For Quick Alerts
ALLOW NOTIFICATIONS  
For Daily Alerts
 

ಟೆಸ್ಟ್ ಕ್ರಿಕೆಟ್‌ನಲ್ಲಿ 71 ವರ್ಷಗಳ ಹಿಂದಿನ ದಾಖಲೆ ಮುರಿದ ಶ್ರೀಲಂಕಾದ ಸ್ಪಿನ್ನರ್

ಒಂದೆಡೆ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕ್ರಿಕೆಟ್ ಅಭಿಮಾನಿಗಳು ತಲ್ಲೀನವಾಗಿದ್ದರೆ ಅತ್ತ ಶ್ರೀಲಂಕಾ ಹಾಗೂ ಐರ್ಲೆಂಡ್ ತಂಡಗಳು ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ರನ್‌ ಮಳೆಯೇ ಹರಿದಿದ್ದು ಎರಡು ತಂಡಗಳು ಕೂಡ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಇದೇ ಪಂದ್ಯದಲ್ಲಿ ಶ್ರೀಲಂಕಾದ ಸ್ಪಿನ್ನರ್ ಪ್ರಬಾತ್ ಜಯಸೂರ್ಯ ಐತಿಹಾಸಿಕ ದಾಖಲೆಯೊಂದನ್ನು ಮುರಿದು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಪ್ರಬಾತ್ ಜಯಸೂರ್ಯ ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯಂತ ವೇಗವಾಗಿ 50 ವಿಕೆಟ್ ಪಡೆದ ಸ್ಪಿನ್ ಬೌಲರ್ ಎಂಬ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 71 ವರ್ಷಗಳಿಂದ ಉಳಿದುಕೊಂಡಿದ್ದ ಈ ದಾಖಲೆಯನ್ನು ಪ್ರಯಬಾತ್ ಜಯಸೂರ್ಯ ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ವಿಶೇಷ ದಾಖಲೆಯಲ್ಲಿ ತಮ್ಮ ಹೆಸರನ್ನು ಅಚ್ಚೊತ್ತಿದ್ದಾರೆ.

Test cricket record, Sri Lanka vs Ireland: Lankan spinner Prabath Jayasuriya breaks 71-year-old record

ಈ ವಿಶೇಷ ಮೈಲಿಗಲ್ಲನ್ನು ಸಾಧಿಸಲು ಪ್ರಬಾತ್ ಜಯಸೂರ್ಯ 7 ಟೆಸ್ಟ್ ಪಂದ್ಯಗಳನ್ನು ತೆಗೆದುಕೊಂಡಿದ್ದಾರೆ. ಇನ್ನು ಒಟ್ಟಾರೆಯಾಗಿ ಈ ಸಾಧನೆ ಮಾಡಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ ಪ್ರಬಾತ್. 1896ರಲ್ಲಿ ಇಂಗ್ಲೆಂಡ್‌ನ ಥಾಮಸ್ ರಿಚರ್ಡ್ಸನ್ ಮತ್ತು ದಕ್ಷಿಣ ಆಫ್ರಿಕಾದ ವೆರ್ನಾನ್ ಫಿಲಾಂಡರ್ ಕೂಡ 7 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ಇನ್ನು ಸ್ಪಿನ್ನರ್‌ಗಳ ಪೈಕಿ ಈ ಹಿಂದೆ ಈ ದಾಖಲೆಯನ್ನು ಹೊಂದಿದ್ದವರು ವೆಸ್ಟ್ ಇಂಡೀಸ್‌ನ ಅಲ್‌ಫ್ರೆಡ್ ಲೂಯೀಸ್ ವೆಲೆಂಟೈನ್. ಇವರು 50 ವಿಕೆಟ್‌ಗಳ ಮೈಲಿಗಲ್ಲು ತಲುಪಲು 8 ಪಂದ್ಯಗಳನ್ನು ಬಳಸಿಕೊಂಡಿದ್ದು ಆಸ್ಟ್ರೇಲಿಯಾ ವಿರುದ್ಧ 1951ರಲ್ಲಿ ಈ ದಾಖಲೆ ಬರೆದಿದ್ದರು. ಇನ್ನು ಒಟ್ಟಾರೆಯಾಗಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತ್ಯಣಂತ ವೇಗವಾಗಿ 50 ವಿಕೆಟ್ ಪಡೆದ ದಾಖಲೆಯನ್ನು ಆಸ್ಟ್ರೇಲಿಯಾದ ವೇಗಿ ಚಾರ್ಲೀ ಟರ್ನರ್ ಹೊಂದಿದ್ದಾರೆ. 1988ರಲ್ಲಿ ಇಂಗ್ಲೆಂಡ್ ವಿರುದ್ಧ ಮ್ಯಾಂಚೆಸ್ಟರ್‌ನಲ್ಲಿ ಈ ದಾಖಲೆಯನ್ನು ಬರೆದಿದ್ದರು ಟರ್ನರ್.

ಇನ್ನು ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡ ಇನ್ನಿಂಗ್ಸ್ ಹಾಗೂ 280 ರನ್‌ಗಳ ಅಂತರದಿಂದ ಗೆದ್ದುಕೊಂಡಿತ್ತು. ಎರಡನೇ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಐರ್ಲೆಂಡ್ ಮೊದಲಿಗೆ ಬ್ಯಾಟಿಂಗ್ ನಡೆಸಿ 492 ರನ್‌ ಬಾರಿಸಿ ಮಿಂಚಿತ್ತು. ಇದಕ್ಕೆ ಪ್ರರಿಯಾಗಿ ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ತಂಡ 3 ವಿಕೆಟ್ ಕಳೆದುಕೊಂಡು ಬರೊಬ್ಬರಿ 704 ರನ್ ಬಾರಿಸಿ ಡಿಕ್ಲೇರ್ ಮಾಡಿಕೊಂಡಿದೆ. ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಐರ್ಲೆಂಡ್ ಅಗ್ರ ಕ್ರಮಾಂಕದ ವಿಕೆಟ್‌ಗಳನ್ನು ಕಳೆದುಕೊಂಡು ಸೋಲಿನ ಸುಳಿಯಲ್ಲಿದೆ.

ಶ್ರೀಲಂಕಾ ಆಡುವ ಬಳಗ: ನಿಶಾನ್ ಮದುಷ್ಕ, ದಿಮುತ್ ಕರುಣಾರತ್ನೆ (ನಾಯಕ), ಕುಸಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ದಿನೇಶ್ ಚಂಡಿಮಲ್, ಧನಂಜಯ ಡಿ ಸಿಲ್ವಾ, ಸದೀರ ಸಮರವಿಕ್ರಮ (ವಿಕೆಟ್ ಕೀಪರ್), ರಮೇಶ್ ಮೆಂಡಿಸ್, ಪ್ರಭಾತ್ ಜಯಸೂರ್ಯ, ಅಸಿತ ಫೆರ್ನಾಂಡೋ, ವಿಶ್ವ ಫೆರ್ನಾಂಡೋ
ಬೆಂಚ್: ಕಮಿಂದು ಮೆಂಡಿಸ್, ಲಸಿತ್ ಎಂಬುಲ್ದೇನಿಯ, ದುಶನ್ ಹೇಮಂತ, ಮಿಲನ್ ಪ್ರಿಯನಾಥ ರಥನಾಯಕ

ಐರ್ಲೆಂಡ್ ಆಡುವ ಬಳಗ: ಪಾಲ್ ಸ್ಟಿರ್ಲಿಂಗ್, ಜೇಮ್ಸ್ ಮೆಕಲ್ಲಮ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಪೀಟರ್ ಮೂರ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಆಂಡಿ ಮೆಕ್‌ಬ್ರೈನ್, ಗ್ರಹಾಂ ಹ್ಯೂಮ್, ಮ್ಯಾಥ್ಯೂ ಹಂಫ್ರೀಸ್, ಬೆಂಜಮಿನ್ ವೈಟ್
ಬೆಂಚ್: ಮುರ್ರೆ ಕಮಿನ್ಸ್, ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಫಿಯಾನ್ ಹ್ಯಾಂಡ್, ಥಾಮಸ್ ಮೇಯೆಸ್

Story first published: Friday, April 28, 2023, 13:34 [IST]
Other articles published on Apr 28, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+