For Quick Alerts
ALLOW NOTIFICATIONS  
For Daily Alerts
 

PAK vs BAN: ಸುರಕ್ಷತೆಯ ಹಿನ್ನೆಲೆ, ಬಾಂಗ್ಲಾ ವಿರುದ್ಧ ಎರಡನೇ ಟೆಸ್ಟ್ ಸ್ಥಳಾಂತರಿಸಿದ PCB

ಬಾಂಗ್ಲಾದೇಶ ತಂಡ ಸದ್ಯ ಪಾಕಿಸ್ತಾನ ಪ್ರವಾಸದಲ್ಲಿದೆ. ಈ ಪ್ರವಾಸದಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ ವಿರುದ್ಧ ಎರಡು ಟೆಸ್ಟ್‌ ಪಂದ್ಯಗಳನ್ನು ಆಡಲಿದೆ. ಈ ಸರಣಿಯ ಎರಡನೇ ಪಂದ್ಯ ಸುರಕ್ಷತೆಯ ದೃಷ್ಟಿಯಿಂದ ಬೇರೆ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ನಿಗದಿತ ಸಮಯಕ್ಕಿಂತ ಮೊದಲೇ ಬಾಂಗ್ಲಾ ಪಾಕ್‌ ಪ್ರವಾಸ ಬೆಳೆಸಿತ್ತು. ಬಾಂಗ್ಲಾದೇಶದಲ್ಲಿ ಹಿಂಸಾಚಾರಗಳ ನಡೆತ್ತಿರುವ ಹಿನ್ನೆಲೆ, ಅಭ್ಯಾಸ ನಡೆಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಬಾಂಗ್ಲಾ ಐದು ದಿನ ಮುಂಚಿತವಾಗಿ ಪಾಕ್‌ಗೆ ಬಂದಿತ್ತು. ಈ ಸರಣಿಯ ಮೊದಲ ಪಂದ್ಯ ಬುಧವಾರ ಆಗಸ್ಟ್‌ 21 ರಂದು ನಡೆಯಲಿದೆ. ಸರಣಿಯ ಎರಡನೇ ಪಂದ್ಯದ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ.

The second Pakistan vs Bangladesh Test has been moved to Rawalpindi

ಎರಡನೇ ಟೆಸ್ಟ್‌ ಪಂದ್ಯದ ಸ್ಥಳವನ್ನು ಪಿಸಿವಿ ಸ್ಥಳಾಂತರಿಸಿದೆ. ಉಭಯ ದೇಶಗಳ ಎರಡನೇ ಟೆಸ್ಟ್‌ ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ಈಗ ಪಿಸಿಬಿ ಎರಡನೇ ಪಂದ್ಯವನ್ನು ಸ್ಥಳಾಂತರಿಸಿದೆ. ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಕ್ರೀಡಾಂಗಣವನ್ನು ಸಿದ್ಧಪಡಿಸುವುದು ಪಿಸಿಬಿ ಉದ್ದೇಶವಾಗಿದೆ. ವೇಳಾಪಟ್ಟಿಯ ಅನುಸಾರ ಉಭಯ ತಂಡಗಳ ನಡುವಿನ ಎರಡನೇ ಟೆಸ್ಟ್‌ ಆಗಸ್ಟ್ 30 ರಿಂದ ಸೆಪ್ಟೆಂಬರ್ 3 ರವರೆಗೆ ನಡೆಯಬೇಕಿತ್ತು. ಈ ಮೈದಾನದಲ್ಲಿ ಪ್ರೇಕ್ಷಕರಿಲ್ಲದೆ ಪಂದ್ಯ ನಡೆಸಲು ಉದ್ದೇಶಿಸಲಾಗಿತ್ತು. ಈಗ ಎರಡನೇ ಟೆಸ್ಟ್‌ ಪಂದ್ಯವನ್ನು ರಾವಲ್ಪಿಂಡಿಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಅಭಿಮಾನಿಗಳಿಗೆ ಪಂದ್ಯವನ್ನು ನೋಡುವ ಅವಕಾಶವನ್ನು ಕಲ್ಪಿಸಲಾಗಿದೆ.

ಸ್ಥಳಾಂತರ ಏಕೆ? ಪಿಸಿಬಿ ಹೇಳಿದ್ದೇನು?

ಕರಾಚಿಯಲ್ಲಿ ಎರಡನೇ ಟೆಸ್ಟ್‌ ಪಂದ್ಯವನ್ನು ಆಡಲು ಉದ್ದೇಶಿಸಲಾಗಿತ್ತು. ಈ ವೇಳೆ ಮೈದಾನದಲ್ಲಿ ನಿರ್ಮಾಣ ಕಾರ್ಯಗಳು ಭರದಿಂದ ಸಾಗಿವೆ. ಹೀಗಾಗ ಮೈದಾನದಲ್ಲಿ ಶಬ್ದ ಮಾಲಿನ್ಯ, ಧೂಳು ಆಟಗಾರರಿಗೆ ಕಿರಿಕಿರಿ ಉಂಟು ಮಾಡುತ್ತದೆ. ಈ ಉದ್ದೇಶದಿಂದಲೇ ಎರಡನೇ ಪಂದ್ಯವನ್ನು ಸ್ಥಳಾಂತರಿಸಲಾಗಿದೆ. ಎರಡನೇ ಟೆಸ್ಟ್‌ ರಾವಲ್ಪಿಂಡಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಇದರೊಂದಿಗೆ ಅಕ್ಟೋಬರ್ 15-19 ರಂದು ಕರಾಚಿಯಲ್ಲಿ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ.

Story first published: Monday, August 19, 2024, 10:25 [IST]
Other articles published on Aug 19, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+