IND vs SA: ಸ್ಥಾನ ಉಳಿಸಿಕೊಳ್ಳಲು ಭಾರತದ ಈ ಮೂವರು ಚೆನ್ನಾಗಿ ಆಡಲೇಬೇಕು ಎಂದ ರೈನಾ

ಇಂಡಿಯನ್ ಪ್ರೀಮಿಯರ್ ಲೀಗ್ ಹದಿನೈದನೇ ಆವೃತ್ತಿ ಮುಕ್ತಾಯವಾದ ಬೆನ್ನಲ್ಲೇ ಹಲವಾರು ಅಂತರರಾಷ್ಟ್ರೀಯ ಕ್ರಿಕೆಟ್ ಸರಣಿಗಳು ಆರಂಭವಾಗುತ್ತಿದ್ದು, ಅವುಗಳಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆಯಲಿರುವ 5 ಪಂದ್ಯಗಳ ಟಿ ಟ್ವೆಂಟಿ ಸರಣಿಗೆ ಪ್ರಮುಖವಾದ್ದಾಗಿದೆ.
ಇದೇ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭವಾಗಲಿದ್ದು, ಟೀಮ್ ಇಂಡಿಯಾ ಈಗಿನಿಂದಲೇ ಟಿ ಟ್ವೆಂಟಿ ಸರಣಿಗಳಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ಮೆಗಾ ಟೂರ್ನಿಗೆ ಸಜ್ಜಾಗಬೇಕಾದ ಅವಶ್ಯಕತೆ ಇದೆ. ಹೀಗಾಗಿ ಈ ಟೂರ್ನಿಗೂ ಮುನ್ನ ನಡೆಯಲಿರುವ ವಿವಿಧ ಟಿ ಟ್ವೆಂಟಿ ಸರಣಿಗಳಲ್ಲಿ ಆಟಗಾರರು ಉತ್ತಮ ಪ್ರದರ್ಶನ ನೀಡಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗುವ ಭಾರತ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವ ಯೋಜನೆಯನ್ನು ಹೊಂದಿದ್ದಾರೆ.
ಇನ್ನು ಮೊದಲಿಗೆ ಭಾರತ ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟ್ವೆಂಟಿ ಸರಣಿಯನ್ನು ತವರು ನೆಲದಲ್ಲಿ ಆಡಲಿದ್ದು ಜೂನ್ 9ರಿಂದ ಈ ಸರಣಿ ಆರಂಭವಾಗುತ್ತಿದೆ. ಈ ಸರಣಿಯಲ್ಲಿ ದಿಗ್ಗಜರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಕಣಕ್ಕಿಳಿಯದೇ ವಿಶ್ರಾಂತಿ ಪಡೆಯಲಿದ್ದು, ಬಿಸಿಸಿಐ ಕಳೆದ ತಿಂಗಳೇ ಈ ಸರಣಿಯಲ್ಲಿ ಕಣಕ್ಕಿಳಿಯಲಿರುವ ಭಾರತ ತಂಡವನ್ನು ಪ್ರಕಟ ಮಾಡಿತ್ತು. ಇದೀಗ ಸರಣಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿ ಹಲವಾರು ಮಾಜಿ ಕ್ರಿಕೆಟಿಗರು ಸರಣಿ ಕುರಿತಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಈ ಸಾಲಿಗೆ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಕೂಡ ಸೇರಿಕೊಂಡಿದ್ದು ಸರಣಿಯಲ್ಲಿ ಮೂವರು ಉತ್ತಮ ಪ್ರದರ್ಶನ ನೀಡಬೇಕಿದೆ ಹೇಳಿಕೆ ನೀಡಿದ್ದಾರೆ. ಇದರ ಕುರಿತಾದ ಮಾಹಿತಿ ಮುಂದೆ ಇದೆ ಓದಿ.

