ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೆಸ್ಟ್ ಸರಣಿ: ಜಿಂಬಾಬ್ವೆ ವಿರುದ್ಧ ಗೆಲುವು ಸಾಧಿಸಿದ ಪಾಕ್, ನಾಯಕನಾಗಿ ಬಾಬರ್ ದಾಖಲೆ

Test series: with the victory against Zimbabwe Babar Azam create record as captain

ಜಿಂಬಾಬ್ವೆ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿಯೂ ಪಾಕಿಸ್ತಾನ ಇನ್ನಿಂಗ್ಸ್ ಹಾಗೂ 147 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದೆ. ಈ ಮೂಲಕ ಪಾಕಿಸ್ತಾನ ತಂಡ ಜಿಂಬಾಬ್ವೆ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆಲುವು ಸಾಧಿಸಿದೆ.

ಈ ಗೆಲುವಿನೊಂದಿಗೆ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಪಾಕಿಸ್ತಾನ ತಂಡದ ನಾಯಕನಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಆರಂಭಿಕ ನಾಲ್ಕು ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳನ್ನು ಗೆದ್ದ ಮೊದಲ ಪಾಕಿಸ್ತಾನದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಪಾಕಿಸ್ತಾನ ಟೆಸ್ಟ್ ಕ್ರಿಕೆಟ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧವೂ ಗೆಲವು ಸಾಧಿಸಿದೆ.

ಐಪಿಎಲ್ ಮುಂದೂಡಿಕೆ: ಸುರಕ್ಷಿತವಾಗಿ ತವರಿಗೆ ಮರಳಿದ ವೆಸ್ಟ್ ಇಂಡೀಸ್ ಕ್ರಿಕೆಟಿಗರುಐಪಿಎಲ್ ಮುಂದೂಡಿಕೆ: ಸುರಕ್ಷಿತವಾಗಿ ತವರಿಗೆ ಮರಳಿದ ವೆಸ್ಟ್ ಇಂಡೀಸ್ ಕ್ರಿಕೆಟಿಗರು

ಜಿಂಬಾಬ್ವೆ ವಿರುದ್ಧದ ಸರಣಿಯ ಎರಡನೇ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ ಅಬಿದ್ ಅಲಿ ಸಿಡಿಸಿದ ದ್ವಿಶತಕ ಹಾಗೂ ಅಜರ್ ಅಲಿ ಭರ್ಜರಿ ಶತಕ ಮತ್ತು ನೌಮಾನ್ ಅಲಿ ಅವರ 97 ರನ್‌ಗಳ ಸಾಹಸದಿಂದಾಗಿ 8 ವಿಕೆಟ್‌ಗೆ 510 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿತು.

ಆದರೆ ಇದಕ್ಕೆ ಪ್ರತ್ಯುತ್ತರವಾಗಿ ಜಿಂಬಾಬ್ವೆ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 132 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಫಾಲೋಆನ್‌ಗೆ ತುತ್ತಾಯಿತು. ಎರಡನೇ ಇನ್ನಿಂಗ್ಸ್‌ನಲ್ಲಿಯೂ ಪಾಕ್ ಬೌಲಿಂಗ್ ದಾಳಿಗೆ ಸಮರ್ಥವಾಗಿ ಉತ್ತರ ನೀಡಲು ಜಿಂಬಾಬ್ವೆ ಪಡೆ ಯಶಸ್ವಿಯಾಗಲಿಲ್ಲ. 231 ರನ್‌ಗಳಿಗೆ ಆಲೌಟ್ ಆಗಿ ಪಾಕಿಸ್ತಾನಕ್ಕೆ ಇನ್ನಿಂಗ್ಸ್ ಹಾಗೂ 147 ರನ್‌ಗಳ ಅಂತರದಿಂದ ಶರಣಾಯಿತು. ಎರಡನೇ ಇನ್ನಿಂಗ್ಸ್‌ನಲ್ಲಿ ರೇಗಿಸ್ ಚಕಾಬ್ವಾ 80 ರನ್‌ಗಳಿಸಿ ಪಾಕ್ ಬೌಲರ್‌ಗಳ ದಾಳಿಯನ್ನು ದಿಟ್ಟವಾಗಿ ಎದುರಿಸಿದರು.

ಐಪಿಎಲ್ 2021ರ ಉಳಿದ ಪಂದ್ಯಗಳು ಭಾರತದಲ್ಲಿ ನಡೆಯದು: ಖಚಿತಪಡಿಸಿದ ಗಂಗೂಲಿಐಪಿಎಲ್ 2021ರ ಉಳಿದ ಪಂದ್ಯಗಳು ಭಾರತದಲ್ಲಿ ನಡೆಯದು: ಖಚಿತಪಡಿಸಿದ ಗಂಗೂಲಿ

ಇದಕ್ಕೂ ಮುನ್ನ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿಯೂ ಜಿಂಬಾಬ್ವೆ ಪಾಕಿಸ್ತಾನಕ್ಕೆ ಇನ್ನಿಂಗ್ಸ್ ಹಾಗೂ 116 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತ್ತು. ಈ ಮೂಲಕ ಪಾಕಿಸ್ತಾನ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. 3 ಪಂದ್ಯಗಳ ಟಿ20 ಸರಣಿಯನ್ನು ಪಾಕಿಸ್ತಾನ 2-1 ಅಂತರದಿಂದ ಗೆಲುವು ಸಾಧಿಸಿತ್ತು.

Story first published: Monday, May 10, 2021, 16:32 [IST]
Other articles published on May 10, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X