ್‌ನಲ್ಲಿ 2009ರ ವೇಳೆ ಶ್ರೀಲಂಕಾ ತಂಡದ ಬಸ್ ಮೇಲೆ ನಡೆದ ಭಯೋತ್ಪಾದಕ ದಾಳಿಯ ನೆನಪುಗಳು ಇನ್ನೂ ಹಸಿರಾಗಿವೆ. ಆ ದುರಂತ ದಾಳಿಯನ್ನು ಮನಸ್ಸಿನಲ್ಲಿಟ್ಟುಕೊಂಡು, ನಡೆಯುತ್ತಿರುವ ಐಸಿಸಿ ಟೂರ್ನಿಯನ್ನು ಯಶಸ್ವಿಯಾಗಿ ಮುಗಿಸುವಲ್ಲಿ ಪಾಕಿಸ್ತಾನ ಸವಾಲನ್ನು ಎದುರಿಸುತ್ತಿದೆ.

ತಮ್ಮ ಯೋಜನೆಯನ್ನು ಕಾರ್ಯಗತಗೊಳಿಸಲು ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾಂತ್ಯ ಮುಖ್ಯ ನಗರದಿಂದ ಬಹಳ ದೂರದಲ್ಲಿ ನೆಲೆಯನ್ನು ಸ್ಥಾಪಿಸಿದೆ ಎಂದು ವರದಿಯಾಗಿದೆ. ಈ ಸ್ಥಳಕ್ಕೆ ಬೈಕ್ ಅಥವಾ ರಿಕ್ಷಾ ಇಲ್ಲದೆ ತಲುಪಲು ಕಷ್ಟಕರವಾಗಿದೆ. ಅವರು ಉದ್ದೇಶಪೂರ್ವಕವಾಗಿ ಕ್ಯಾಮೆರಾ ಕಣ್ಗಾವಲು ಇಲ್ಲದ ಸ್ಥಳಗಳನ್ನು ಹುಡುಕುತ್ತಾರೆ. ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ಅಪಹರಣಕ್ಕೊಳಗಾದ ವ್ಯಕ್ತಿಗಳನ್ನು ರಾತ್ರಿಯ ಕತ್ತಲೆಯಲ್ಲಿ ತಮ್ಮ ಸ್ಥಳಗಳಿಗೆ ಕರೆದೊಯ್ಯುತ್ತಾರೆ.

ಭಯೋತ್ಪಾದಕ ಸಂಘಟನೆಗಳ ಗುರಿಗಳು ಮುಖ್ಯವಾಗಿ ಚೀನೀ ಅಥವಾ ಅರಬ್ ನಾಗರಿಕರು. ಭಯೋತ್ಪಾದಕ ಸಂಘಟನೆಗಳು ಬಂದರು ಪ್ರದೇಶಗಳು, ವಿಮಾನ ನಿಲ್ದಾಣ ಪ್ರದೇಶಗಳು ಅಥವಾ ವಿವಿಧ ಕಚೇರಿ ಪ್ರದೇಶಗಳ ಮೇಲೆ ನಿಗಾ ಇಡುತ್ತಿವೆ. ಇಸ್ಲಾಮಿಕ್ ಸ್ಟೇಟ್ ಪಾಕಿಸ್ತಾನದಲ್ಲಿ ಮಾತ್ರವಲ್ಲದೆ ಅಫ್ಘಾನಿಸ್ತಾನದಲ್ಲಿಯೂ ತನ್ನ ಚಟುವಟಿಕೆಗಳನ್ನು ಯೋಜಿಸಿದೆ. ಈ ಕಾರಣದಿಂದಾಗಿ ಅಫ್ಘಾನಿಸ್ತಾನ ಗುಪ್ತಚರ ಸಂಸ್ಥೆ (ಜಿಡಿಐ) ಪ್ರಮುಖ ಸ್ಥಳಗಳ ಮೇಲೆ ಐಎಸ್‌ಕೆಪಿ ದಾಳಿಗಳ ಬಗ್ಗೆ ತನ್ನ ಅಧಿಕಾರಿಗಳಿಗೆ ನೋಟಿಸ್ ನೀಡಿದೆ. ಭಯೋತ್ಪಾದಕ ಗುಂಪಿನೊಂದಿಗೆ ಸಂಬಂಧ ಹೊಂದಿರುವ ಜನರನ್ನು ಪತ್ತೆಹಚ್ಚುವ ಕಾರ್ಯಗಳನ್ನು ತೀವ್ರಗೊಳಿಸಿದೆ.

Story first published: Monday, February 24, 2025, 21:22 [IST]
Other articles published on Feb 24, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+