Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಡಿಸೆಂಬರ್ 4ರಿಂದ ಬಂಜಾರ ಕಪ್ ಕ್ರಿಕೆಟ್ ಟೂರ್ನಮೆಂಟ್ ಆರಂಭ

The Banjara Cup Cricket Tournament begins on December 4

ದಾವಣಗೆರೆ: ಶ್ರೀರಾಮ್‌ರಾವ್ ಮಹಾರಾಜರ ಸ್ಮರಣಾರ್ಥ ಹಾಗೂ ಶ್ರೀಸಂತ ಸೇವಾಲಾಲ್ ಮಹಾರಾಜರ 282ನೇ ಜಯಂತ್ಯೋತ್ಸದ ಪ್ರಯುಕ್ತ ಡಿಸೆಂಬರ್ 4ರಿಂದ ಡಿಸೆಂಬರ್ 9ರ ವರೆಗೆ ಕರ್ನಾಟಕ ತಾಂಡಾ ರಕ್ಷಣಾ ವೇದಿಕೆ ವತಿಯಿಂದ ದಾವಣಗೆರೆಯಲ್ಲಿ ಬಂಜಾರ ಕಪ್-2020 ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಯ್ಕ ಜಿ ತಿಳಿಸಿದ್ದಾರೆ (ಸಾಂಧರ್ಭಿಕ ಚಿತ್ರ).

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಡಿಸೆಂಬರ್ 4ರ ಬೆಳಗ್ಗೆ 9 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಬಂಜಾರ ಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಸಂಸದ ಜಿ.ಎಂ. ಸಿದ್ದೇಶ್ವರ್ ಉದ್ಘಾಟಿಸುವರು. ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ, ಎಸ್.ಎ.ರವೀಂದ್ರನಾಥ್, ಮೇಯರ್ ಬಿ.ಜಿ. ಅಜಯಕುಮಾರ್, ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷ ಪಿ. ರಾಜೀವ್, ಹೂವಿನಹಡಗಲಿ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಮಾಜಿ ಶಾಸಕ ಎಂ. ಬಸವರಾಜ್ ನಾಯ್ಕ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ದೇಶದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಿರುವ ಬಂಜಾರ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಬಾಂಬೆ, ಕರ್ನೂಲ್, ತೆಲಂಗಾಣ, ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಬಂಜಾರ ಸಮುದಾಯದ ಒಟ್ಟು 16 ತಂಡಗಳು ಭಾಗವಹಿಸಲಿವೆ. ಪ್ರಥಮ ಬಹುಮಾನವಾಗಿ 1 ಲಕ್ಷ ರೂ, ದ್ವಿತೀಯ ಬಹುಮಾನವಾಗಿ 50 ಸಾವಿರ ರೂ, ತೃತೀಯ ಬಹುಮಾನವಾಗಿ 25 ಸಾವಿರ ರೂ ಹಾಗೂ ಚತುರ್ಥ ಬಹುಮಾನವಾಗಿ 15 ಸಾವಿರ ಮತ್ತು ಆರ್ಕಷಕ ಟ್ರೋಫಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.

Story first published: Thursday, December 3, 2020, 18:43 [IST]
Other articles published on Dec 3, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+