IND vs SA Final: ಭಾರತ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲಲು ಈ 3 ಆಟಗಾರರ ಪಾತ್ರ ಬಹಳ ಮುಖ್ಯ!
ಜೂನ್ 29 ಶನಿವಾರ, ಟಿ20 ವಿಶ್ವಕಪ್ 2024ರ ಫೈನಲ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಮುಖಮುಖಿಯಾಗಿವೆ. ಇಂದು ರಾತ್ರಿ 8 ಗಂಟೆಗೆ ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್ ಮೈದಾನದಲ್ಲಿ ಹೈವೋಲ್ಟೇಜ್ ಪಂದ್ಯ ಆರಂಭವಾಗಲಿದೆ.
ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಇದುವರೆಗೆ ಒಟ್ಟು 6 ಪಂದ್ಯಗಳು ನಡೆದಿವೆ. ಭಾರತ 4 ಬಾರಿ ಗೆದ್ದರೆ, ದಕ್ಷಿಣ ಆಫ್ರಿಕಾ 2 ಪಂದ್ಯಗಳನ್ನು ಗೆದ್ದು ಬೀಗಿದೆ.
ಇನ್ನೊಂದೆಡೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಇದುವರೆಗೆ ಒಟ್ಟು 26 ಟಿ20 ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿವೆ. ಭಾರತ 14 ಟಿ20 ಪಂದ್ಯಗಳನ್ನು ಗೆದ್ದಿದ್ದರೆ, ದಕ್ಷಿಣ ಆಫ್ರಿಕಾ 11 ಪಂದ್ಯಗಳನ್ನು ಗೆದ್ದಿದೆ.
ಇದೀಗ ಟಿ20 ವಿಶ್ವಕಪ್ 2024ರ ಫೈನಲ್ ತಲುಪಿರುವ ಟೀಮ್ ಇಂಡಿಯಾದ ಮೂವರು ಆಟಗಾರರು ದಕ್ಷಿಣ ಆಫ್ರಿಕಾ ತಂಡಕ್ಕೆ ಭೀತಿ ಉಂಟು ಮಾಡಿದ್ದಾರೆ. ಈ ಮೂವರು ಆಟಗಾರರು ಭಾರತಕ್ಕೆ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುವಲ್ಲಿ ದೊಡ್ಡ ಪಾತ್ರ ವಹಿಸಬಲ್ಲರು. ಇಲ್ಲಿದೆ ಈ 3 ಆಟಗಾರರ ಬಗ್ಗೆ ಮಾಹಿತಿ.

ರೋಹಿತ್ ಶರ್ಮಾ
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ 2024ರ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ದೊಡ್ಡ ಬೆದರಿಕೆಯಾಗಿದ್ದಾರೆ. ರೋಹಿತ್ ಶರ್ಮಾ ಅತ್ಯುತ್ತಮ ಫಾರ್ಮ್‌ನಲ್ಲಿದ್ದು, ಆರಂಭದಿಂದಲೇ ಆಕ್ರಮಣಕಾರಿ ಆಟವಾಡಿದರೆ ದಕ್ಷಿಣ ಆಫ್ರಿಕಾದ ವೇಗಿಗಳ ಮೇಲೆ ಒತ್ತಡ ಹೇರಬಹುದು.
ರೋಹಿತ್ ಶರ್ಮಾ ಪ್ರದರ್ಶನದಿಂದ ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಬೃಹತ್ ಮೊತ್ತ ಗಳಿಸುವುದು ಗ್ಯಾರಂಟಿ. ದಕ್ಷಿಣ ಆಫ್ರಿಕಾ ವಿರುದ್ಧ ರೋಹಿತ್ ಶರ್ಮಾ 60 ರಿಂದ 70 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದರೆ ಟೀಮ್ ಇಂಡಿಯಾ ಟ್ರೋಫಿ ಗೆಲ್ಲುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ.
ರೋಹಿತ್ ಶರ್ಮಾ ಸತತ ಎರಡು ಪಂದ್ಯಗಳಲ್ಲಿ 41 ಎಸೆತಗಳಲ್ಲಿ 92 ರನ್ ಮತ್ತು 39 ಎಸೆತಗಳಲ್ಲಿ 57 ರನ್ ಗಳಿಸಿದ್ದಾರೆ. ರೋಹಿತ್ ಶರ್ಮಾ ಅವರ ಈ 2 ಇನ್ನಿಂಗ್ಸ್‌ಗಳು ಕ್ರಮವಾಗಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳ ವಿರುದ್ಧ ಬಂದಿವೆ. ಅಲ್ಲದೆ ಈ ಎರು ಪಂದ್ಯಗಳನ್ನೂ ಭಾರತ ಗೆದ್ದಿದೆ.

