ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ ಏಕದಿನ ತಂಡದಲ್ಲಿ ಸ್ಥಾನ ಭದ್ರಪಡಿಸಿಕೊಂಡ ಮೂವರು ಯುವ ಕ್ರಿಕೆಟಿಗರು ಇವರು

These 3 Players Almost Confirm Their Spot In Team India Playing XI

ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ನಲ್ಲಿ ಸೋತು ನಿರಾಸೆ ಅನುಭವಿಸಿದ್ದ ಟೀಂ ಇಂಡಿಯಾ 2023ರಲ್ಲಿ ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಗೆಲ್ಲಲು ನೋಡುತ್ತಿದೆ. ಈಗಾಗಲೇ ಏಕದಿನ ಸರಣಿಗಾಗಿ ತಯಾರಿಯನ್ನು ಆರಂಭಿಸಿದೆ.

ಏಕದಿನ ವಿಶ್ವಕಪ್‌ಗೆ ಮುನ್ನ ಭಾರತ ತಂಡ ಸುಮಾರು 25 ಏಕದಿನ ಪಂದ್ಯಗಳನ್ನು ಆಡಲಿದೆ. ತಂಡದಲ್ಲಿ ಈಗಾಗಲೇ ಹಿರಿಯ ಆಟಗಾರರ ಜೊತೆ ಯುವ ಪ್ರತಿಭೆಗಳಿಗೂ ಅವಕಾಶ ನೀಡಲಾಗುತ್ತಿದೆ. ಟ20 ವಿಶ್ವಕಪ್‌ ಬಳಿಕ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಹಿರಿಯ ಆಟಗಾರರು ವಿಶ್ರಾಂತಿಯಲ್ಲಿದ್ದಾಗ ಯುವ ಪಡೆ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿದಿತ್ತು.

ಮೂರು ಏಕದಿನ ಪಂದ್ಯಗಳಲ್ಲಿ ಒಂದು ಪಂದ್ಯವಷ್ಟೇ ಸಂಪೂರ್ಣವಾಗಿ ನಡೆಯಿತು. ಉಳಿದ ಎರಡು ಪಂದ್ಯಗಳು ಮಳೆಯಿಂದಾಗಿ ಅರ್ಧಕ್ಕೆ ರದ್ದಾದವು. ಮೊದಲನೇ ಪಂದ್ಯವನ್ನು ಸೋತು, ಸರಣಿಯನ್ನು ಕೈ ಬಿಟ್ಟರೂ, ಟೀಂ ಇಂಡಿಯಾದ ಯುವ ಕ್ರಿಕೆಟಿಗರು ಉತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದರು.

ತಂಡ ಸೇರಿಕೊಂಡ ಯುವ ವೇಗಿ, ಶಿಖರ್ ಧವನ್‌ಗೆ ರಾಹುಲ್ ದ್ರಾವಿಡ್ ಸ್ಪೆಷಲ್ ಕ್ಲಾಸ್ತಂಡ ಸೇರಿಕೊಂಡ ಯುವ ವೇಗಿ, ಶಿಖರ್ ಧವನ್‌ಗೆ ರಾಹುಲ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಅದರಲ್ಲೂ ಟೀಂ ಇಂಡಿಯಾ ಟಿ20 ವಿಶ್ವಕಪ್‌ಗೆ ಸಿದ್ಧತೆ ನಡೆಸುವ ಅವಧಿಯಲ್ಲಿ ಭಾರತ ತಂಡದ ಏಕದಿನ ಸರಣಿಗಳಲ್ಲಿ ಆಡಿದ್ದು ಕೂಡ ಯುವ ಕ್ರಿಕೆಟಿಗರು. ಭಾರತ ತಂಡಕ್ಕೆ ಈಗ ಸಾಕಷ್ಟು ಆಯ್ಕೆಯ ಅವಕಾಶಗಳಿದ್ದರೂ ಕೂಡ ಕೆಲವು ಕ್ರಿಕೆಟಿಗರು ಮಾತ್ರ ತಮ್ಮ ಉತ್ತಮ ಪ್ರದರ್ಶನದ ಮೂಲಕ ಏಕದಿನ ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತಿದ್ದಾರೆ.

ಭರವಸೆ ಮೂಡಿಸಿರುವ ವಾಷಿಂಗ್ಟನ್ ಸುಂದರ್

ಭರವಸೆ ಮೂಡಿಸಿರುವ ವಾಷಿಂಗ್ಟನ್ ಸುಂದರ್

ವಾಷಿಂಗ್ಟನ್ ಸುಂದರ್ ಸದ್ಯ ಟೀಂ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವಂತಹ ಪ್ರದರ್ಶನ ನೀಡುತ್ತಿದ್ದಾರೆ. ವಾಷಿಂಗ್ಟನ್ ಸುಂದರ್ ಇದುವರೆಗೂ 10 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳನ್ನು ಆಡಿದ್ದಾರೆ.

ಬ್ಯಾಟಿಂಗ್ ಮಾಡುವ ಸಾಮರ್ಥ್ಯವನ್ನು ಹೊಂದಿರುವ ವಾಷಿಂಗ್ಟನ್ ಸುಂದರ್, ಆಫ್-ಸ್ಪಿನ್ನರ್ ಆಗಿಯೂ ಪರಿಣಾಮಕಾರಿ ಬೌಲಿಂಗ್ ಮಾಡಿದ್ದಾರೆ. ಅವರು 10 ಓವರ್ ಬೌಲಿಂಗ್‌ ಮಾಡಿದರೂ ಹೆಚ್ಚಿನ ರನ್ ಬಿಟ್ಟುಕೊಟ್ಟಿಲ್ಲ. ಬ್ಯಾಟಿಂಗ್‌ನಲ್ಲೂ ಸಾಕಷ್ಟು ಸುಧಾರಣೆ ಮಾಡಿಕೊಳ್ಳುತ್ತಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಅವರು ಚೊಚ್ಚಲ ಅರ್ಧಶತಕವನ್ನು ಸಿಡಿಸಿದ್ದಾರೆ. ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯುವುದರಿಂದ ವಾಷಿಂಗ್ಟನ್ ಸುಂದರ್ ತಂಡಕ್ಕೆ ಉತ್ತಮ ಆಯ್ಕೆಯಾಗಿದ್ದಾರೆ.

ನಾನು ಹೇಳಿದಂತೆ ಪಿಚ್ ಸಿದ್ದ ಮಾಡಿಲ್ಲ: ಇಂಗ್ಲೆಂಡ್ ವಿರುದ್ಧ ಸೋತ ಬಳಿಕ ಬಾಬರ್ ಅಜಂ ಪ್ರತಿಕ್ರಿಯೆ!

ಮೊಹಮ್ಮದ್ ಸಿರಾಜ್ ಉತ್ತಮ ಬೌಲಿಂಗ್

ಮೊಹಮ್ಮದ್ ಸಿರಾಜ್ ಉತ್ತಮ ಬೌಲಿಂಗ್

ಮೊಹಮ್ಮದ್ ಸಿರಾಜ್ 2019ರಲ್ಲಿ ಭಾರತ ತಂಡಕ್ಕಾಗಿ ಆಯ್ಕೆಯಾದರೂ ಕಳಪೆ ಬೌಲಿಂಗ್ ಪ್ರದರ್ಶನ ನೀಡಿದರು. ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ 10 ಓವರ್‌ಗಳಲ್ಲಿ 76 ರನ್‌ಗಳನ್ನು ನೀಡಿದರು. ಅದಾದ ನಂತರ ಅವರು 2022ರಲ್ಲಿ ಭಾರತಕ್ಕಾಗಿ ಮತ್ತೆ ಏಕದಿನ ಪಂದ್ಯವನ್ನು ಆಡಿದರು.

ಟೀಂ ಇಂಡಿಯಾಗೆ ಕಂಬ್ಯಾಕ್ ಮಾಡಿದ ನಂತರ ಸಿರಾಜ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. 2022ರಲ್ಲಿ ಅವರು 13 ಏಕದಿನ ಪಂದ್ಯಗಳನ್ನಾಡಿದ್ದು, ನಾಲ್ಕು ಪಂದ್ಯಗಳಲ್ಲಿ ಮಾತ್ರ 40ಕ್ಕಿಂತ ಹೆಚ್ಚಿನ ರನ್ ಬಿಟ್ಟುಕೊಟ್ಟಿದ್ದಾರೆ. ಮೂರು ಬಾರಿ ಮೂರು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಅಂತಿಮ ಓವರ್ ಗಳಲ್ಲಿ ಯಾರ್ಕರ್ ಎಸೆಯುವ ಸಾಮರ್ಥ್ಯ ಹೊಂದಿರುವುದು ಅವರ ಬೌಲಿಂಗ್‌ ಅನ್ನು ಮತ್ತಷ್ಟು ಪರಿಣಾಮಕಾರಿಯನ್ನಾಗಿಸಿದೆ.

ಬಾಂಗ್ಲಾದೇಶದ ವಿರುದ್ಧದ ಸರಣಿಯಲ್ಲಿ ಔಟ್ ಸ್ವಿಂಗ್ ಬೌಲಿಂಗ್ ಮಾಡುವ ಮೂಲಕ ಮತ್ತಷ್ಟು ಸುಧಾರಣೆ ಕಂಡಿದ್ದಾರೆ. ಜಸ್ಪ್ರೀತ್ ಬುಮ್ರಾ ಮತ್ತು ಅರ್ಷದೀಪ್ ಸಿಂಗ್ ಜೊತೆಯಲ್ಲಿ ಶಮಿ ಮತ್ತಷ್ಟು ಪರಿಣಾಮಕಾರಿಯಾಗುವ ಸಾಮರ್ಥ್ಯ ಹೊಂದಿದ್ದಾರೆ.

ಉತ್ತಮ ಪ್ರದರ್ಶನ ನೀಡುತ್ತಿರುವ ಅಯ್ಯರ್

ಉತ್ತಮ ಪ್ರದರ್ಶನ ನೀಡುತ್ತಿರುವ ಅಯ್ಯರ್

ಶ್ರೇಯಸ್ ಅಯ್ಯರ್ ಶಾರ್ಟ್ ಬಾಲ್‌ಗೆ ಔಟ್ ಆಗುವ ದೌರ್ಬಲ್ಯವನ್ನು ಹೊಂದಿರುವ ಹೊರತಾಗಿಯೂ ಅತ್ಯುತ್ತಮ ಫಾರ್ಮ್ ಹೊಂದಿದ್ದಾರೆ. ಪ್ರತಿ ಪಂದ್ಯದಲ್ಲೂ ತಮ್ಮ ಪ್ರದರ್ಶನವನ್ನು ಉತ್ತಮಪಡಿಸಿಕೊಳ್ಳುವ ಉತ್ಸಾಹ ತೋರುತ್ತಿದ್ದಾರೆ. ಕಳೆದ 10 ಇನ್ನಿಂಗ್ಸ್‌ಗಳಲ್ಲಿ ಶ್ರೇಯಸ್ ಅಯ್ಯರ್ ಕ್ರಮವಾಗಿ 80, 54, 63, 44, 50, 113*, 28*, 80, 49 ಮತ್ತು 24 ರನ್ ಗಳಿಸಿದ್ದಾರೆ. 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಅಯ್ಯರ್ ಭಾರತದ ಮಧ್ಯಮ ಕ್ರಮಾಂಕವನ್ನು ಬಲಿಷ್ಠಗೊಳಿಸಲಿದ್ದಾರೆ.

ರಿಷಬ್ ಪಂತ್ ಫಾರ್ಮ್ ಕಂಡುಕೊಳ್ಳಲು ವಿಫಲವಾಗುತ್ತಿರುವ ಸಂದರ್ಭದಲ್ಲಿ ಶ್ರೇಯಸ್ ಅಯ್ಯರ್ ತಂಡಕ್ಕೆ ಉತ್ತಮ ಆಯ್ಕೆಯಾಗಿದ್ದಾರೆ.

Story first published: Tuesday, December 6, 2022, 19:38 [IST]
Other articles published on Dec 6, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X