ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಈ ಬಾರಿಯ ಐಪಿಎಲ್ ಮುಂದುವರಿಯುವುದು ಅನುಮಾನ; ಪ್ರಮುಖ ಕಾರಣ ಬಿಚ್ಚಿಟ್ಟ ವೃದ್ಧಿಮಾನ್ ಸಾಹ

The resumption of IPL 2021 this year is doubtful says Widdhiman Saha

ಏಪ್ರಿಲ್ 9ರಂದು ಆರಂಭವಾಗಿದ್ದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಯಾವುದೇ ಅಡಚಣೆಗಳಿಲ್ಲದೆ 29 ಪಂದ್ಯಗಳನ್ನು ಯಶಸ್ವಿಯಾಗಿ ಪೂರೈಸಿತು. ಆದರೆ ಐಪಿಎಲ್ ಬಯೋಬಬಲ್ ಒಳಗಡೆ ಕೊರೊನಾ ಪ್ರವೇಶಿಸಿ ವಿವಿಧ ತಂಡಗಳ ಕೆಲ ಆಟಗಾರರು ಮತ್ತು ತರಬೇತುದಾರರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಪ್ರಸ್ತುತ ಐಪಿಎಲ್ ಟೂರ್ನಿಯನ್ನು ಮುಂದೂಡಲಾಯಿತು.

ಒಲಿಂಪಿಕ್ಸ್ ಪದಕ ವಿಜೇತ ರಸ್ಲರ್ ಸುಶೀಲ್ ಕುಮಾರ್ ಬಂಧನಒಲಿಂಪಿಕ್ಸ್ ಪದಕ ವಿಜೇತ ರಸ್ಲರ್ ಸುಶೀಲ್ ಕುಮಾರ್ ಬಂಧನ

ಸದ್ಯ ಸೆಪ್ಟೆಂಬರ್ ತಿಂಗಳಿನಲ್ಲಿ ಈ ಬಾರಿಯ ಐಪಿಎಲ್ ಟೂರ್ನಿಯನ್ನು ಮುಂದುವರಿಸುವ ಚಿಂತನೆಯನ್ನು ಬಿಸಿಸಿಐ ನಡೆಸುತ್ತಿದೆ. ಇಂಗ್ಲೆಂಡ್ ಅಥವಾ ಯುಎಇಯಲ್ಲಿ ಈ ಬಾರಿಯ ಐಪಿಎಲ್‌ನ ಉಳಿದಿರುವ 31 ಪಂದ್ಯಗಳನ್ನು ನಡೆಸಲಾಗುವುದು ಎಂಬ ಸುದ್ದಿಗಳು ಹೆಚ್ಚಾಗಿ ಹರಿದಾಡುತ್ತಿವೆ. ಆದರೆ ಈ ನಡುವೆ ವಿವಿಧ ದೇಶಗಳು ಅಂತಾರಾಷ್ಟ್ರೀಯ ಸರಣಿಗಳನ್ನು ಘೋಷಣೆ ಮಾಡುತ್ತಿದ್ದು ವಿದೇಶಿ ಆಟಗಾರರು ಐಪಿಎಲ್ ಆಡುವುದೇ ಅನುಮಾನವಾಗಿಬಿಟ್ಟಿದೆ. ಹೌದು ಇತ್ತೀಚೆಗೆ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡದ ಆಟಗಾರರು ಐಪಿಎಲ್ ಮುಂದುವರೆದರೂ ಸಹ ಆಡುವುದು ಬಹುತೇಕ ಅಸಾಧ್ಯ ಎಂಬ ಸುದ್ದಿ ಹರಿದಾಡಿತ್ತು. ಇದೀಗ ಅದಕ್ಕೆ ಪುಷ್ಟಿ ನೀಡುವಂತಹ ಹೇಳಿಕೆಯನ್ನು ವೃದ್ಧಿಮಾನ್ ಸಾಹ ನೀಡಿದ್ದಾರೆ.

ಐಪಿಎಲ್‌ನಲ್ಲಿ ಅವಕಾಶ ಸಿಗದೇ ನೊಂದಿದ್ದಾಗ ನೆರವಾಗಿದ್ದು ದ್ರಾವಿಡ್: ಅವೇಶ್ ಖಾನ್ಐಪಿಎಲ್‌ನಲ್ಲಿ ಅವಕಾಶ ಸಿಗದೇ ನೊಂದಿದ್ದಾಗ ನೆರವಾಗಿದ್ದು ದ್ರಾವಿಡ್: ಅವೇಶ್ ಖಾನ್

ಪ್ರಸ್ತುತ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಆಟಗಾರನಾಗಿರುವ ವೃದ್ಧಿಮಾನ್ ಸಾಹ ಕೂಡ ಕೊರೊನಾಸೋಂಕಿಗೆ ಒಳಗಾಗಿದ್ದರು. ಇತ್ತೀಚೆಗಷ್ಟೇ ಮಾತನಾಡಿರುವ ಸಾಹ 'ಐಪಿಎಲ್ ಆಡುವ ಬಹುತೇಕ ವಿದೇಶಿ ಆಟಗಾರರು ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ತಂಡಗಳ ಆಟಗಾರರಾಗಿದ್ದಾರೆ. ಈ ಆಟಗಾರರು ತಮ್ಮ ಅಂತಾರಾಷ್ಟ್ರೀಯ ತಂಡಗಳ ಪರ ಸರಣಿಗಳಲ್ಲಿ ಭಾಗವಹಿಸುವುದರಿಂದ ಮುಂದುವರಿಯಲಿರುವ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸುವುದು ಕಷ್ಟ, ಹೀಗಾಗಿ ಪ್ರಸ್ತುತ ಐಪಿಎಲ್ ಟೂರ್ನಿ ನಡೆಯುವುದು ಅನುಮಾನ ಎನಿಸುತ್ತಿದೆ. ವಿದೇಶಿ ಆಟಗಾರರಿಲ್ಲದ ಐಪಿಎಲ್ ಟೂರ್ನಿ ವೃದ್ಧಿಸಲ್ಪಟ್ಟ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಇದ್ದಂತೆ' ಎಂದು ಹೇಳಿಕೆ ನೀಡಿದ್ದಾರೆ.

Story first published: Monday, May 24, 2021, 9:55 [IST]
Other articles published on May 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X