For Quick Alerts
ALLOW NOTIFICATIONS  
For Daily Alerts
 

Women's T20 World Cup: ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ಭಾರತ ಮುಖಾಮುಖಿ: ಆಡುವ ಬಳಗ, ಪಿಚ್ ವರದಿ

The India Team Will Face The Australian Team In The Womens T20 World Cup Semifinals On Thursday

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಇಂದು ಭಾರತ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಸೆಣೆಸಲಿದೆ. ಭಾರತಕ್ಕೆ ಟಿ20 ವಿಶ್ವಕಪ್ ಗೆಲ್ಲುವ ಉತ್ಸಾಹದಲ್ಲಿರುವ ಹರ್ಮನ್‌ಪ್ರೀತ್ ಕೌರ್ ಬಳಗಕ್ಕೆ ಆಸ್ಟ್ರೇಲಿಯಾವನ್ನು ದಾಟುವುದು ಅಷ್ಟು ಸುಲಭವಲ್ಲ.

ಲೀಗ್ ಹಂತದ ಪಂದ್ಯದಲ್ಲಿ ಭಾರತ ತಂಡ ಬಿ ಗುಂಪಿನಲ್ಲಿ ಆಡಿದ 4 ಪಂದ್ಯಗಳಲ್ಲಿ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಲೀಗ್ ಹಂತದ ಪಂದ್ಯಗಳಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ಮಾತ್ರ ಸೋಲನುಭವಿಸಿದ್ದು, ಉಳಿದ ತಂಡಗಳ ವಿರುದ್ಧ ಗೆಲುವು ಸಾಧಿಸಿತ್ತು.

ಎ ಗುಂಪಿನಲ್ಲಿ ಅಜೇಯ ತಂಡವಾಗಿರುವ ಆಸ್ಟ್ರೇಲಿಯಾ ಗುಂಪುಹಂತದಲ್ಲಿ ಆಡಿದ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದೆ. ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ವಿಭಾಗದಲ್ಲಿ ಬಲಿಷ್ಠವಾಗಿರುವ ಆಸ್ಟ್ರೇಲಿಯಾ ಪಡೆ ಭಾರತಕ್ಕೆ ಕಠಿಣ ಸವಾಲು ಹಾಕಲು ಸಜ್ಜಾಗಿದೆ.

ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸ್ಟಾರ್ ಬ್ಯಾಟರ್ ಸ್ಮೃತಿ ಮಂದಾನ 56 ಎಸೆತಗಳಲ್ಲಿ 87 ರನ್ ಗಳಿಸುವ ಮೂಲಕ ಮಿಂಚಿದ್ದಾರೆ. ಉತ್ತಮ ಫಾರ್ಮ್‌ನಲ್ಲಿರುವ ಮಂದಾನ ಭಾರತದ ಬ್ಯಾಟಿಂಗ್‌ನಲ್ಲಿ ಮುಖ್ಯ ಪಾತ್ರ ವಹಿಸಲಿದ್ದಾರೆ. ರಿಚಾ ಘೋಷ್, ಜೆಮಿಮಾ ರೋಡ್ರಿಗಸ್ ಕೂಡ ಉತ್ತಮ ಫಾರ್ಮ್‌ನಲ್ಲಿರುವುದು ಭಾರತದ ವಿಶ್ವಾಸವನ್ನು ಹೆಚ್ಚಿಸಿದೆ.

ಬೌಲಿಂಗ್ ವಿಭಾಗದಲ್ಲಿ ರೇಣುಕಾ ಮಿಂಚು

ಭಾರತದ ಬೌಲಿಂಗ್ ವಿಭಾಗದಲ್ಲಿ ರೇಣುಕಾ ಸಿಂಗ್ ಠಾಕೂರ್ ಪ್ರಮುಖ ಅಸ್ತ್ರವಾಗಿದ್ದಾರೆ. ಅವರ ಸ್ವಿಂಗ್ ಬಾಲ್ ಎದುರಾಳಿಗಳನ್ನು ಕಂಗೆಡಿಸುವುದರಲ್ಲಿ ಅನುಮಾನವಿಲ್ಲ. ದೀಪ್ತಿ ಶರ್ಮಾ, ರಾಜೇಶ್ವರಿ ಗಾಯಕ್ವಾಡ್ ಮಿಂಚಿದರೆ ಆಸ್ಟ್ರೇಲಿಯಾ ಬಲಿಷ್ಠ ಬ್ಯಾಟಿಂಗ್ ಪಡೆಗೆ ಕಡಿವಾಣ ಹಾಕಬಹುದಾಗಿದೆ.

The India Team Will Face The Australian Team In The Womens T20 World Cup Semifinals On Thursday

ಸೆಮಿಫೈನಲ್ ಪಂದ್ಯದ ವಿವರ

ದಕ್ಷಿಣ ಆಫ್ರಿಕಾದ ಕೇಪ್‌ ಟೌನ್‌ನ ನ್ಯೂಲ್ಯಾಂಡ್ಸ್‌ ಅಂಗಳದಲ್ಲಿ ಭಾರತ ಆಸ್ಟ್ರೇಲಿಯಾ ನಡುವಿನ ಸೆಮಿಫೈನಲ್ ಪಂದ್ಯ ನಡೆಯಲಿದೆ. ಭಾರತೀಯ ಕಾಲಮಾನ ಸಂಜೆ 6.30ಕ್ಕೆ ಪಂದ್ಯ ಆರಂಭವಾಗಲಿದೆ.

ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪಂದ್ಯದ ನೇರಪ್ರಸಾರವನ್ನು ವೀಕ್ಷಣೆ ಮಾಡಬಹುದಾಗಿದೆ. ಡಿಸ್ನಿ+ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಕೂಡ ನೇರಪ್ರಸಾರವನ್ನು ನೋಡಬಹುದಾಗಿದೆ.

ನ್ಯೂಲ್ಯಾಂಡ್ಸ್ ಅಂಗಳದಲ್ಲಿ ಮೊದಲು ಬ್ಯಾಟಿಂಗ್ ಮಾಡುವ ತಂಡಗಳೇ ಹೆಚ್ಚಿನ ಬಾರಿ ಗೆಲುವು ಸಾಧಿಸಿರುವುದರಿಂದ ಟಾಸ್ ಗೆಲ್ಲುವ ತಂಡ ಬ್ಯಾಟಿಂಗ್ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಇಲ್ಲಿನ ಅಂಗಳದಲ್ಲಿ ಮೊದಲ ಇನ್ನಿಂಗ್ಸ್‌ ಸರಾಸರಿ ಸ್ಕೋರ್ 149 ಆಗಿದ್ದು, ಎರಡನೇ ಇನ್ನಿಂಗ್ಸ್ ಮೊತ್ತ 122 ಆಗಿದೆ.

ಆಸ್ಟ್ರೇಲಿಯಾ ಭಾರತದ ವಿರುದ್ಧ ಕೊನೆಯದಾಗಿ ಆಡಿರುವ 10 ಟಿ20 ಪಂದ್ಯಗಳಲ್ಲಿ 9 ಬಾರಿ ಜಯ ಕಂಡಿದ್ದು ಒಮ್ಮೆ ಮಾತ್ರ ಸೋಲನುಭವಿಸಿದೆ. ಒಟ್ಟಾರೆ, ಭಾರತ ಆಸ್ಟ್ರೇಲಿಯಾ 30 ಬಾರಿ ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಇದರಲ್ಲಿ ಆಸ್ಟ್ರೇಲಿಯಾ 22 ಬಾರಿ ಜಯ ಸಾಧಿಸಿದ್ದು, ಭಾರತ 7 ಪಂದ್ಯಗಳಲ್ಲಿ ಮಾತ್ರ ಜಯಗಳಿಸಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.

The India Team Will Face The Australian Team In The Womens T20 World Cup Semifinals On Thursday

ಉಭಯ ತಂಡಗಳ ವಿವರ

ಭಾರತ : ಯಾಸ್ತಿಕಾ ಭಾಟಿಯಾ, ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ರಾಧಾ ಯಾದವ್, ರಾಜೇಶ್ವರಿ ಗಾಯಕ್ವಾಡ್, ರೇಣುಕಾ ಠಾಕೂರ್ ಸಿಂಗ್, ಸ್ಮೃತಿ ಮಂಧಾನ, ಶಿಖಾ ಪಾಂಡೆ ದೇವಿಕಾ ವೈದ್ಯ, ಅಂಜಲಿ ಸರ್ವಾಣಿ

ಆಸ್ಟ್ರೇಲಿಯಾ ಮಹಿಳಾ ತಂಡ: ಮೆಗ್ ಲ್ಯಾನಿಂಗ್ (ನಾಯಕಿ), ಅಲಿಸ್ಸಾ ಹೀಲಿ (ವಿಕೆಟ್ ಕೀಪರ್), ಡಾರ್ಸಿ ಬ್ರೌನ್, ಆಶ್ಲೆ ಗಾರ್ಡ್ನರ್, ಕಿಮ್ ಗಾರ್ತ್, ಹೀಥರ್ ಗ್ರಹಾಂ, ಗ್ರೇಸ್ ಹ್ಯಾರಿಸ್, ಜೆಸ್ ಜೊನಾಸ್ಸೆನ್, ಅಲಾನಾ ಕಿಂಗ್, ತಹ್ಲಿಯಾ ಮೆಕ್‌ಗ್ರಾತ್, ಬೆತ್ ಮೂನಿ, ಎಲ್ಲಿಸ್ ಪೆರಿ, ಮೇಗನ್ ಶುಟ್, ಅನ್ನಾಬೆಲ್ ಸದರ್ಲ್ಯಾಂಡ್, ಜಾರ್ಜಿಯಾ ವೇರ್ಹ್ಯಾಮ್.

Story first published: Thursday, February 23, 2023, 2:30 [IST]
Other articles published on Feb 23, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+