ಈ ಮೂವರು ಉತ್ತಮ ಪ್ರದರ್ಶನ ನೀಡಲೇಬೇಕು
ದಕ್ಷಿಣ ಆಫ್ರಿಕಾ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಸಿದ್ಧವಾಗಿರುವ ಟೀಮ್ ಇಂಡಿಯಾದ ಕುರಿತು ಮಾತನಾಡಿದ ಸುರೇಶ್ ರೈನಾ ಸರಣಿಯಲ್ಲಿ ಮೂವರು ಆಟಗಾರರ ಪ್ರದರ್ಶನದ ಮೇಲೆ ಕಣ್ಣಿಡಬೇಕಿದೆ ಎಂದಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವುದರ ಮೂಲಕ ಮಿಂಚಿದ ಉಮ್ರಾನ್ ಮಲಿಕ್ ಮತ್ತು ಅರ್ಷದೀಪ್ ಸಿಂಗ್ ಇಲ್ಲಿಯೂ ಸಹ ಉತ್ತಮ ಪ್ರದರ್ಶನ ನೀಡಬೇಕಿದೆ ಹಾಗೂ ಟೂರ್ನಿಯಲ್ಲಿ ನಾಯಕನಾಗಿ ಯಶಸ್ವಿಯಾಗಿದ್ದ ಕೆಎಲ್ ರಾಹುಲ್ ಈ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕತ್ವವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕಿದೆ ಎಂದಿದ್ದಾರೆ. ಹೊಸದಾಗಿ ಸ್ಥಾನ ಪಡೆದುಕೊಂಡಿರುವ ಉಮ್ರಾನ್ ಮಲಿಕ್ ಮತ್ತು ಅರ್ಷದೀಪ್ ಸಿಂಗ್ ಈ ಸರಣಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದರೆ ಮುಂದಿನ ದಿನಗಳಲ್ಲಿ ಹೆಚ್ಚು ಅವಕಾಶ ಲಭಿಸಲಿದೆ ಹಾಗೂ ಕೆಎಲ್ ರಾಹುಲ್ ನಾಯಕತ್ವದ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿದರೆ ಮುಂಬರುವ ದಿನಗಳಲ್ಲಿ ತಂಡವನ್ನು ಮುನ್ನಡೆಸುವ ಅವಕಾಶ ಖಾಯಂ ಆಗಿ ಸಿಗಬಹುದು ಎಂಬರ್ಥದಲ್ಲಿ ಸುರೇಶ್ ರೈನಾ ಪರೋಕ್ಷವಾಗಿ ಸಲಹೆ ನೀಡಿದ್ದಾರೆ.

ಭಾರತದ ಪರ ಚೆನ್ನಾಗಿ ಆಡುವುದು ಮುಖ್ಯ
ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮಿಂಚಿರುವ ಹಲವಾರು ಆಟಗಾರರು ದಕ್ಷಿಣ ಆಫ್ರಿಕಾ ವಿರುದ್ಧದ ಈ ಸರಣಿಯಲ್ಲಿ ಕಣಕ್ಕಿಳಿಯುತ್ತಿದ್ದು, ಆ ಆಟಗಾರರು ಈ ಸರಣಿಯಲ್ಲಿ ಯಾವ ರೀತಿ ಪ್ರದರ್ಶನ ನೀಡಲಿದ್ದಾರೆ ಎಂಬುದು ಮುಖ್ಯವಾಗಲಿದೆ ಎಂದು ಸುರೇಶ್ ರೈನಾ ಹೇಳಿಕೆ ನೀಡಿದ್ದಾರೆ. ಟೀಮ್ ಇಂಡಿಯಾ ಪರ ಆಡುವಾಗ ಮನಸ್ಥಿತಿ ಅತಿ ಮುಖ್ಯವಾಗಲಿದೆ ಎಂದೂ ಸಹ ಸುರೇಶ್ ರೈನಾ ಸಲಹೆ ನೀಡಿದ್ದಾರೆ.

ಸರಣಿಗೆ ಪ್ರಕಟಿಸಲಾಗಿರುವ ಭಾರತ ತಂಡ
ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ ಟ್ವೆಂಟಿ ಸರಣಿಗೆ ಪ್ರಕಟಿಸಲಾಗಿರುವ ಭಾರತ ತಂಡ ಹೀಗಿದೆ: ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್ , ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications