Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟಿ20I ಮಾದರಿಯಲ್ಲಿ ಒಂದೇ ಒಂದು ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿಲ್ಲ ಈ 4 ಸ್ಟಾರ್ ಭಾರತೀಯ ಕ್ರಿಕೆಟಿಗರು!!

ಅಂತಾರಾಷ್ಟ್ರೀಯ ಕ್ರಿಕೆಟ್‌ನ ಪ್ರಖ್ಯಾತ ಕ್ರಿಕೆಟ್ ಮಾದರಿಯಾಗಿರುವ ಟಿ20Iನಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆಯುವುದು ಒಂದು ಪ್ರತಿಷ್ಠೆಯ ವಿಷಯ. ಪಂದ್ಯವನ್ನು ಗೆಲ್ಲಿಸಿಕೊಟ್ಟು ಈ ಪ್ರಶಸ್ತಿ ತನ್ನದಾಗಿಸಿಕೊಳ್ಳಬೇಕು ಎನ್ನುವುದು ಪ್ರತಿಯೊಬ್ಬ ಕ್ರಿಕೆಟಿಗರ ಕನಸು ಕೂಡ ಆಗಿರುತ್ತದೆ ಎನ್ನುವುದರಲ್ಲಿ ಅನುಮಾನವಿಲ್ಲ.

ಐರ್ಲೆಂಡ್ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಚೊಚ್ಚಲ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬ್ಯಾಟಿಂಗ್‌ಗೆ ಇಳಿದ ರಿಂಕು ಸಿಂಗ್ ಪರಿಣಾಮಕಾರಿ ಬ್ಯಾಟಿಂಗ್ ಪ್ರದರ್ಶಿಸಿ ಮೊದಲ ಇನ್ನಿಂಗ್ಸ್‌ನಲ್ಲಿಯೇ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದರು. ಈ ಮೂಲಕ ಭಾರತೀಯ ಕ್ರಿಕೆಟಿಗರ ಪೈಕಿ ಅಂತಾರಾಷ್ಟ್ರೀಯ ಟಿ20ಯಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡ 45ನೇ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ರಿಂಕು ಪಾತ್ರರಾಗಿದ್ದಾರೆ.

These 4 star Indian cricketers never won Man of the Match award in T20Is

ಕುತೂಹಲಕಾರಿ ಸಂಗತಿಯೆಂದರೆ ಕೆಲ ಜನಪ್ರಿಯ ಭಾರತೀಯ ಕ್ರಿಕೆಟಿಗರು ಕೂಡ ಅಂತಾರಾಷ್ಟ್ರೀಯ ಟಿ20 ಮಾದರಿಯಲ್ಲಿ 10ಕ್ಕೂ ಹೆಚ್ಚಿನ ಪಂದ್ಯಗಳನ್ನು ಆಡಿದ್ದರೂ ಒಮ್ಮೆಯೂ ಈ ಸಾಧನೆ ಮಾಡಲು ಸಾಧ್ಯವಾಗಿಲ್ಲ. ಅಂಥಾ ನಾಲ್ಕು ಸ್ಟಾರ್ ಆಟಗಾರರ ಮಾಹಿತಿ ಇಲ್ಲಿದೆ. ಮುಂದೆ ಓದಿ..

ಮಾಜಿ ನಾಯಕ ಎಂಎಸ್ ಧೋನಿ

ಈ ಪಟ್ಟಿಯಲ್ಲಿ ಮೊದಲಿಗೆ ಕಂಡು ಬರುವ ಹೆಸರು ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ. ಕ್ರಿಕೆಟ್ ಲೋಕದ ದಿಗ್ಗಜ ಎನಿಸಿಕೊಂಡಿರುವ ಧೋನಿ ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ಹೊಂದಿದ್ದಾರೆ. ಭಾರತದ ಪರವಾಗಿ ಅತಿ ಹೆಚ್ಚು ಟಿ20I ಪಂದ್ಯಗಳನ್ನಾಡಿರುವ ಆಟಗಾರರ ಪೈಕಿ ಒಬ್ಬರಾಗಿದ್ದರೂ ಧೋನಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಪಡೆಯಲು ಒಮ್ಮೆಯೂ ಸಾಧ್ಯವಾಗಿಲ್ಲ ಎನ್ನುವುದು ವಿಪರ್ಯಾಸ. ಭಾರತ ತಂಡದ ಪರವಾಗಿ ಎಂಎಸ್ ಧೋನಿ 98 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ್ದಾರೆ. ಆದರೆ ಒಮ್ಮೆಯೂ ಅವರು ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದುಕೊಳ್ಳಲು ಸಾಧ್ಯವಾಗಿಲ್ಲ

ಯುವ ಆಲ್‌ರೌಂಡರ್ ಶಿವಂ ದುಬೆ

ಆಲ್ ರೌಂಡರ್ ಶಿವಂ ದುಬೆ ಕಳೆದ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಗಮನಸೆಳೆದಿದ ಬಳಿಕ ಐರ್ಲೆಂಡ್ ವಿರುದ್ಧದ ಟಿ20 ಸರಣಿಯ ಮೂಲಕ ಕಮ್‌ಬ್ಯಾಕ್ ಮಾಡಿದ್ದಾರೆ. ಆದರೆ ಅಂತಾರಾಷ್ಟ್ರೀಯ ಟಿ20 ಮಾದರಿಯಲ್ಲಿ ಅವರಿಂದ ಇನ್ನು ಕೂಡ ನಿರೀಕ್ಷಿತ ಪ್ರದರ್ಶನ ಹೊರಬಂದಿಲ್ಲ ಎನ್ನುವುದು ಸ್ಪಷ್ಟ. ಬಿಗ್ ಹಿಟ್ ಸಾಮರ್ರ್ಥಯ ಹೊಂದಿರುವ ಈ ಆಟಗಾರ ಭಾರತದ ಪರವಾಗಿ ಈವರೆಗೆ 15 ಟಿ20I ಪಂದ್ಯಗಳನ್ನು ಆಡಿದ್ದಾರೆ. ಆದರೆ ಅವರು ಇನ್ನೂ ಒಮ್ಮೆಯೂ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿಲ್ಲ.

ಅನುಭವಿ ವೇಗಿ ಮೊಹಮ್ಮದ್ ಶಮಿ

ಟೀಮ್ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟಿ20 ಕ್ರಿಕೆಟ್‌ನಲ್ಲಿ ತಾನೋರ್ವ ಮ್ಯಾಚ್ ವಿನ್ನರ್ ಎನ್ನುವುದನ್ನು ಸಾಬೀತುಪಡಿಸಿದ್ದಾರೆ. ಹಾಗಿದ್ದರೂ ವೇಗದ ಬೌಲರ್ ತಾನು ಆಡಿದ 23 ಟಿ20ಐ ಪಂದ್ಯಗಳಲ್ಲಿ ಪಂದ್ಯಶ್ರೇಷ್ಠ ಪ್ರಶಸ್ಸತಿ ಗೆಲ್ಲಲು ವಿಫಲವಾಗಿದ್ದಾರೆ ಎಂದರೆ ಅಚ್ಚರಿಯಾದರೂ ನಿಜ!

ಕನ್ನಡಿಗ ಮನೀಶ್ ಪಾಂಡೆ

ಮನೀಶ್ ಪಾಂಡೆ ಸಾಕಷ್ಟು ಭರವಸೆ ಮೂಡಿಸಿದ್ದ ಪ್ರತಿಭಾವಂತ ಕ್ರಿಕೆಟಿಗ. ಚುಟುಕು ಮಾದರಿಗೆ ಹೇಳಿ ಮಾಡಿಸಿದ ಬ್ಯಾಟಿಂಗ್ ಶೈಲಿ ಹೊಂದಿದ್ದರೂ ತನ್ನ ಫಾರ್ಮ್‌ನ ಅತ್ಯುನ್ನತ ಸಮಯದಲ್ಲಿ ತಂಡದಲ್ಲಿದ್ದ ತೀವ್ರ ಸ್ಪರ್ಧೆಯ ಕಾರಣದಿಂದಾಗಿ ಹೆಚ್ಚಿನ ಅವಕಾಶಗಳು ದೊರೆಯಲಿಲ್ಲ. ಟಿ20 ಮಾದರಿಯಲ್ಲಿ ಭಾರತದ ಪರವಾಗಿ ಮನೀಶ್ ಪಾಂಡೆ 39 ಪಂದ್ಯಗಳನ್ನು ಆಡಿದ್ದಾರೆ. ಆದರೆ ಮನೀಶ್ ಒಮ್ಮೆಯೂ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿಲ್ಲ.

Story first published: Tuesday, August 22, 2023, 12:12 [IST]
Other articles published on Aug 22, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+