India's World Cup Squad: ಭಾರತದ ವಿಶ್ವಕಪ್ ರೇಸ್‌ನಿಂದ ಹೊರಬಿದ್ದ ಏಷ್ಯಾ ಕಪ್ ತಂಡದಲ್ಲಿರುವ 3 ಆಟಗಾರರು
ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಭಾರತದಲ್ಲಿಯೇ ನಡೆಯಲಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಗೆ 15 ಸದಸ್ಯರ ಭಾರತ ತಂಡವನ್ನು ಮಂಗಳವಾರ, ಸೆಪ್ಟೆಂಬರ್ 5ರಂದು ಪ್ರಕಟಿಸಲಾಗಿದೆ.
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರು ಶ್ರೀಲಂಕಾದ ಕ್ಯಾಂಡಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಂಡವನ್ನು ಘೋಷಿಸಿದರು.

ಗಾಯದಿಂದ ಚೇತರಿಸಿಕೊಂಡು ಫಿಟ್ನೆಸ್‌ಗೆ ಮರಳಿದ ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಭಾರತ ತಂಡದಲ್ಲಿ ಆಯ್ಕೆ ಮಾಡಲಾಗಿದ್ದರೆ,
ರೋಹಿತ್ ಶರ್ಮಾ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ ಅವರಂತಹ ಸ್ಪೆಷಲಿಸ್ಟ್ ಬ್ಯಾಟರ್‌ಗಳು, ಆಲ್‌ರೌಂಡರ್‌ಗಳಾಗಿ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ.
ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಅವರನ್ನು ಸ್ಪೆಷಲಿಸ್ಟ್ ವೇಗಿಗಳಾಗಿ ಆಯ್ಕೆ ಮಾಡಿದ್ದರೆ, ಕುಲದೀಪ್ ಯಾದವ್ ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿ ಸ್ಥಾನ ಪಡೆದಿದ್ದಾರೆ. ಇಶಾನ್ ಕಿಶನ್ ಮತ್ತು ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಆಯ್ಕೆಗಳಾಗಿದ್ದಾರೆ.

ವಿಶ್ವಕಪ್ ತಂಡದಿಂದ ಹೊರಬಿದ್ದ ಏಷ್ಯಾ ಕಪ್ ತಂಡದಲ್ಲಿದ ಆಟಗಾರರು
ಇನ್ನು 2023ರ ಏಷ್ಯಾ ಕಪ್ ಪಂದ್ಯಾವಳಿಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದ ಮೂವರು ಆಟಗಾರರು, 2023ರ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.
ಏಷ್ಯಾ ಕಪ್ ತಂಡವನ್ನು ಪ್ರಕಟಿಸಿದಾಗ, ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರು ಏಷ್ಯಾ ಕಪ್‌ಗೆ ಭಾರತೀಯ ತಂಡವನ್ನು ಪ್ರಕಟಿಸಿದಾಗ, ಏಕದಿನ ವಿಶ್ವಕಪ್ ರೋಸ್ಟರ್ ಇದೇ ಮಾದರಿಯಲ್ಲಿರುತ್ತದೆ ಎಂಬ ಸುಳಿವು ನೀಡಿದ್ದರು.
2023ರ ಏಷ್ಯಾ ಕಪ್‌ಗೆ ಆಯ್ಕೆ ಮಾಡಿದ ತಂಡದ ಆಟಗಾರರನ್ನೇ ವಿಶ್ವಕಪ್‌ಗೆ ಬಹುತೇಕ ಆಯ್ಕೆ ಮಾಡಿದೆ. ಏಕದಿನ ವಿಶ್ವಕಪ್ ತಂಡವು 15 ಸದಸ್ಯರನ್ನು ಒಳಗೊಂಡಿದ್ದು, ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ಹೊರಗಿಡಲಾಗಿದೆ.

ಏಷ್ಯಾ ಕಪ್‌ಗೆ 17 ಸದಸ್ಯರ ತಂಡವನ್ನು ಪ್ರಕಟಿಸಲಾಗಿತ್ತು. ಸಂಜು ಸ್ಯಾಮ್ಸನ್ ಅವರನ್ನು ಮೀಸಲು ಆಟಗಾರನಾಗಿ ಆಯ್ಕೆ ಮಾಡಲಾಗಿತ್ತು. ಇದೀಗ ವಿಶ್ವಕಪ್ ತಂಡವು ಕೇವಲ 15 ಆಟಗಾರರನ್ನು ಒಳಗೊಂಡಿರುವುದರಿಂದ, ಸಂಜು ಸ್ಯಾಮ್ಸನ್ ಹೊರತುಪಡಿಸಿ, ಮುಖ್ಯ ತಂಡದಿಂದ ಇನ್ನಿಬ್ಬರು ಆಟಗಾರರನ್ನು ಹೊರಗಿಡಗಿದೆ.
2023ರ ವಿಶ್ವಕಪ್ ಭಾರತ ತಂಡದಿಂದ ಹೊರಬಿದ್ದ ಇತರ ಇನ್ನಿಬ್ಬರು ಆಟಗಾರರೆಂದರೆ ತಿಲಕ್ ವರ್ಮಾ ಮತ್ತು ಪ್ರಸಿದ್ಧ್ ಕೃಷ್ಣ. ತಿಲಕ್ ವರ್ಮಾ 2023ರ ಏಷ್ಯಾ ಕಪ್‌ಗಾಗಿ ತಮ್ಮ ಮೊದಲ ಏಕದಿನ ಅಂತಾರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದರು.
ಇನ್ನು ಗಾಯದಿಂದ ಚೇತರಿಸಿಕೊಂಡು ಭಾರತ ತಂಡಕ್ಕೆ ಪುನರಾಗಮನ ಮಾಡಿದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣ ಕೂಡ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾದರು.
ಇದೇ ವೇಳೆ, ಏಷ್ಯಾ ಕಪ್‌ಗೆ ಭಾರತ ತಂಡದಲ್ಲಿ ಆಯ್ಕೆಯಾಗದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್‌ಗೆ ವಿಶ್ವಕಪ್ ತಂಡದಲ್ಲಿಯೂ ಸ್ಥಾನ ಸಿಗಲಿಲ್ಲ.
2023ರ ಏಕದಿನ ವಿಶ್ವಕಪ್‌ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ಉಪನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications