ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆ ಒಬ್ಬ ಆಟಗಾರನಿಂದ ನನಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಸಿಗಲಿಲ್ಲ: ಅಕ್ಷರ್ ಪಟೇಲ್

The way Jadeja was performing it was very difficult to find a place in Indian team says Axar Patel

2014ರಲ್ಲಿ ಢಾಕಾದಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಅಕ್ಷರ್ ಪಟೇಲ್ ಪದಾರ್ಪಣೆ ಮಾಡಿದರು. ಅಕ್ಷರ್ ಪಟೇಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ 7 ವರ್ಷಗಳು ಕಳೆದಿದ್ದರೂ ಸಹ ಟೀಮ್ ಇಂಡಿಯಾ ಪರ ಆಡುವ ಅವಕಾಶ ಸಿಕ್ಕಿರುವುದು ಕಡಿಮೆ ಪಂದ್ಯಗಳಲ್ಲಿ. ಇದುವರೆಗೂ ಅಕ್ಷರ್ ಪಟೇಲ್ 38 ಏಕದಿನ ಪಂದ್ಯಗಳು ಮತ್ತು 12 ಟಿ ಟ್ವೆಂಟಿ ಪಂದ್ಯಗಳಲ್ಲಿ ಮಾತ್ರ ಟೀಮ್ ಭಾರತದ ಪರ ಆಡುವ ಅವಕಾಶವನ್ನು ಪಡೆದುಕೊಂಡಿದ್ದಾರೆ.

ಶೀಘ್ರದಲ್ಲಿಯೇ ಕೊಹ್ಲಿ ರೋಹಿತ್‌ಗೆ ನಾಯಕತ್ವ ಬಿಟ್ಟುಕೊಡುವುದು ಖಚಿತ ಎಂದ ಮಾಜಿ ಕ್ರಿಕೆಟಿಗ

ಇನ್ನು ಟೆಸ್ಟ್ ಕ್ರಿಕೆಟ್‍ಗೆ ಅಕ್ಷರ್ ಪಟೇಲ್ ಪದಾರ್ಪಣೆ ಮಾಡುವ ಅವಕಾಶವನ್ನು ಪಡೆದದ್ದು ಪ್ರಸ್ತುತ ವರ್ಷದಲ್ಲಿಯೇ. ಹೌದು ಈ ವರ್ಷದ ಆರಂಭದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಸರಣಿಯ ವೇಳೆ ಭಾರತ ತಂಡದ ಪ್ರಮುಖ ಆಲ್‌ರೌಂಡರ್ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿಯುವಂತಹ ಪರಿಸ್ಥಿತಿ ಬಂದಿತ್ತು. ಹೀಗಾಗಿ ಜಡೇಜಾ ಸ್ಥಾನಕ್ಕೆ ಅಕ್ಷರ್ ಪಟೇಲ್‌ರನ್ನು ಕರೆತರಲಾಯಿತು.

ರೋಹಿತ್, ರಾಹುಲ್ ಅಲ್ಲ ಈತನೇ ಕೊಹ್ಲಿ ನಂತರ ಭಾರತದ ನಾಯಕ ಎಂದ ಸಲ್ಮಾನ್ ಬಟ್

'ನನ್ನ ಗಾಯದ ಸಮಸ್ಯೆಯಿಂದ ನಾನು ಭಾರತ ಏಕದಿನ ತಂಡದಲ್ಲಿ ಸ್ಥಾನವನ್ನು ಕಳೆದುಕೊಂಡೆ. ಆದರೆ ಟೆಸ್ಟ್ ಕ್ರಿಕೆಟ್ ವಿಷಯಕ್ಕೆ ಬಂದರೆ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ತಂಡದಲ್ಲಿದ್ದರು, ಈ ಇಬ್ಬರೂ ಸಹ ಉತ್ತಮ ಪ್ರದರ್ಶನ ನೀಡುತ್ತಿದ್ದ ಹಿನ್ನೆಲೆಯಲ್ಲಿ ತಂಡದಲ್ಲಿ ಅವಕಾಶ ಪಡೆದುಕೊಳ್ಳುವುದು ಸುಲಭವಾಗಿರಲಿಲ್ಲ. ಅದರಲ್ಲಿಯೂ ಜಡೇಜಾ ನೀಡುತ್ತಿದ್ದ ಪ್ರದರ್ಶನ ಅತ್ಯದ್ಭುತ, ಆತ ತಂಡದಲ್ಲಿರುವಾಗ ಬೇರೆ ಯಾವುದೇ ಎಡಗೈ ಸ್ಪಿನ್ನರ್‌ಗೆ ತಂಡದಲ್ಲಿ ಅವಕಾಶ ಸಿಗುವುದಿಲ್ಲ, ಅಷ್ಟರಮಟ್ಟಿಗೆ ಜಡೇಜಾ ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್‍ನಲ್ಲಿ ಪ್ರದರ್ಶನವನ್ನು ನೀಡುತ್ತಿದ್ದರು. ಈ ನಡುವೆ ನನಗೆ ಅವಕಾಶ ಸಿಕ್ಕಾಗ ಉತ್ತಮ ಪ್ರದರ್ಶನವನ್ನು ನೀಡಲು ಪ್ರಯತ್ನಿಸುತ್ತಿದ್ದೆ' ಎಂದು ಅಕ್ಷರ್ ಪಟೇಲ್ ರವೀಂದ್ರ ಜಡೇಜಾ ಪ್ರದರ್ಶನವನ್ನು ಕೊಂಡಾಡಿದ್ದಾರೆ.

ಅವಕಾಶ ಸಿಕ್ಕ ಮೊದಲ ಟೆಸ್ಟ್ ಸರಣಿಯಲ್ಲಿಯೇ ಉತ್ತಮ ಪ್ರದರ್ಶನ

ಅವಕಾಶ ಸಿಕ್ಕ ಮೊದಲ ಟೆಸ್ಟ್ ಸರಣಿಯಲ್ಲಿಯೇ ಉತ್ತಮ ಪ್ರದರ್ಶನ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಅಕ್ಷರ್ ಪಟೇಲ್ ಆ ಸರಣಿಯಲ್ಲಿ ಒಟ್ಟು 4 ಬಾರಿ 5 ವಿಕೆಟ್‍ಗಳ ಗೊಂಚಲನ್ನು ಪಡೆದು ಮಿಂಚಿದರು. ಹೀಗೆ ಮೊದಲ ಟೆಸ್ಟ್ ಸರಣಿಯಲ್ಲಿ ಆಡಿದ 3 ಪಂದ್ಯಗಳ ಪೈಕಿ 27 ವಿಕೆಟ್ ಪಡೆದು ಮಿಂಚಿದ ಅಕ್ಷರ್ ಪಟೇಲ್ ಅತ್ಯದ್ಭುತ ಆರಂಭವನ್ನು ಪಡೆದುಕೊಂಡರು.

ಇಂಗ್ಲೆಂಡ್ ಪ್ರವಾಸಕ್ಕೂ ಆಯ್ಕೆ

ಇಂಗ್ಲೆಂಡ್ ಪ್ರವಾಸಕ್ಕೂ ಆಯ್ಕೆ

ಅನೇಕ ವರ್ಷಗಳಿಂದ ಟೆಸ್ಟ್ ಕ್ರಿಕೆಟ್ ತಂಡದಲ್ಲಿ ಸ್ಥಾನ ಸಿಕ್ಕರೆ ಸಾಕು ಎಂದು ಕಾಯುತ್ತಿದ್ದ ಅಕ್ಷರ್ ಪಟೇಲ್ ಇದೀಗ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯಕ್ಕೆ ಪ್ರಕಟವಾಗಿರುವ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಆಡಿರುವ ಒಂದೇ ಒಂದು ಟೆಸ್ಟ್ ಸರಣಿ ಮೂಲಕ ತನ್ನ ಪ್ರತಿಭೆಯನ್ನು ಅಕ್ಷರ್ ಪಟೇಲ್ ಸಾಬೀತುಪಡಿಸಿಕೊಂಡಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಯಾರಿಗೆ ಅವಕಾಶ?

ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಯಾರಿಗೆ ಅವಕಾಶ?

ಇಂಗ್ಲೆಂಡ್ ಪ್ರವಾಸಕ್ಕೆ ಪ್ರಕಟವಾಗಿರುವ ಭಾರತ ತಂಡದಲ್ಲಿ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಜೊತೆ ಅಕ್ಷರ್ ಪಟೇಲ್ ಕೂಡಾ ಸ್ಥಾನ ಪಡೆದುಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್‍ನಲ್ಲಿ ದೊಡ್ಡ ಅನುಭವವಿರುವ ರವೀಂದ್ರ ಜಡೇಜಾ ಇರುವಾಗ ಅಕ್ಷರ್ ಪಟೇಲ್‌ಗೆ ಆಡುವ ಬಳಗದಲ್ಲಿ ಅವಕಾಶ ಸಿಗುತ್ತಾ ಎಂಬುದನ್ನು ಕಾದು ನೋಡಬೇಕು.

Story first published: Friday, May 28, 2021, 8:35 [IST]
Other articles published on May 28, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X