ಕುಲದೀಪ್ ಯಾದವ್
2024ರ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಟೀಮ್ ಇಂಡಿಯಾ ಬೌಲರ್ ಕುಲದೀಪ್ ಯಾದವ್ ತನ್ನ ಮಾರಕ ಸ್ಪಿನ್ ಬೌಲಿಂಗ್‌ನಿಂದ ದಕ್ಷಿಣ ಆಫ್ರಿಕಾದ ಬ್ಯಾಟರ್‌ಗಳಿಗೆ ತೊಂದರೆ ನೀಡಬಹುದು. ದಕ್ಷಿಣ ಆಫ್ರಿಕಾದ ಇನ್ನಿಂಗ್ಸ್‌ನಲ್ಲಿ ಕುಲದೀಪ್ ಯಾದವ್ ಮಧ್ಯಮ ಓವರ್‌ಗಳಲ್ಲಿ ಟೀಮ್ ಇಂಡಿಯಾ ಪರ ದೊಡ್ಡ ಪಾತ್ರವನ್ನು ವಹಿಸಲಿದ್ದಾರೆ.
ದಕ್ಷಿಣ ಆಫ್ರಿಕಾದ ನಾಯಕ ಏಡನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್ ಮತ್ತು ಡೇವಿಡ್ ಮಿಲ್ಲರ್ ಅವರಂತಹ ಅಪಾಯಕಾರಿ ಬ್ಯಾಟರ್‌ಗಳನ್ನು ಮಧ್ಯಮ ಓವರ್‌ಗಳಲ್ಲಿ ಔಟ್ ಮಾಡುವಲ್ಲಿ ಕುಲದೀಪ್ ಯಾದವ್ ಯಶಸ್ವಿಯಾದರೆ, ಈ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾಕ್ಕೆ ಕಟ್ಟಿ ಹಾಕಲಿದೆ. ಇಂಗ್ಲೆಂಡ್ ವಿರುದ್ಧ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಕುಲದೀಪ್ ಯಾದವ್ 3 ವಿಕೆಟ್ ಪಡೆದರು.

ಜಸ್ಪ್ರೀತ್ ಬುಮ್ರಾ
ಜಸ್ಪ್ರೀತ್ ಬುಮ್ರಾ ಭಾರತದ ಸ್ಟಾರ್ ವೇಗದ ಬೌಲರ್‌ಗಳಲ್ಲಿ ಒಬ್ಬರು. ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಜಸ್ಪ್ರೀತ್ ಬುಮ್ರಾ ಅದ್ಭುತ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದಾರೆ.
ಅದೇ ಫಾರ್ಮ್ ಮುಂದುವರೆಸಿ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಜಸ್ಪ್ರೀತ್ ಬುಮ್ರಾ ಖೆಡ್ಡ ತೋಡುವ ಎಲ್ಲ ಸಾಧ್ಯತೆಯಿದೆ. ಜಸ್ಪ್ರೀತ್ ಬುಮ್ರಾ ಅವರ ಉರಿ ಬೌಲಿಂಗ್ ದಾಳಿಯನ್ನ ತಡೆಯುವುದು ಎದುರಾಳಿ ತಂಡದ ಬ್ಯಾಟ್ಸ್‌ಮನ್‌ಗಳಿಗೆ ಕಠಿಣ ಕೆಲಸವಾಗಿದೆ.
ಜಸ್ಪ್ರೀತ್ ಬುಮ್ರಾ ಅವರು ಓವರ್‌ಗಳ ಆರಂಭದಲ್ಲಿ ಮತ್ತು ಕೊನೆಯಲ್ಲಿ ವಿಕೆಟ್‌ಗಳನ್ನು ಕಬಳಿಸುವಲ್ಲಿ ಪ್ರವೀಣರಾಗಿದ್ದಾರೆ. ದಕ್ಷಿಣ ಆಫ್ರಿಕಾದ ಸ್ಫೋಟಕ ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾಕ್ ಅವರನ್ನು ಬೇಗನೇ ಔಟ್ ಮಾಡುವುದು ಬುಮ್ರಾ ಅವರಿಗೆ ಸವಾಲಾಗಿದೆ. ಜಸ್ಪ್ರೀತ್ ಬುಮ್ರಾ ಈ ಬಾರಿಯ ಟಿ20 ವಿಶ್ವಕಪ್‌ನ 7 ಪಂದ್ಯಗಳಲ್ಲಿ 13 ವಿಕೆಟ್ ಪಡೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications