ಟೆಸ್ಟ್ ಶ್ರೇಯಾಂಕ ಪಟ್ಟಿ: ನಂಬರ್ 1 ಆಗಿ ಮಿಂಚಿದ ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ತಂಡದ ಸ್ಟಾರ್ ಆಲ್‌ರೌಂಡರ್ ಬೆನ್ ಸ್ಟೊಕ್ಸ್ ಸರ್ವಾಂಗೀಣ ಪ್ರದರ್ಶನದ ಮೂಲಕ ಮಿಂಚುಹರಿಸುತ್ತಿದ್ದಾರೆ. ಅದರಲ್ಲೂ ಎರಡನೇ ಟೆಸ್ಟ್ ಪಂದ್ಯದಲ್ಲಿ ಎರಡೂ ಇನ್ನಿಂಗ್ಸ್‌ಗಳಲ್ಲಿ ನೀಡಿದ ಸಮಯೋಚಿತ ಬ್ಯಾಟಿಂಗ್ ಪ್ರದರ್ಶನಕ್ಕೆ ಕ್ರಿಕೆಟ್ ವಿಮರ್ಶಕರು ಭಾರೀ ಪ್ರಶಂಸೆಯನ್ನು ವ್ಯಕ್ತಪಡಿಸುತ್ತಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧ ಮಹತ್ವದ ಗೆಲುವಿಗೆ ಕಾರಣವಾದ ಬೆನ್ ಸ್ಟೋಕ್ಸ್ ಪ್ರದರ್ಶನ ಶ್ರೇಯಾಂಕ ಪಟ್ಟಿಯಲ್ಲಿ ಪ್ರತಿಫಲಿಸುತ್ತಿದೆ. ಬೆನ್ ಸ್ಟೋಕ್ಸ್ ಪ್ರದರ್ಶನಕ್ಕೆ ಅದ್ಭುತ ಉಡುಗೊರೆಯೇ ದೊರೆತಿದ್ದು ಆಲ್‌ರೌಂಡರ್ ಹಾಗೂ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಸ್ಟೋಕ್ಸ್ ದೊಡ್ಡ ಯಶಸ್ಸು ಕಂಡಿದ್ದಾರೆ. ಹಾಗಾದರೆ ಶ್ರೇಯಾಂಕ ಪಟ್ಟಿಯಲ್ಲಿ ಸ್ಟೋಕ್ಸ್ ಮಾಡಿದ ಸಾಧನೆ ಏನು ಎಂಬುದಕ್ಕೆ ಮುಂದೆ ಓದಿ..

ಆಲ್‌ರೌಂಡರ್‌ಗಳಲ್ಲಿ ಸ್ಟೋಕ್ಸ್ ಅಗ್ರಸ್ಥಾನ
ಇಂಗ್ಲೆಂಡ್ ತಂಡದ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಆಲ್‌ರೌಂಡರ್‌ಗಳ ಶ್ರೇಯಾಂಕ ಪಟ್ಟಿಯಲ್ಲಿ ಶ್ರೇಷ್ಠ ಸಾಧನೆಯನ್ನು ಮಾಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಎರಡೂ ವಿಭಾಗದಲ್ಲಿ ಮಿಂಚಿರುವ ಸ್ಟೋಕ್ಸ್ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ನಂಬರ್ 1 ಸ್ಥಾನವನ್ನು ಪಡೆದುಕೊಂಡಿದ್ದಾರೆ. ಮೊದಲ ಸ್ಥಾನದಲ್ಲಿದ್ದ ವೆಸ್ಟ್ ಇಂಡೀಸ್ ನಾಯಕ ಜೇಸನ್ ಹೋಲ್ಡರ್ ಇಂಗ್ಲೆಂಡ್ ಆಲ್‌ಂಡರ್‌ಗೆ ಸ್ಥಾನ ಬಿಟ್ಟುಕೊಟ್ಟಿದ್ದಾರೆ.

ಬ್ಯಾಟಿಂಗ್ ವಿಭಾಗದಲ್ಲೂ ಶ್ರೇಷ್ಠ ಸಾಧನೆ
ಬೆನ್ ಸ್ಟೋಕ್ಸ್ ಬ್ಯಾಟಿಂಗ್ ವಿಭಾಗದಲ್ಲೂ ಅತ್ಯುತ್ತಮ ಸಾಧನೆಯನ್ನು ತೋರಿದ್ದಾರೆ. ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ನಂತರ ಬೆನ್ ಸ್ಟೋಕ್ಸ್ ಪ್ರಸಕ್ತ ಕಾಲದ ಟೆಸ್ಟ್ ಕ್ರಿಕೆಟ್ ದಿಗ್ಗಜರ ಸನಿಹಕ್ಕೆ ಬಂದು ತಲುಪಿದ್ದಾರೆ. ಬೆನ್ ಸ್ಟೋಕ್ಸ್ ಟೆಸ್ಟ್‌ನಲ್ಲಿ ಸ್ಟೀವ್ ಸ್ಮಿತ್ ಹಾಗೂ ವಿರಾಟ್ ಕೊಹ್ಲಿಯ ನಂತರ ಮೂರನೇ ಸ್ಥಾನವನ್ನು ಅಲಂಕರಿಸಿದ್ದಾರೆ.

ಸರಣಿಯಲ್ಲಿ ಬ್ಯಾಟಿಂಗ್ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ
ಬೆನ್ ಸ್ಟೋಕ್ಸ್ ವೆಸ್ಟ್ ಇಂಡಿಸ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲೂ ಅದ್ಭುತ ಪ್ರದರ್ಶನವನ್ನು ನೀಡಿದ್ದಾರೆ. ಸರಣಿಯಲ್ಲಿ ಈವರೆಗೂ ಅತಿ ಹೆಚ್ಚು ವಿಕೆಟ್ ಪಡೆದ ಹಾಗೂ ಅತಿ ಹೆಚ್ಚು ರನ್ ಗಳಿಸಿದ ಆಟಗಾರನೆಂಬ ಹೆಗ್ಗಳಿಕೆಗೆ ಬೆನ್ ಸ್ಟೋಕ್ಸ್ ಪಾತ್ರರಾಗಿದ್ದಾರೆ.

ವಿಂಡೀಸ್ ವಿರುದ್ಧದ ಸರಣಿಯಲ್ಲಿ ಸ್ಟೋಕ್ಸ್ ಮಿಂಚು
ಬೆನ್ ಸ್ಟೋಕ್ಸ್ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ಮೊದಲ ಪಂದ್ಯದಲ್ಲಿ ಬೌಲಿಂಗ್‌ನಲ್ಲಿ ಉತ್ತಮ ಸಾಧನೆ ತೋರಿದ್ದರು. ಸೌಥಾಂಪ್ಟನ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಸ್ಟೋಕ್ಸ್ 6 ವಿಕೆಟ್‌ಗಳ ಸಹಿತ ಒಟ್ಟಾರೆ 9 ವಿಕೆಟ್ ಪಡೆದು ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಇನ್ನು ಎರಡನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮೂಲಕ ಸ್ಟೋಕ್ಸ್ 176 ರನ್ ಸಿಡಿಸಿದ್ದರೆ ಎರಡನೇ ಇನ್ನಿಂಗ್ಸ್‌ನಲ್ಲಿ 78 ರನ್ ಸಿಡಿಸಿ ಬ್ಯಾಡಿಂಗ್‌ನಲ್ಲೂ ಸರಣಿಯಲ್ಲಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications