ಫಾಲೋ ಆನ್ ಹೇರಿಕೆ ನಂತರ ತಂಡ ಗೆದ್ದಿರುವುದು ನಾಲ್ಕೇ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಗೆದ್ದಿದ್ದ ಭಾರತ!

ಮಂಗಳವಾರ ವೆಲ್ಲಿಂಗ್ಸ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಇಂಗ್ಲೆಂಡ್ ವಿರುದ್ಧ 1 ರನ್‌ಗಳ ರೋಚಕ ಜಯ ಸಾಧಿಸಿದೆ. ಈ ಜಯದ ಮೂಲಕ ಎರಡು ಪಂದ್ಯಗಳ ಸರಣಿಯನ್ನು 1-1ರಲ್ಲಿ ಸಮಬಲಗೊಳಿಸಿದೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ರೋಚಕ ಪಂದ್ಯಗಳಲ್ಲೊಂದಾಗಿದೆ.
ಫಾಲೋ ಆನ್ ಹೇರಿದ ನಂತರವೂ ಇಂಗ್ಲೆಂಡ್ ಈ ಪಂದ್ಯವನ್ನು ಸೋತಿತು. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಈ ರೀತಿ ಆಗಿರುವುದು ಇದೇ ಮೊದಲಲ್ಲ, ಈ ಹಿಂದೆ ಕೂಡ ಈ ರೀತಿಯ ಫಲಿತಾಂಶಗಳು ಬಂದಿವೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಫಾಲೋ ಆನ್‌ಗೆ ಒಳಗಾದ ನಂತರ ಪಂದ್ಯವನ್ನು ಗೆದ್ದ ಮೂರನೇ ತಂಡವಾಗಿ ಇತಿಹಾಸ ನಿರ್ಮಿಸಿತು.
ಇದು ನಾಲ್ಕನೇ ಬಾರಿ ಮಾತ್ರ ತಂಡವೊಂದು ಫಾಲೋ ಆನ್ ನಂತರ ಪಂದ್ಯವನ್ನು ಗೆದ್ದ ಸಾಧನೆ ಮಾಡಿದೆ. ಕೊನೆಯದಾಗಿ 2001ರಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಫಾಲೋಆನ್‌ಗೆ ಒಳಗಾದ ನಂತರವೂ ಪಂದ್ಯವನ್ನು ಗೆದ್ದಿತ್ತು. ಅದಾದ 22 ವರ್ಷಗಳ ನಂತರ ನ್ಯೂಜಿಲೆಂಡ್ ಈ ಸಾಧನೆ ಮಾಡಿದೆ.
ನ್ಯೂಜಿಲೆಂಡ್ ಮೊದಲ ಬಾರಿಗೆ ಈ ಸಾಧನೆಯನ್ನು ಮಾಡಿದೆ. ಇಂಗ್ಲೆಂಡ್ ತಂಡ ಎರಡು ಬಾರಿ ಫಾಲೋಆನ್ ನಂತರವೂ ಪಂದ್ಯವನ್ನು ಗೆದ್ದಿದ್ದು, ಭಾರತ ಒಂದು ಬಾರಿ ಫಾಲೋ ಆನ್ ನಂತರ ಜಯ ಸಾಧಿಸಿದೆ.

1894ರಲ್ಲಿ ಇಂಗ್ಲೆಂಡ್‌ಗೆ ಶಾಕ್ ಕೊಟ್ಟಿದ್ದ ಆಸ್ಟ್ರೇಲಿಯಾ
19ನೇ ಶತಮಾನದಲ್ಲಿ ಮೊದಲ ಬಾರಿಗೆ ಫಾಲೋಆನ್ ಹೇರಿಕೆ ನಂತರವೂ ತಂಡವೊಂದು ಜಯಗಳಿಸಿ ಇತಿಹಾಸ ನಿರ್ಮಿಸಿತ್ತು. 14 ಡಿಸೆಂಬರ್ 1894ರಲ್ಲಿ ಸಿಡ್ನಿಯಲ್ಲಿ ನಡೆದ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಮೊದಲ ಬಾರಿಗೆ ಇದಕ್ಕೆ ಸಾಕ್ಷಿಯಾಯಿತು.
ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ 586ರ ನ್ ಗಳಿಸಿತ್ತು. ನಂತರ ಇಂಗ್ಲೆಂಡ್ 325 ರನ್ ಗಳಿಸಿ ಆಲೌಟ್ ಆಗಿತ್ತು. ಆಸ್ಟ್ರೇಲಿಯಾ ಇಂಗ್ಲೆಂಡ್ ಮೇಲೆ ಫಾಲೋಆನ್ ಹೇರಿತು. ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್‌ನಲ್ಲಿ 437 ರನ್ ಗಳಿಸುವ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ 177 ರನ್‌ಗಳ ಗುರಿ ನೀಡಿತ್ತು. ಆಸ್ಟ್ರೇಲಿಯಾ ತಂಡವನ್ನು 166 ರನ್‌ಗಳಿಗೆ ಆಲೌಟ್ ಮಾಡುವ ಮೂಲಕ 10 ರನ್‌ಗಳ ರೋಚಕ ಜಯ ಸಾಧಿಸಿತ್ತು.

1981ರಲ್ಲಿ ಎರಡನೇ ಬಾರಿ ಗೆದ್ದ ಇಂಗ್ಲೆಂಡ್
1981ರಲ್ಲಿ ನಡೆದ ಆಶಸ್ ಸರಣಿಯಲ್ಲಿ ಇಂಗ್ಲೆಂಡ್ ಮತ್ತೆ ಆಸ್ಟ್ರೇಲಿಯಾ ವಿರುದ್ಧ ಫಾಲೋಆನ್ ನಂತರದ ಜಯ ಸಾಧಿಸಿತು. ಲೀಡ್ಸ್ ಅಂಗಳದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 9 ವಿಕೆಟ್‌ಗೆ 401 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು. ನಂತರ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 174 ರನ್‌ಗಳಿಗೆ ಆಲೌಟ್ ಆಯಿತು.
ಆಸ್ಟ್ರೇಲಿಯಾ ಇಂಗ್ಲೆಂಡ್ ಮೇಲೆ ಫಾಲೋ ಆನ್ ಹೇರಿತು. ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 356 ರನ್ ಗಳಿಸುವ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ 130 ರನ್‌ಗಳ ಸಾಧಾರಣ ಗುರಿ ನೀಡಿದರು. ಇಂಗ್ಲೆಂಡ್‌ನ ಬಾಬ್ ವಿಲ್ಲಿಸ್ 8 ವಿಕೆಟ್ ಪಡೆಯುವ ಮೂಲಕ ಆಸ್ಟ್ರೇಲಿಯಾವನ್ನು 111 ರನ್‌ಗಳಿಗೆ ಆಲೌಟ್ ಮಾಡಿದರು. ಇಂಗ್ಲೆಂಡ್ 18 ರನ್‌ಗಳ ಜಯ ಸಾಧಿಸಿತು.

ಇತಿಹಾಸ ಬರೆದ ಭಾರತ ತಂಡ
2001ರಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಫಾಲೋಆನ್ ಹೇರಿಕೆ ನಂತರವೂ ಜಯ ಸಾಧಿಸಿ ಇತಿಹಾಸ ಬರೆದಿತ್ತು. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಅಂಗಳದಲ್ಲಿ ಈ ಪಂದ್ಯ ನಡೆದಿತ್ತು.
ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಸ್ಟೀವ್ ವಾ ಶತಕದ ಸಹಾಯದಿಂದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 445 ರನ್‌ಗಳನ್ನು ಕಲೆಹಾಕಿತ್ತು. ನಂತರ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ಭಾರತ 171 ರನ್‌ಗಳಿಗೆ ಆಲೌಟ್ ಆಯಿತು.
ಬೃಹತ್ ಮುನ್ನಡೆ ಪಡೆದುಕೊಂಡಿದ್ದ ಆಸ್ಟ್ರೇಲಿಯಾ ಫಾಲೋಆನ್ ಹೇರಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ನೀಡಿತು. ವಿವಿಎಸ್ ಲಕ್ಷ್ಮಣ್ 281 ರನ್ ಗಳಿಸಿದರೆ, ರಾಹುಲ್ ದ್ರಾವಿಡ್ 180 ರನ್ ಗಳಸಿದ್ದರು. ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ 7 ವಿಕೆಟ್ ಕಳೆದುಕೊಂಡು 657 ರನ್ ಗಳಿಸಿದ್ದಾ ಡಿಕ್ಲೇರ್ ಮಾಡಿಕೊಂಡಿತು.
384 ರನ್‌ಗಳ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ 212 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಸೋಲನುಭವಿಸಿತು. ಸೌರವ್ ಗಂಗೂಲಿ ನೇತೃತ್ವದ ಭಾರತ ತಂಡವು ಆಸ್ಟ್ರೇಲಿಯಾದ ಸತತ 16 ಟೆಸ್ಟ್ ಪಂದ್ಯಗಳ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications