Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಧೋನಿ ಕ್ರಿಕೆಟ್ ಭವಿಷ್ಯದ ಬಗ್ಗೆ ಗಂಗೂಲಿ ಹೇಳಿದ್ದೇನು?

Please ask Dhoni: Sourav Ganguly on MSD's participation in T20 World Cup | Oneindia Kannada
There is absolute clarity on Dhonis future - Ganguly

ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ ಭವಿಷ್ಯದ ಬಗ್ಗೆ ಅಭಿಮಾನಿಗಳಲ್ಲಿ ಗೊಂದಲಯಿದೆ. ಈ ವಿಚಾರವಾಗಿ ಧೋನಿ ಕೂಡ ಯಾವುದೇ ಸ್ಪಷ್ಟತೆಯನ್ನೂ ನೀಡಿಲ್ಲ. ಇತ್ತೀಚಿನ ಸಂದರ್ಶನವೊಂದರಲ್ಲಿ ಧೋನಿ ಜನವರಿ ತನಕ ಈ ವಿಚಾರವ ಏನನ್ನು ಕೇಳಬೇಡಿ ಎಂದ‍ಷ್ಟೇ ಹೇಳಿದ್ದರು. ಇದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಈ ವಿಚಾರವಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮಾತನಾಡಿದ್ದಾರೆ. ಎಮ್ ಎಸ್ ಧೋನಿ ಭವಿಷ್ಯಯದ ಕುರಿತಾಗಿ ಬಿಸಿಸಿಐ ಸಂಪೂರ್ಣ ಸ್ಪಷ್ಟತೆಯನ್ನು ಹೊಂದಿದೆ. ಆದರೆ ಅದನ್ನು ಈಗಲೇ ಬಹಿರಂಗಪಡಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಕಳೆದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ನ್ಯೂಜಿಲ್ಯಾಂಡ್ ವಿರುದ್ಧ ಸೋತು ಟೂರ್ನಿಯಿಂದ ಅನಿರೀಕ್ಷಿತವಾಗಿ ಹೊರ ಬಿದ್ದಿತ್ತು. ಅದಾದ ಬಳಿಕ ಮಹೇಂದ್ರ ಸಿಂಗ್ ಧೋನಿ ಯಾವುದೇ ಅಂತರಾಷ್ಟ್ರೀಯ ಪಂದ್ಯದಲ್ಲೂ ಭಾಗಿಯಾಗಿಲ್ಲ. ಹೀಗಾಗಿ ಧೋನಿ ಮುಂದಿನ ಭವಿಷ್ಯವೇನು ಅನ್ನೋದು ಎಲ್ಲರ ಪ್ರಶ್ನೆಯಾಗಿದೆ.

ಇನ್ನು ಮುಂದಿನ ವರ್ಷ ಆಸ್ಟ್ರೇಲಿಯಾದಲ್ಲಿ ಟಿ-ಟ್ವೆಂಟಿ ವಿಶ್ವಕಪ್ ಪಂದ್ಯಾವಳಿ ನಡೆಯಲಿದೆ. ಈ ಸಂದರ್ಭದಲ್ಲಿ ಧೋನಿ ಆಡದಿದ್ದರೆ ವಿಕೆಟ್‌ ಕೀಪಿಂಗ್‌ನಲ್ಲಿ ಯಾರು ಎಂಬ ಪ್ರಶ್ನೆಗೆ ಉತ್ತರವಿನ್ನು ಸ್ಪಷ್ಟವಾಗಿಲ್ಲ. ಹೀಗಾಗಿ ಸೌರವ್ ಗಂಗೂಲಿ ಹೇಳಿಕೆ ಇಲ್ಲಿ ಮಹತ್ವ ಪಡೆದಿದೆ.

Story first published: Sunday, December 1, 2019, 13:47 [IST]
Other articles published on Dec 1, 2019
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+