ಐಸಿಸಿ ಪರಿಷ್ಕೃತ ಟೆಸ್ಟ್ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಈ ಪಟ್ಟಿಯಲ್ಲಿ ಪ್ರಮುಖ ಬದಲಾವಣೆಯಾಗಿದೆ. ಬ್ಯಾಟರ್‌ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಆಟಗಾರ ಮಾರ್ನಸ್ ಲ್ಯಾಬುಶೈನ್ ಮತ್ತೆ ಅಗ್ರಸ್ಥಾನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು ಮೊದಲ ಸ್ಥಾನದಲ್ಲಿದ್ದ ಜೋ ರೂಟ್ ಅವರನ್ನು ಹಿಂದಿಕ್ಕಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಅಮೋಘ ಪ್ರದರ್ಶನ ನಿಡಿದ ಮಾರ್ನಸ್ ಒಂದೇ ಟೆಸ್ಟ್ ಪಂದ್ಯದಲ್ಲಿ ದ್ವಿ ಶತಕ ಹಾಗೂ ಶತಕ ಸಿಡಿಸಿ ಈ ಸಾಧನೆ ಮಾಡಿದ ವಿಶ್ವದ ಕೇವಲ 8ನೇ ಆಟಗಾರ ಎನಿಸಿಕೊಂಡಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸಣಿಯ ಆರಂಭಕ್ಕೂ ಮುನ್ನ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದ ಮಾರ್ನಸ್ ಮೊದಲ ಸ್ಥಾನದಲ್ಲಿದ್ದ ಜೋ ರೂಟ್ ಅವರಿಗಿಂತ ಕೇವಲ 2 ಅಂಕ ಹಿಂದಿದ್ದರು. ಆದರೆ ವಿಂಡೀಸ್ ವಿರುದ್ಧದ ಪ್ರದರ್ಶನದಿಂದಾಗಿ ಉತ್ತಮ ಮುನ್ನಡೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇತ್ತ ಜೋ ರೂಟ್ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾದ ಕಾರಣ ಶ್ರೇಯಾಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಗಾಯದ ನಡುವೆಯೂ ಛಲ ಬಿಡದೆ ಸ್ಪರ್ಧಿಸಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಗೆದ್ದ ಮೀರಾಬಾಯಿ ಚಾನು
ಪರ್ತ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಲ್ಯಾಬುಶೈನ್ ಮೊದಲ ಇನ್ನಿಂಗ್ಸ್‌ನಲ್ಲಿ 204 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 104 ರನ್ ಗಳಿಸುವ ಮೂಲಕ 50 ಸೇರ್ಪಡೆಗೊಳಿಸಿದ್ದಾರೆ. ಇನ್ನು ತಮ್ಮದೇ ತಂಡದ ಅನುಭವಿ ಆಟಗಾರ ಸ್ಟೀವ್ ಸ್ಮಿತ್ ಅವರಿಗಿಂತ 42 ಅಂಕಗಳಿಗಿಂತ ಮುನ್ನಡೆಯಲ್ಲಿದ್ದಾರೆ. ಕಳೆದ ಜೂನ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಸತತ ಶತಕಗಳನ್ನು ಸಿಡಿಸಿದ್ದ ರೂಟ್ ಮಾರ್ನ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದರು. ಇದೀಗ ಮತ್ತೆ ಆ ಸ್ಥಾನವನ್ನು ಆಸಿಸ್ ಆಟಗಾರ ಮರಳಿ ಪಡೆದುಕೊಂಡಿದ್ದಾರೆ.
ಲ್ಯಾಬುಶೈನ್ ಜೊತೆಗೆ ಅದೇ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ಕೂಡ ಅಜೇಯ ದ್ವಿಶತಕವನ್ನು ಸಿಡಿಸಿ ಮಿಂಚಿದ್ದು ಅವರು ಕೂಡ ಎರಡು ಸ್ಥಾನಗಳ ಏರಿಕೆ ಕಂಡಿದ್ದಾರೆ. ಸ್ಮಿತ್ ಅವರ 893 ಅಂಕಗಳನ್ನು ಗಳಿಸಿದ್ದು 2021ರ ಜನವರಿ ಬಳಿಕ ಅವರ ಅತ್ಯುತ್ತಮ ರೇಟಿಂಗ್ ಇದಾಗಿದೆ.
AUS vs WI: 2ನೇ ಟೆಸ್ಟ್‌ನಿಂದ ಪ್ಯಾಟ್ ಕಮ್ಮಿನ್ಸ್ ಔಟ್, ಸ್ಟೀವ್ ಸ್ಮಿತ್‌ಗೆ ಮತ್ತೆ ಆಸೀಸ್ ನಾಯಕತ್ವ
ಇನ್ನು ಬೌಲಿಂಗ್‌ನಲ್ಲಿ ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಅನುಭವಿ ಆಟಗಾರ ಜೇಮ್ಸ್ ಆಂಡರ್ಸನ್ ಎರಡು ಸ್ಥಾನಗಳ ಏರಿಕೆ ಕಂಡಿದ್ದು 3ನೇ ಸ್ಥಾನದಲ್ಲಿದ್ದಾರೆ. ಪ್ಯಾಟ್ ಕಮ್ಮಿನ್ಸ್ ಅಗ್ರಸ್ಥಾನದಲ್ಲಿಯೇ ಮುಂದುವರಿದಿದ್ದು ಆರ್ ಅಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ. ಜಸ್ಪ್ರೀತ್ ಬೂಮ್ರಾ ನಾಲ್ಕನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.