Asia Cup 2023: ಇವರೇ ಪಾಕ್ ವಿರುದ್ಧದ 'ಚೊಚ್ಚಲ ಪಂದ್ಯ' ಆಡಲಿರುವ ಟೀಮ್ ಇಂಡಿಯಾದ 4 ಆಟಗಾರರು
2023ರ ಏಷ್ಯಾಕಪ್ ಆರಂಭವಾಗಿದೆ, ಟೂರ್ನಿಯ ಮೊದಲ ಪಂದ್ಯದಲ್ಲಿ ಅಬ್ಬರದ ಪ್ರದರ್ಶನ ನೀಡಿದ್ದ ಪಾಕಿಸ್ತಾನ ತಂಡ ನೇಪಾಳ ವಿರುದ್ಧ 238 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ನೇಪಾಳ ವಿರುದ್ಧದ ಈ ಪಂದ್ಯದಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಅವರ ಬ್ಯಾಟಿಂಗ್ ಅಬ್ಬರ ಜೋರಾಗಿತ್ತು.
ಆದರೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಕ್ರಿಕೆಟ್ ನಲ್ಲಿ ಉಭಯ ದೇಶಗಳ ನಡುವೆ ಪಂದ್ಯ ನಡೆದಾಗಲೆಲ್ಲ ಸಂಭ್ರಮ ಮುಗಿಲು ಮುಟ್ಟುತ್ತದೆ.
ಟೀಂ ಇಂಡಿಯಾದಲ್ಲಿ ಅನೇಕ ಯುವ ಕ್ರಿಕೆಟಿಗರು ಇದ್ದಾರೆ. ಅವರು ಮೊದಲ ಬಾರಿಗೆ ಪಾಕಿಸ್ತಾನದ ವಿರುದ್ಧ ಏಕದಿನ ಪಂದ್ಯವನ್ನು ಆಡಲಿದ್ದಾರೆ.

ಇದರಲ್ಲಿ ಆರಂಭಿಕ ಆಟಗಾರ ಶುಭ್ಮನ್ ಗಿಲ್, ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್, ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಮತ್ತು ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಸೇರಿದ್ದಾರೆ. ಇವರೆಲ್ಲ ಆಡುವ ಹನ್ನೊಂದರಲ್ಲಿ ಸ್ಥಾನ ಪಡೆಯುವುದು ಖಚಿತ.
ಅಂದಹಾಗೆ, ತಿಲಕ್ ವರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಆಡುವ XI ನಲ್ಲಿ ಸ್ಥಾನ ಪಡೆದರೆ, ಅವರು ಮೊದಲ ಬಾರಿಗೆ ಪಾಕಿಸ್ತಾನದ ವಿರುದ್ಧವೂ ಆಡಲಿದ್ದಾರೆ. 2023ರ ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಸೆಪ್ಟೆಂಬರ್ 2 ರಂದು ಪಂದ್ಯ ನಡೆಯಲಿದೆ. ನಾಲ್ಕು ವರ್ಷಗಳ ಬಳಿಕ ಎರಡೂ ತಂಡಗಳು ಏಕದಿನ ಮಾದರಿಯಲ್ಲಿ ಮುಖಾಮುಖಿಯಾಗಲಿವೆ.
ಇದಕ್ಕೂ ಮುನ್ನ 2019ರ ಏಕದಿನ ವಿಶ್ವಕಪ್‌ನಲ್ಲಿ ಇಬ್ಬರ ನಡುವೆ ಘರ್ಷಣೆ ಜಿದ್ದು, ಕಂಡು ಬಂದಿತ್ತು. ಅಂದಹಾಗೆ, ಎಲ್ಲರೂ ಈ ಅದ್ಭುತ ಪಂದ್ಯಕ್ಕಾಗಿ ಕಾಯುತ್ತಿದ್ದಾರೆ. ಈ ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಬಲಿಷ್ಠವಾಗಿದ್ದು, ಫೈನಲ್ ನಲ್ಲೂ ಕಪ್ ಗಾಗಿ ಫೈಟ್ ನಡೆಸಬಹುದು ಎಂಬ ಲೆಕ್ಕಾಚಾರ ಹಾಕಿಕೊಳ್ಳಲಾಗಿದೆ.
ಅಂದಹಾಗೆ ಟೀಮ್ ಇಂಡಿಯಾದ ಸ್ಟಾರ್ ಯುವ ಆಟಗಾರರು ಪಾಕ್ ತಂಡದ ವೇಗದ ಬೌಲರ್ ಗಳ ವೇಗವನ್ನು ಅರಿತಿಲ್ಲ. ಹೀಗಾಗಿ ಈ ವಿಷಯ ಹಿನ್ನಡೆ ಆದರೂ ಆಗಬಹುದು. ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ದೊಡ್ಡ ಹಿನ್ನಡೆ ಅನುಭವಿಸಿದೆ.
ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಏಷ್ಯಾಕಪ್‌ನ ಮೊದಲ ಎರಡು ಪಂದ್ಯಗಳನ್ನು ಆಡಲು ಸಾಧ್ಯವಾಗುವುದಿಲ್ಲ. ಅಂದರೆ ಸೆಪ್ಟೆಂಬರ್ 2 ರಂದು ಇಶಾನ್ ಕಿಶನ್ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನ ಭಾಗವಾಗಲಿದ್ದಾರೆ. (Photo Courtesy: PTI)
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications