ಮುಂದಿನ ಒಂದು ದಶಕ ಯಾರಿಗೂ ಅಲ್ಲ, ಕೆಎಲ್ ರಾಹುಲ್‌ಗೆ ಸೇರಿದ್ದು ಎಂದು ಕೊಂಡಾಡಿದ ಮಾಜಿ ಕ್ರಿಕೆಟಿಗ

ಟೀಮ್ ಇಂಡಿಯಾದಲ್ಲಿ ಕಳೆದೆರಡು ತಿಂಗಳುಗಳಿಂದ ಆಗುತ್ತಿರುವ ಬದಲಾವಣೆಗಳು ಒಂದೆರಡಲ್ಲ. ಕಳೆದ ವರ್ಷ ನಡೆದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯವರೆಗೂ ಭಾರತ ಏಕದಿನ, ಟಿ ಟ್ವೆಂಟಿ ಮತ್ತು ಟೆಸ್ಟ್ ಮೂರೂ ಮಾದರಿಗಳಿಗೂ ವಿರಾಟ್ ಕೊಹ್ಲಿಯೇ ನಾಯಕನಾಗಿದ್ದರು. ಆದರೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬೆನ್ನಲ್ಲೇ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ತ್ಯಜಿಸಿದ ವಿರಾಟ್ ಕೊಹ್ಲಿ ನಂತರ ಭಾರತ ಏಕದಿನ ತಂಡದ ನಾಯಕತ್ವವನ್ನು ಕೂಡ ಕಳೆದುಕೊಂಡರು. ಹೀಗೆ ವಿರಾಟ್ ಕೊಹ್ಲಿ ನಂತರ ಭಾರತ ಟಿ ಟ್ವೆಂಟಿ ಮತ್ತು ಏಕದಿನ ತಂಡಗಳ ನಾಯಕತ್ವವನ್ನು ರೋಹಿತ್ ಶರ್ಮಾ ಅವರ ಹೆಗಲಿಗೆ ಬಿಸಿಸಿಐ ಹಾಕಿತ್ತು. ಹಾಗೂ ಉಪ ನಾಯಕನ ಜವಾಬ್ದಾರಿಯನ್ನು ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ವಹಿಸಲಾಗಿತ್ತು.
ಆದರೆ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳುವ ಮುನ್ನ ಮುಂಬೈನಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ರೋಹಿತ್ ಶರ್ಮಾ ಗಾಯದ ಸಮಸ್ಯೆಗೆ ಒಳಗಾದ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದರು. ಹೀಗೆ ರೋಹಿತ್ ಶರ್ಮಾ ಟೆಸ್ಟ್ ಸರಣಿಯಿಂದ ಹೊರಬಿದ್ದ ಬೆನ್ನಲ್ಲೇ ಕೆಎಲ್ ರಾಹುಲ್ ಭಾರತ ಟೆಸ್ಟ್ ತಂಡದ ಉಪನಾಯಕನ ಜವಾಬ್ದಾರಿಯನ್ನು ಹೊತ್ತುಕೊಂಡರು. ಹಾಗೂ ರೋಹಿತ್ ಶರ್ಮಾ ಇನ್ನೂ ಕೂಡ ಕಣಕ್ಕಿಳಿಯಲು ಫಿಟ್ ಆಗದೇ ಇರುವ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಕೂಡ ಹೊರಬಿದ್ದರು. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ ಎಂಬ ಘೋಷಣೆಯನ್ನು ಬಿಸಿಸಿಐ ಹೊರಡಿಸಿತು.
ಹೀಗೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾ ನಾಯಕನಾಗಿ ಆಯ್ಕೆಯಾದ ಕೆ ಎಲ್ ರಾಹುಲ್ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯದಲ್ಲಿಯೂ ಕೂಡ ನಾಯಕನಾಗಿ ಟೀಮ್ ಇಂಡಿಯಾವನ್ನು ಮುನ್ನಡೆಸುತ್ತಿದ್ದಾರೆ. ಹೌದು, ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಗಾಯದ ಸಮಸ್ಯೆಗೊಳಗಾಗಿರುವ ವಿರಾಟ್ ಕೊಹ್ಲಿ ಅಲಭ್ಯರಾದ ಕಾರಣ ಇದೀಗ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ನಾಯಕತ್ವವನ್ನು ಹೊರುವ ಜವಾಬ್ದಾರಿ ಕೆಎಲ್ ರಾಹುಲ್ ಹೆಗಲ ಮೇಲೆ ಬಿದ್ದಿದೆ. ಹೀಗೆ ಸಾಲು ಸಾಲು ಜವಾಬ್ದಾರಿಗಳನ್ನು ಹೊತ್ತುಕೊಳ್ಳುತ್ತಿರುವ ಕೆಎಲ್ ರಾಹುಲ್ ಕುರಿತು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿದ್ದು ಹಲವಾರು ಮಾಜಿ ಕ್ರಿಕೆಟಿಗರು ಈ ಕುರಿತಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಅದರಂತೆ ಭಾರತದ ಮಾಜಿ ಕ್ರಿಕೆಟಿಗ ಸಬಾ ಕರೀಮ್ ಕೂಡಾ ಕೆಎಲ್ ರಾಹುಲ್ ನಾಯಕನಾಗಿ ಆಯ್ಕೆಯಾಗಿರುವುದರ ಕುರಿತು ಮಾತನಾಡಿದ್ದು ಈ ಕೆಳಕಂಡಂತೆ ಹೇಳಿಕೆಗಳನ್ನು ನೀಡಿದ್ದಾರೆ.

ಮುಂದಿನ ದಶಕ ಸಂಪೂರ್ಣವಾಗಿ ಕೆಎಲ್ ರಾಹುಲ್ ಅವರಿಗೆ ಸೇರಿದ್ದು
ಕೆ ಎಲ್ ರಾಹುಲ್ ಅವರಿಗೆ ನಾಯಕತ್ವವನ್ನು ನೀಡಿದ್ದರ ಕುರಿತು ಪ್ರತಿಕ್ರಿಯಿಸಿರುವ ಸಬಾ ಕರೀಮ್ ಬಿಸಿಸಿಐನ ಈ ನಿರ್ಧಾರವನ್ನು ಅತ್ಯದ್ಬುತವಾದ ನಿರ್ಧಾರ ಎಂದು ಹೊಗಳಿದ್ದಾರೆ. ಅಷ್ಟೇ ಅಲ್ಲದೆ ಮುಂದಿನ ವರ್ಷ ಮಾತ್ರವಲ್ಲ ಮುಂದಿನ ದಶಕ ಪೂರ್ತಿ ಕೆ ಎಲ್ ರಾಹುಲ್ ಅವರಿಗೆ ಸೇರಿದ್ದು ಎಂದು ಸಬಾ ಕರೀಮ್ ಕೆಎಲ್ ರಾಹುಲ್ ಸಾಕಷ್ಟು ದಿನಗಳ ಕಾಲ ಭಾರತ ತಂಡದ ನಾಯಕನಾಗಿರಲಿದ್ದಾರೆ ಎಂಬುದರ ಕುರಿತು ಭವಿಷ್ಯ ನುಡಿದಿದ್ದಾರೆ.

ನಾಯಕನಾಗಿ ಪಂಜಾಬ್ ಕಿಂಗ್ಸ್ ತಂಡವನ್ನು ಉತ್ತಮವಾಗಿ ಮುನ್ನಡೆಸಿದ್ದ ರಾಹುಲ್
ಇನ್ನೂ ಮುಂದುವರಿದು ಈ ವಿಷಯದ ಕುರಿತಾಗಿ ಮಾತನಾಡಿರುವ ಸಬಾ ಕರೀಮ್ ಕೆಎಲ್ ರಾಹುಲ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ನಾಯಕನಾಗಿ ಯಶಸ್ವಿಯಾಗಿ ಮುನ್ನಡೆಸಿದ್ದರು ಎಂದು ಶ್ಲಾಘಿಸಿದ್ದಾರೆ. ಕೆಎಲ್ ರಾಹುಲ್ ಪಂಜಾಬ್ ಕಿಂಗ್ಸ್ ನಾಯಕನಾದ ನಂತರ ತಮ್ಮ ಆಟದ ಕುಶಲತೆಯನ್ನು ಮತ್ತಷ್ಟು ಹೆಚ್ಚಿಸಿಕೊಂಡು ಜವಾಬ್ದಾರಿಯುತ ಆಟವನ್ನು ಆಡಿದರು. ಇದೇ ರೀತಿ ನಾಯಕತ್ವದ ಜವಾಬ್ದಾರಿ ಮತ್ತು ಬ್ಯಾಟಿಂಗ್ ಎರಡನ್ನೂ ಕೂಡ ಟೀಮ್ ಇಂಡಿಯಾದಲ್ಲಿಯೂ ಕೆ ಎಲ್ ರಾಹುಲ್ ಸಮನಾಗಿ ನಿರ್ವಹಿಸಲಿದ್ದಾರೆ ಎಂದು ಸಬಾ ಕರೀಮ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉತ್ತಮ ಫಾರ್ಮ್‌ನಲ್ಲಿದ್ದಾರೆ ರಾಹುಲ್
ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಸೆಂಚುರಿಯನ್ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿರುವ ಕೆಎಲ್ ರಾಹುಲ್ ಸದ್ಯ ಏಕದಿನ, ಟಿ ಟ್ವೆಂಟಿ ಮತ್ತು ಟೆಸ್ಟ್ ಮೂರೂ ಮಾದರಿಗಳಲ್ಲಿಯೂ ಉತ್ತಮ ಫಾರ್ಮ್ ಹೊಂದಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ ನಾಯಕತ್ವದ ಜವಾಬ್ದಾರಿಯನ್ನು ಹೊತ್ತುಕೊಂಡರೂ ಕೂಡ ಅದೇ ರೀತಿಯ ಉತ್ತಮ ಪ್ರದರ್ಶನವನ್ನು ನೀಡಲಿದ್ದಾರೆ ಎಂಬ ನಿರೀಕ್ಷೆ ಕ್ರಿಕೆಟ್ ಅಭಿಮಾನಿಗಳಲ್ಲಿ ಇರುವುದಂತೂ ನಿಜ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications