3 ತಿಂಗಳ ಹಿಂದೆ ಬೇಡವಾಗಿದ್ರು ಈ 3 ಆಟಗಾರರು!: ಈಗ ಟಿ20 ವಿಶ್ವಕಪ್ ಗೆಲ್ಲಬೇಕಾದರೆ ಅನಿವಾರ್ಯ!

ಕಳೆದ ವರ್ಷ ನಡೆದ ಟಿ20 ವಿಶ್ವಕಪ್‌ನ ಬಳಿಕ ಭಾರತ ಟಿ20 ತಂಡದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಟಿ20 ವಿಶ್ವಕಪ್‌ನ್ಲಲಿ ಅನುಭವಿಸಿದ ಹಿನ್ನಡೆಯನ್ನು ಗಮನದಲ್ಲಿಟ್ಟುಕೊಂಡು ತಂಡದಲ್ಲಿ ಕೆಲ ಬದಲಾವಣೆಗಳು ಆಗಿದೆ. ಇದರ ಭಾಗವಾಗಿ ಭಾರತೀಯ ಕ್ರಿಕೆಟ್ ತಂಡದಲ್ಲಿ ಕೆಲ ಆಟಗಾರರು ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಕುತೂಹಲಕಾರಿ ಸಂಗತಿಯೆಂದರೆ ಕೆಲವೇ ತಿಂಗಳ ಹಿಂದೆ ಕೆಲ ಆಟಗಾರರು ಭಾರತ ಕ್ರಿಕೆಟ್ ತಂಡದ ಭಾಗವೂ ಆಗಿರಲಿಲ್ಲ, ಆ ಸ್ಪರ್ಧೆಯಲ್ಲೂ ಕಾಣಿಸಿರಲಿಲ್ಲ. ಆದರೆ ಕಳೆದ ಐಪಿಎಲ್‌ನಲ್ಲಿ ಹಾಗೂ ಅದಾದ ಬಳಿಕ ನೀಡುತ್ತಿರುವ ಪ್ರದರ್ಶನದಿಂದಾಗಿ ಭಾರತ ಟಿ20 ತಂಡದ ಪ್ರಮುಖ ಭಾಗವಾಗಿದ್ದಾರೆ. ಮಾತ್ರವಲ್ಲ ಮುಂಬರುವ ಟಿ20 ವಿಶ್ವಕಪ್‌ನ ತಂಡದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಹಾಗಾದರೆ ಕೆಲವೇ ತಿಂಗಳ ಹಿಂದೆ ಭಾರತ ತಂಡದಲ್ಲಿ ಸ್ಥಾನ ಪಡೆಯದೆ ಇದ್ದು ಈಗ ತಂಡದಲ್ಲಿ ಪ್ರಮುಖ ಆಟಗಾರರಾಗಿ ಮಿಂಚುತ್ತಿರುವ ಆ ಮೂವರು ಆಟಗಾರರು ಯಾರು? ಮುಂದೆ ಓದಿ..

ಅನುಭವಿ ಆಟಗಾರ ದಿನೇಶ್ ಕಾರ್ತಿಕ್
ದಿನೇಶ್ ಕಾರ್ತಿಕ್ ಭಾರತ ಕ್ರಿಕೆಟ್ ತಂಡದ ಅನುಭವಿ ಆಟಗಾರ. ಕೆಲ ತಿಣಂಗಳ ಹಿಂದೆಯಷ್ಟೇ ದಿನೇಶ್ ಕಾರ್ತಿಕ್ ಅವರನ್ನು ನಿವೃತ್ತ ಆಟಗಾರ ಎನ್ನುವಂತೆ ನೋಡಲಾಗಿತ್ತು. ಅದಕ್ಕೆ ಕಾರಣ 2019ರ ಏಕದಿನ ವಿಶ್ವಕಪ್ ಬಳಿಕ ಭಾರತ ತಂಡದಲ್ಲಿ ಡಿಕೆ ಸ್ಥಾನವನ್ನು ಪಡೆದುಕೊಂಡಿರಲಿಲ್ಲ. ಸಾಕಷ್ಟು ಯುವ ಆಟಗಾರರು ಅದ್ಭುತ ಪ್ರದರ್ಶನ ನೀಡುತ್ತಿರುವ ಕಾರಣ ಡಿಕೆ ಮತ್ತೆ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಬಹುದು ಎಂದು ಯಾರೂ ಊಹಿಸಿರಲಿಲ್ಲ. ಆದರೆ ಈ ಬಾರಿಯ ಐಪಿಎಲ್‌ನಲ್ಲಿ ದಿನೇಶ್ ಕಾರ್ತಿಕ್ ಸ್ಥಿರವಾಗಿ ನೀಡಿದ ಪ್ರದರ್ಶನದ ಕಾರಣದಿಂದಾಗಿ ಡಿಕೆ ಭಾರತ ತಂಡದಲ್ಲಿ ಅಚ್ಚರಿಯ ರೀತಿಯಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಅಲ್ಲದೆ ಕಮ್‌ಬ್ಯಾಕ್ ಮಾಡಿದ ಬಳಿಕ ಕೆಲ ಅದ್ಭುತ ಇನ್ನಿಂಗ್ಸ್‌ಗಳನ್ನು ಭಾರತದ ಪರವಾಗಿ ನೀಡಿದ್ದಾರೆ. ಹೀಗಾಗಿ ಮುಂಬರುವ ವಿಶ್ವಕಪ್‌ಗೆ ಆಯ್ಕೆಯಾಗುವ ಸಾಧ್ಯತೆ ದಟ್ಟವಾಗಿದೆ.

ಭರವಸೆ ಮೂಡಿಸಿದ ದೀಪಕ್ ಹೂಡಾ
ದೀಪಕ್ ಹೂಡಾ ಕೂಡ ಕೆಲ ತಿಣಗಳ ಹಿಂದೆ ನೋಡಿದರೆ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸ್ಪರ್ಧೆಯಲ್ಲಿ ಕಾಣಿಸಿರಲಿಲ್ಲ. ಆದರೆ ಈಗ ಅವರ ಪ್ರದರ್ಶನ ಟಿ20 ವಿಶ್ವಕಪ್‌ಗೆ ಕಂಕ್ಕಿಳಿಯುವ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಮೂಡಿಸುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಹೂಡಾ ದೇಶೀಯ ಟೂರ್ನಿಯಲ್ಲಿ ಹಾಗೂ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ . ಭಾರತ ತಮಡದಲ್ಲಿಯೂ ಕೂಡ ಸಿಕ್ಕ ಅವಕಾಶದಲ್ಲಿ ಹೂಡಾ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದಾರೆ. ಇತ್ತೀಚೆಗೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಭರ್ಜರಿ ಶತಕವನ್ನು ಕೂಡ ಬಾರಿಸಿದ್ದಾರೆ. ಮುಂಬರುವ ವಿಶ್ವಕಪ್‌ನಲ್ಲಿ ದೀಪಕ್ ಹೂಡಾ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ.

ಅನುಭವಿ ಆಲ್‌ರೌಂಡರ್ ಹಾರ್ದಿಲ್ ಪಾಂಡ್ಯ
ಕಳೆದ ಟಿ20 ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿದ್ದ ಹಾರ್ದಿಕ್ ಪಾಂಡ್ಯ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿ ಬಂದಿತ್ತು. ಬೌಲಿಂಗ್ ಮಾಡಲು ಅಸಮರ್ಥರಾಗಿದ್ದ ಪಾಂಡ್ಯ ಬ್ಯಾಟಿಂಗ್‌ನಲ್ಲಿಯೂ ಗಮನಸೆಳೆಯುವ ಪ್ರದರ್ಶನ ನಿಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಫಿಟ್‌ನೆಸ್ ಹಾಗೂ ಫಾರ್ಮ್ ಬಗ್ಗೆ ಸಾಕಷ್ಟು ಕಟು ಮಾತುಗಳು ಕೇಳಿ ಬರತೊಡಗಿದ್ದವು. ಇದಕ್ಕೆ ಪೂರಕವಾಗಿ ವಿಶ್ವಕಪ್‌ನ ಬಳಿಕ ತಂಡದಿಂದ ಹಾರ್ದಿಕ್ ಪಾಂಡ್ಯ ಅವರನ್ನು ಕೈಬಿಡಲಾಗಿತ್ತು ಮಾತ್ರವಲ್ಲದೆ ಫಿಟ್‌ನೆಸ್ ಬಗ್ಗೆ ಕೆಲ ಎಚ್ಚರಿಕೆಗಳನ್ನು ಕೂಡ ನೀಡಲಾಗಿತ್ತು. ಹೀಗಾಗಿ ಸುಮಾರು ಐದು ತಿಂಗಳ ಕಾಲ ವಿರಾಮ ಪಡೆದು ಐಪಿಎಲ್ ಸಂದರ್ಭದಲ್ಲಿ ಸಜ್ಜಾಗಿ ಬಮದ ಹಾರ್ದಿಕ್ ಪಾಂಡ್ಯ ಅಮೋಘ ಪ್ರದರ್ಶನ ನೀಡಲು ಆರಂಭಿಸಿದ್ದಾರೆ. ಫಿಟ್‌ನೆಸ್, ಫಾರ್ಮ್ ಎಲ್ಲವೂ ಹಾರ್ದಿಕ್ ಮತ್ತೆ ತಂಡದಲ್ಲಿ ಸ್ಥಾನ ಪಡೆಯುವಂತೆ ಮಾಡಿದೆ. ಇದೀಗ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದು ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಪ್ರಮುಖ ಅಸ್ತ್ರವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications