ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಈ ಬಾರಿಯ ಟಿ20 ವಿಶ್ವಕಪ್ ಮುಕ್ತಾಯವಾದ ನಂತರ ನಿವೃತ್ತಿ ಹೊಂದಲಿದ್ದಾರೆ ಈ 6 ಸ್ಟಾರ್ ಕ್ರಿಕೆಟಿಗರು!

These 6 star cricketers likely to announce retirement to T20I cricket after t20 world cup 2022

ಈ ಬಾರಿಯ ಪ್ರತಿಷ್ಠಿತ ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿದ್ದು ಆಸ್ಟ್ರೇಲಿಯ ನೆಲದಲ್ಲಿ ನಡೆಯಲಿದೆ. 16 ತಂಡಗಳು ಈ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲಿದ್ದು, ಬಲಿಷ್ಠ ತಂಡಗಳ ಹಣಾಹಣಿ ಕ್ರಿಕೆಟ್ ಪ್ರೇಮಿಗಳಿಗೆ ಭರಪೂರ ಮನರಂಜನೆಯನ್ನು ನೀಡುವುದು ಖಚಿತ.

5 ಪಂದ್ಯಗಳಲ್ಲಿ ಕೇವಲ 56 ರನ್: ನಾಯಕನಾದ ಮೇಲೆ ಮಕಾಡೆ ಮಲಗಿದ ಐಪಿಎಲ್ ಆರೆಂಜ್ ಕ್ಯಾಪ್ ಹೋಲ್ಡರ್!5 ಪಂದ್ಯಗಳಲ್ಲಿ ಕೇವಲ 56 ರನ್: ನಾಯಕನಾದ ಮೇಲೆ ಮಕಾಡೆ ಮಲಗಿದ ಐಪಿಎಲ್ ಆರೆಂಜ್ ಕ್ಯಾಪ್ ಹೋಲ್ಡರ್!

ಇನ್ನು ಕಳೆದ ವರ್ಷ ಯುಎಇಯಲ್ಲಿ ನಡೆದಿದ್ದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ನ್ಯೂಜಿಲೆಂಡ್ ತಂಡವನ್ನು ಫೈನಲ್ ಪಂದ್ಯದಲ್ಲಿ ಬಗ್ಗುಬಡಿಯುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಕಳೆದ ವರ್ಷ ನಡೆದಿದ್ದ ಟೂರ್ನಿಯಲ್ಲಿ ಕಣಕ್ಕಿಳಿದಿದ್ದ ಬಹುತೇಕ ಕ್ರಿಕೆಟಿಗರು ಈ ಬಾರಿಯ ಆವೃತ್ತಿಯಲ್ಲಿ ಸಹ ಕಣಕ್ಕಿಳಿಯಲಿದ್ದು, ಕೆಲವೊಂದಿಷ್ಟು ನೂತನ ಆಟಗಾರರ ಆಗಮನವಾಗಲಿದೆ.

ವೆಸ್ಟ್ ಇಂಡೀಸ್ ಪ್ರವಾಸದ ಸಂಪೂರ್ಣ ವೇಳಾಪಟ್ಟಿ ಮತ್ತು ಪ್ರಕಟವಾಗಿರುವ ಭಾರತ ತಂಡದ ಬಗ್ಗೆ ತಿಳಿಯಿರಿವೆಸ್ಟ್ ಇಂಡೀಸ್ ಪ್ರವಾಸದ ಸಂಪೂರ್ಣ ವೇಳಾಪಟ್ಟಿ ಮತ್ತು ಪ್ರಕಟವಾಗಿರುವ ಭಾರತ ತಂಡದ ಬಗ್ಗೆ ತಿಳಿಯಿರಿ

ಹೀಗೆ ಯುವ ಆಟಗಾರರು ಚೊಚ್ಚಲ ಬಾರಿಗೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದರೆ, ಹಲವು ಸ್ಟಾರ್ ಕ್ರಿಕೆಟಿಗರಿಗೆ ಈ ಬಾರಿಯ ಟೂರ್ನಿ ಅಂತಿಮ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆಗಬಹುದು. ಹೌದು, ಈ ಕೆಳಕಂಡ 6 ಸ್ಟಾರ್ ಕ್ರಿಕೆಟಿಗರು ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಕ್ತಾಯವಾದ ನಂತರ ಅಂತರರಾಷ್ಟ್ರೀಯ ಟಿ ಟ್ವೆಂಟಿ ಮಾದರಿಗೆ ವಿದಾಯ ಹೇಳುವ ಸಾಧ್ಯತೆಗಳು ಹೆಚ್ಚಿವೆ.

1. ಆ್ಯರನ್ ಫಿಂಚ್

1. ಆ್ಯರನ್ ಫಿಂಚ್

2011ರಲ್ಲಿ ಇಂಗ್ಲೆಂಡ್ ವಿರುದ್ಧದ ಟಿ ಟ್ವೆಂಟಿ ಪಂದ್ಯದ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‍ಗೆ ಪದಾರ್ಪಣೆ ಮಾಡಿದ್ದ ಆರನ್ ಫಿಂಚ್ ತಮ್ಮ ಉತ್ತಮ ಆಟದ ಮೂಲಕ ಆಸ್ಟ್ರೇಲಿಯಾವನ್ನು ಮುನ್ನಡೆಸುವ ಅವಕಾಶವನ್ನು ಗಿಟ್ಟಿಸಿಕೊಂಡರು. ಕಳೆದ ವರ್ಷ ನಡೆದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ನಾಯಕನಾಗಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿರುವ ಆ್ಯರನ್ ಫಿಂಚ್ 35 ವರ್ಷ ವಯಸ್ಸಿನವರಾಗಿದ್ದು ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಕ್ತಾಯವಾದ ಬಳಿಕ ಫಿಂಚ್ ಟಿ ಟ್ವೆಂಟಿ ಮಾದರಿಯ ಕ್ರಿಕೆಟ್‍ಗೆ ವಿದಾಯ ಹೇಳುವ ಸಾಧ್ಯತೆ ಇದೆ.

2. ಡೇವಿಡ್ ವಾರ್ನರ್

2. ಡೇವಿಡ್ ವಾರ್ನರ್

ಆಸ್ಟ್ರೇಲಿಯಾದ ಸ್ಫೋಟಕ ಆಟಗಾರ ಡೇವಿಡ್ ವಾರ್ನರ್ ಕೂಡ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಕ್ತಾಯವಾದ ಬಳಿಕ ಚುಟುಕು ಕ್ರಿಕೆಟ್ ಮಾದರಿಗೆ ವಿದಾಯ ಹೇಳುವ ಸಾಧ್ಯತೆಗಳು ಹೆಚ್ಚಿವೆ. 2009ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‍ಗೆ ಪದಾರ್ಪಣೆ ಮಾಡಿದ್ದ ಡೇವಿಡ್ ವಾರ್ನರ್ 35 ವರ್ಷ ದಾಟಿದ್ದು, ಟಿ ಟ್ವೆಂಟಿ ಮಾದರಿಯ ಕ್ರಿಕೆಟ್‍ಗೆ ವಿದಾಯ ಹೇಳುವ ಹೊಸ್ತಿಲಿಗೆ ಬಂದು ನಿಂತಿದ್ದಾರೆ.

3. ಟಿಮ್ ಸೌಥಿ

3. ಟಿಮ್ ಸೌಥಿ

2008ರಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದ ಮೂಲಕ ನ್ಯೂಜಿಲೆಂಡ್ ಪರ ಅಂತರರಾಷ್ಟ್ರೀಯ ಕ್ರಿಕೆಟ್‍ಗೆ ಕಾಲಿಟ್ಟ ವೇಗಿ ಟಿಮ್ ಸೌಥಿ ನಂತರದ ದಿನಗಳಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‍ನ ಪ್ರಮುಖ ಬೌಲರ್ ಎನಿಸಿಕೊಂಡರು. 92 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳನ್ನಾಡಿರುವ ಟಿಮ್ ಸೌಥಿ 111 ವಿಕೆಟ್‍ಗಳನ್ನು ಪಡೆದು ಮಿಂಚಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಟಿಮ್ ಸೌಥಿ ಏಕದಿನ ಹಾಗೂ ಟಿ ಟ್ವೆಂಟಿ ಪಂದ್ಯಗಳಲ್ಲಿ ಮಂಕಾಗಿದ್ದು, ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಅಂತ್ಯಗೊಂಡ ನಂತರ ಟಿ ಟ್ವೆಂಟಿ ಕ್ರಿಕೆಟ್ ಮಾದರಿಗೆ ವಿದಾಯ ಹೇಳುವ ಸಾಧ್ಯತೆಗಳಿವೆ.

4. ಶಕೀಬ್ ಅಲ್ ಹಸನ್

4. ಶಕೀಬ್ ಅಲ್ ಹಸನ್

ಬಾಂಗ್ಲಾದೇಶದ ಶಕಿಬ್ ಅಲ್ ಹಸನ್ ಕ್ರಿಕೆಟ್ ಜಗತ್ತು ಈ ತಲೆಮಾರಿನಲ್ಲಿ ಕಂಡ ಓರ್ವ ಅತ್ಯುತ್ತಮ ಆಲ್ ರೌಂಡರ್ ಆಟಗಾರ. ಟಿ ಟ್ವೆಂಟಿ ಕ್ರಿಕೆಟ್ ಮಾದರಿಯಲ್ಲಿ 2000+ ರನ್ ಮತ್ತು 100+ ವಿಕೆಟ್ ಪಡೆದಿರುವ ಏಕೈಕ ಆಲ್ ರೌಂಡರ್ ಎಂಬ ದಾಖಲೆಯನ್ನು ಬರೆದಿರುವ ಶಕಿಬ್ ಅಲ್ ಹಸನ್ ಇತ್ತೀಚೆಗಷ್ಟೇ ಬಾಂಗ್ಲಾದೇಶ ಟೆಸ್ಟ್ ತಂಡದ ನಾಯಕನಾಗಿ ಆಯ್ಕೆಯಾಗಿದ್ದು, 35 ವರ್ಷದ ಶಕಿಬ್ ಅಲ್ ಹಸನ್ ಟೆಸ್ಟ್ ಕ್ರಿಕೆಟ್ ಕಡೆ ಹೆಚ್ಚಿನ ಗಮನ ನೀಡುವ ಸಲುವಾಗಿ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಕ್ತಾಯವಾದ ನಂತರ ಟಿ ಟ್ವೆಂಟಿ ಮಾದರಿಯ ಕ್ರಿಕೆಟ್‍ನಿಂದ ದೂರ ಸರಿಯುವ ಸಾಧ್ಯತೆಗಳಿವೆ.

5. ವಿರಾಟ್ ಕೊಹ್ಲಿ

5. ವಿರಾಟ್ ಕೊಹ್ಲಿ

ಕಿಂಗ್ ಆಫ್ ಕ್ರಿಕೆಟ್ ಎಂದೇ ಖ್ಯಾತಿಯನ್ನು ಪಡೆದಿರುವ ಟೀಮ್ ಇಂಡಿಯಾದ ಪ್ರಮುಖ ಆಟಗಾರ ವಿರಾಟ್ ಕೊಹ್ಲಿ ಕಳೆದ ವರ್ಷ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ತಂಡವನ್ನು ನಾಯಕನಾಗಿ ಮುನ್ನಡೆಸಿ ಮುಗ್ಗರಿಸಿದ್ದರು. ಸದ್ಯ ತಂಡದಲ್ಲಿ ಓರ್ವ ಆಟಗಾರನಾಗಿ ಮಾತ್ರ ಉಳಿದುಕೊಂಡಿರುವ ವಿರಾಟ್ ಕೊಹ್ಲಿ ಸಾಲುಸಾಲು ಕಳಪೆ ಪ್ರದರ್ಶನಗಳನ್ನು ನೀಡುತ್ತಿದ್ದು ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಕ್ತಾಯಗೊಂಡ ನಂತರ ಕೊಹ್ಲಿ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್‍ನತ್ತ ಹೆಚ್ಚು ಗಮನ ಹರಿಸಲಿದ್ದು ಚುಟುಕು ಕ್ರಿಕೆಟ್‍ನಲ್ಲಿ ಕೊಹ್ಲಿ ಬದಲಾಗಿ ಯುವ ಆಟಗಾರರಿಗೆ ಹೆಚ್ಚು ಅವಕಾಶ ನೀಡುವ ಸಾಧ್ಯತೆಗಳಿವೆ. ಹೀಗಾಗಿ ಕೊಹ್ಲಿ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಕ್ತಾಯವಾದ ನಂತರ ಚುಟುಕು ಕ್ರಿಕೆಟ್‌ಗೆ ವಿದಾಯ ಹೇಳುವ ಸಾಧ್ಯತೆಗಳಿವೆ.

6. ರೋಹಿತ್ ಶರ್ಮಾ

6. ರೋಹಿತ್ ಶರ್ಮಾ

ಕಳೆದ ನವೆಂಬರ್ ತಿಂಗಳಿನಿಂದ ಭಾರತ ತಂಡದ ಪೂರ್ಣಾವಧಿ ನಾಯಕನಾಗಿ ಆಯ್ಕೆಯಾಗಿರುವ ರೋಹಿತ್ ಶರ್ಮಾ ಕೂಡ ವಿರಾಟ್ ಕೊಹ್ಲಿ ರೀತಿಯೇ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಕ್ತಾಯವಾದ ನಂತರ ಚುಟುಕು ಕ್ರಿಕೆಟ್ ಮಾದರಿಗೆ ವಿದಾಯ ಹೇಳಿ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ಕಡೆಗೆ ಹೆಚ್ಚಿನ ಗಮನ ಹರಿಸುವ ಸಾಧ್ಯತೆಗಳಿವೆ.

Story first published: Friday, July 15, 2022, 16:57 [IST]
Other articles published on Jul 15, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X