ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿಶ್ವ ಸೂಪರ್ ಹೀರೋನ ನಿರೀಕ್ಷೆಯಲ್ಲಿದೆ: ಭಾರತೀಯ ಕ್ರಿಕೆಟಿಗನ ಮೇಲೆ ಗ್ರೇಮ್ ಸ್ವಾನ್ ಭರವಸೆ

The world needs superheroes right now: Graeme Swann on Rahul Tewatia

ಇಂಗ್ಲೆಂಡ್ ವಿರುದ್ಧಧ ಟೆಸ್ಟ್ ಸರಣಿಯ ಅಂತ್ಯದ ಬಳಿಕ ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮುಖಾಮುಖಿಯಾಗಲಿದೆ. ಈ ಸರಣಿಗಾಗಿ ಟೀಮ್ ಇಂಡಿಯಾ 19 ಆಟಗರರ ಬಳಗವನ್ನು ಪ್ರಕಟಿಸಿದೆ. ಇದರಲ್ಲಿ ಮೂವರು ಆಟಗಾರರು ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನವನ್ನು ಪಡೆದಿದ್ದಾರೆ. ರಾಹುಲ್ ತೆವಾಟಿಯಾ, ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶಾನ್ ಟೀಮ್ ಇಂಡಿಯಾಗೆ ಮೊದಲ ಬಾರಿಗೆ ಆಯ್ಕೆಯಾದ ಆಟಗಾರಾಗಿದ್ದಾರೆ.

ಈ ಬಗ್ಗೆ ಇಂಗ್ಲೆಂಡ್ ತಂಡದ ಮಾಜಿ ಕ್ರಿಕೆಟಿಗ ಗ್ರೇನ್ ಸ್ವಾನ್ ಪ್ರತಿಕ್ರಿಯೆ ನೀಡಿದ್ದು ಭಾರತೀಯ ತಂಡಕ್ಕೆ ಮೊದಲ ಬಾರಿಗೆ ಆಯ್ಕೆಯಾಗಿರುವ ರಾಹುಲ್ ತೆವಾಟಿಯಾ ಬಗ್ಗೆ ಸಾಕಷ್ಟು ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ತೆವಾಟಿಯಾ ಆಡುವ ಅವಕಾಶವನ್ನು ಪಡೆದುಕೊಳ್ಳಬೇಕು ಎಂದಿದ್ದಾರೆ ಗ್ರೆಮ್ ಸ್ವಾನ್.

ಇಂಗ್ಲೆಂಡ್ ವಿರುದ್ಧದ ಟಿ20ಐ ಸರಣಿಗೆ ಟೀಮ್ ಇಂಡಿಯಾ ಪ್ರಕಟ!ಇಂಗ್ಲೆಂಡ್ ವಿರುದ್ಧದ ಟಿ20ಐ ಸರಣಿಗೆ ಟೀಮ್ ಇಂಡಿಯಾ ಪ್ರಕಟ!

ಟ್ವೀಟ್ ಮೂಲಕ ಸ್ವಾನ್ ಅಭಿನಂದನೆ

ಟ್ವೀಟ್ ಮೂಲಕ ಸ್ವಾನ್ ಅಭಿನಂದನೆ

"ಭಾರತೀಯ ತಂಡದಲ್ಲಿ ಸ್ಥಾನವನ್ನು ಪಡೆದಿರುವ ರಾಹುಲ್ ತೆವಾಟಿಯಾಗೆ ಅಭಿನಂದನೆಗಳು. ಟಿ20 ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ರಾಹುಲ್ ತೆವಾಟಿಯಾ ಆಡುವ ನಿರೀಕ್ಷೆಯನ್ನು ಹೊಂದಿದ್ದೇನೆ. ವಿಶ್ವ ಈಗ ಸೂಪರ್ ಹೀರೋನ ನಿರೀಕ್ಷೆಯಲ್ಲಿದೆ" ಎಂದು ಗ್ರೇಮ್ ಸ್ವಾನ್ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

ಕಳೆದ ಐಪಿಎಲ್‌ನಲ್ಲಿ ಮಿಂಚಿದ್ದ ತೆವಾಟಿಯಾ

ಕಳೆದ ಐಪಿಎಲ್‌ನಲ್ಲಿ ಮಿಂಚಿದ್ದ ತೆವಾಟಿಯಾ

ಕಳೆದ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ರಾಹುಲ್ ತೆವಾಟಿಯಾ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದರು. ಬೌಲಿಂಗ್‌ನಲ್ಲಿ ಅದ್ಭುತವಾಗಿ ನಿಯಂತ್ರಣ ಸಾಧಿಸಿದ್ದ ತೆವಾಟಿಯಾ ಬ್ಯಾಟಿಂಗ್‌ನಲ್ಲಿ ಸ್ಪೋಟ ಪ್ರದರ್ಶನ ನೀಡಲು ಸಫಲರಾಗಿದ್ದರು. ಕೆಳ ಕ್ರಮಾಂಕದಲ್ಲಿ ಅನಿವಾರ್ಯ ಸಂದರ್ಭಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಬ್ಯಾಟ್ ಮೂಲಕ ಕೊಡುಗೆಯನ್ನು ನೀಡಿ ಗಮನಸೆಳೆಯುವಲ್ಲಿ ಯಶಸ್ವಿಯಾಗಿದ್ದರು.

ಪಂಜಾಬ್ ವಿರುದ್ಧ ಮ್ಯಾಚ್‌ ವಿನ್ನಿಂಗ್ ಪ್ರದರ್ಶನ

ಪಂಜಾಬ್ ವಿರುದ್ಧ ಮ್ಯಾಚ್‌ ವಿನ್ನಿಂಗ್ ಪ್ರದರ್ಶನ

ಕಳೆದ ಬಾರಿಯ ಐಪಿಎಲ್‌ನಲ್ಲಿ ರಾಹುಲ್ ತೆವಾಟಿಯಾ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಲೀಗ್ ಪಂದ್ಯದಲ್ಲಿ ನಿಡಿದ ಬ್ಯಾಟಿಂಗ್ ಪ್ರದರ್ಶನದ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದರು. ಆರಂಭದಲ್ಲಿ ಚೆಂಡನ್ನು ಸಂಪರ್ಕಿಸಲು ವಿಫಲರಾಗಿದ್ದ ತೆವಾಟಿಯಾ ಬಳಿಕ ಅಂತಿಮ ಹಂತದಲ್ಲಿ ಪಂದ್ಯದ ಗತಿಯನ್ನು ಬದಲಿಸಿದ್ದರು. ಮೊದಲ 19 ಎಸೆತಗಳಲ್ಲಿ 8 ರನ್ ಗಳಿಸಿದ್ದ ತೆವಾಟಿಯಾ ಮುಂದಿನ 12 ಎಸೆತಗಳಲ್ಲಿ 45 ರನ್ ಸಿಡಿಸಿ 224 ರನ್‌ಗಳ ದಾಖಲೆ ಮೊತ್ತವನ್ನು ಬೆನ್ನಟ್ಟಿ ಗೆಲ್ಲಲು ಕಾರಣರಾಗಿದ್ದರು.

Story first published: Monday, February 22, 2021, 8:02 [IST]
Other articles published on Feb 22, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X