ಟೆಸ್ಟ್ ರ‍್ಯಾಂಕಿಂಗ್: ಕೊಹ್ಲಿಗೆ ಸಡ್ಡು ಹೊಡೆಯುವತ್ತ ಸಮೀಪಿಸಿದ ಸ್ಟೀವ್ ಸ್ಮಿತ್

ದುಬೈ, ಆಗಸ್ಟ್ 19: ಇಂಗ್ಲೆಂಡ್ ವಿರುದ್ಧದ ಆ್ಯಷಸ್ ಟೆಸ್ಟ್ ಸರಣಿಯ ಪ್ರಥಮ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಬಾರಿಸಿದ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್, ಐಸಿಸಿ ಪ್ರಕಟಿಸಿದ ನೂತನ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.
ದ್ವಿತೀಯ ಟೆಸ್ಟ್ ಪಂದ್ಯದಲ್ಲೂ 92 ರನ್ ಗಳಿಸಿದ ಸ್ಮಿತ್, ಸರಣಿಯಲ್ಲಿ ಆಡಿದ ಮೂರು ಇನಿಂಗ್ಸ್‌ಗಳಿಂದ 126ರ ಸರಾಸರಿಯಲ್ಲಿ ಒಟ್ಟು 378 ರನ್‌ಗಳನ್ನು ಗಳಿಸಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್‌ನಿಂದ ಒಂದು ವರ್ಷ ನಿಷೇಧಕ್ಕೊಳಗಾಗಿದ್ದರೂ ಕೂಡ ಇದೀಗ ಮರಳಿ 2ನೇ ಶ್ರೇಯಾಂಕ ಅಲಂಕರಿಸಿದ್ದಾರೆ.
ಈ ಮೂಲಕ ಐಸಿಸಿ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜೊತೆಗಿನ ಅಂತರವನ್ನು ಕೇವಲ 9 ಅಂಕಗಳಿಗೆ ತಗ್ಗಿಸುವಲ್ಲಿ ಸ್ಮಿತ್ ಯಶಸ್ವಿಯಾಗಿದ್ದಾರೆ.
ಇದೇ ವೇಳೆ ಲಾರ್ಡ್ಸ್ ಟೆಸ್ಟ್ ಮೂಲಕ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ ಮಿಂಚಿದ ಇಂಗ್ಲೆಂಡ್‌ನ ಯುವ ವೇಗದ ಬೌಲರ್ ಜೋಫ್ರಾ ಆರ್ಚರ್, 82ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಆಸೀಸ್‌ನ ವೇಗಿ ಪ್ಯಾಟ್ ಕಮಿನ್ಸ್ ಬೌಲರ್‌ಗಳ ಪೈಕಿ ತಮ್ಮ ಅಗ್ರಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮತ್ತೊಂದೆಡೆ ನ್ಯೂಜಿಲೆಂಡ್ ಎದುರಿನ ಮೊದಲ ಟೆಸ್ಟ್ ಪಂದ್ಯದಲ್ಲಿ ನಾಲ್ಕನೇ ಇನಿಂಗ್ಸ್‌ನಲ್ಲಿ ಶತಕ ಬಾರಿಸಿದ ಲಂಕಾ ನಾಯಕ ದಿಮುತ್ ಕರುಣಾರತ್ನೆ (122 ರನ್) ಕೂಡ ರ‍್ಯಾಂಕಿಂಗ್‌ನಲ್ಲಿ ಏರಿಕೆ ಕಂಡಿದ್ದು, ನಾಲ್ಕು ಸ್ಥಾನ ಮೇಲೇರುವ ಮೂಲಕ 8ನೇ ರ‍್ಯಾಂಕ್ ಪಡೆದಿದ್ದಾರೆ. ಇದು ಅವರ ಏಳು ವರ್ಷಗಳ ಟೆಸ್ಟ್ ಕ್ರಿಕೆಟ್ ವೃತ್ತಿ ಬದುಕಿನಲ್ಲಿ ಪಡೆದ ಶ್ರೇಷ್ಠ ರ‍್ಯಾಂಕಿಂಗ್ ಸಾಧನೆಯಾಗಿದೆ.
ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಮೊದಲ ಪಂದ್ಯ ಆಗಸ್ಟ್ 22ರಂದು (ಗುರುವಾರ) ಆರಂಭವಾಗಲಿದೆ. ವಿರಾಟ್ ಇಲ್ಲಿ ಶತಕ ಬಾರಿಸಿದರೆ ಟೆಸ್ಟ್ ರ‍್ಯಾಂಕಿಂಗ್‌ನ ಅಗ್ರಸ್ಥಾನವನ್ನು ಮತ್ತಷ್ಟು ಬಲ ಪಡಿಸಿಕೊಳ್ಳಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications