IPLನಲ್ಲಿ 100ಕ್ಕೂ ಹೆಚ್ಚು ಪಂದ್ಯಗಳಲ್ಲಿ ಒಂದೇ ತಂಡವನ್ನು ಮುನ್ನಡೆಸಿದ 4 ನಾಯಕರು ಇವರು!
ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುವ ಮೂಲಕ ಐಪಿಎಲ್‌ನಲ್ಲಿ ವಿಶೇಷ ಸಾಧನೆಯೊಂದನ್ನು ಮಾಡಲಿದ್ದಾರೆ. ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 200ನೇ ಪಂದ್ಯದಲ್ಲಿ ಮುನ್ನಡೆಸಿದ ವಿಶೇಷ ಸಾಧನೆ ಮಾಡಿದ್ದಾರೆ. ಈ ಮೂಲಕ ಐಪಿಎಲ್‌ನಲ್ಲಿ ಈ ಸಾಧನ ಮಾಡಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ ಎಂಎಸ್ ಧೋನಿ.
ಸಾಕಷ್ಟು ಪೈಪೋಟಿಯನ್ನು ಹೊಂದಿರುವ ವಿಶ್ವದ ಬಹುದೊಡ್ಡ ಐಪಿಎಲ್ ಟೂರ್ನಿ ಎನಿಸಿಕೊಂಡಿರುವ ಐಪಿಎಲ್‌ನಲ್ಲಿ ಒಂದೇ ತಂಡದ ಪರವಾಗಿ ಸುದೀರ್ಘ ಕಾಲ ನಾಯಕನಾಗಿ ಮುನ್ನಡೆಸುವುದು ಸಾಧಾರಣ ಸಾಧನೆಯಲ್ಲ. ಆದರೆ ಈ ನಾಲ್ವರು ಆಟಗಾರರು ಐಪಿಎಲ್‌ನಲ್ಲಿ ಒಂದೇ ತಂಡವನ್ನು 100ಕ್ಕೂ ಅಧಿಕ ಪಂದ್ಯಗಳಲ್ಲಿ ಮುನ್ನಡೆಸಿದ ಸಾಧನೆ ಮಾಡಿದ್ದಾರೆ. ಆ ನಾಲ್ವರು ಆಟಗಾರರು ಯಾರು? ಇಲ್ಲಿದೆ ಮಾಹಿತಿ.

4. ಗೌತಮ್ ಗಂಭೀರ್- ಕೆಕೆಆರ್
ಐಪಿಎಲ್‌ನ ಯಶಸ್ವಿ ನಾಯಕರಲ್ಲಿ ಒಬ್ಬರೆನಿಸಿರುವ ಗೌತಮ್ ಗಂಭೀರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎರಡು ಬಾರಿ ಚಾಂಪಿಯನ್ ಪಟ್ಟಕ್ಕೇರಿಸಿದ್ದಾರೆ. ರೋಹಿತ್ ಶರ್ಮಾ ಹಾಗೂ ಎಂಎಸ್ ಧೋನಿ ಬಳಿಕ ನಾಯಕನಾಗಿ ಅತಿ ಹೆಚ್ಚು ಬಾರಿ ಟ್ರೋಫಿ ಗೆದ್ದ ನಾಯಕ ಎನಿಸಿಕೊಂಡಿದ್ದಾರೆ. ಗೌತಮ್ ಗಂಭೀರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸುದೀರ್ಘ ಕಾಲ ಮುನ್ನಡೆಸಿದ ಸಾಧನೆ ಮಾಡಿದ್ದು 100ಕ್ಕೂ ಅಧಿಕ ಪಂದ್ಯಗಳನ್ನು ಮುನ್ನಡೆಸಿದ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಕೆಕೆಆರ್ ತಂಡವನ್ನು ಗಂಭೀರ್ 108 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ.
3. ವಿರಾಟ್ ಕೊಹ್ಲಿ- ಆರ್‌ಸಿಬಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ಸುದೀರ್ಘ ಕಾಲ ಮುನ್ನಡೆಸಿದ ಸಾಧನೆ ಮಾಡಿದ್ದಾರೆ. 2022ರ ಐಪಿಎಲ್ ಆವೃತ್ತಿಗೂ ಮುನ್ನ ನಾಯಕತ್ವವನ್ನು ತೊರೆಯುವುದಕ್ಕೂ ಮುನ್ನ ವಿರಾಟ್ ಕೊಹ್ಲಿ 140 ಪಂದ್ಯಗಳಲ್ಲಿ ಬೆಂಗಳೂರು ಮೂಲದ ಫ್ರಾಂಚೈಸಿಯನ್ನು ಮುನ್ನಡೆಸಿದ್ದಾರೆ. 2016ರಲ್ಲಿ ಕೊಹ್ಲಿ ಆರ್‌ಸಿಬಿ ತಂಡವನ್ನು ಫೈನಲ್ ಹಂತಕ್ಕೆ ಮುನ್ನಡೆಸಿದ್ದು ಅತ್ಯುತ್ತಮ ಸಾಧನೆಯಾಗಿದೆ.
2. ರೋಹಿತ್ ಶರ್ಮಾ- ಮುಂಬೈ ಇಂಡಿಯನ್ಸ್
ಐಪಿಎಲ್‌ನ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಂಡಿರುವ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡವನ್ನು ನೂರಕ್ಕೂ ಅಧಿಕ ಪಂದ್ಯಗಳಲ್ಲಿ ಮುನ್ನಡೆಸಿದ ಸಾಧನೆ ಮಾಡಿದ್ದಾರೆ. ರೋಹಿತ್ ಶರ್ಮಾ ನಾಯಕನಾಗಿ 146 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಈ ಅವಧಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ 5 ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ.
1. ಎಂಎಸ್ ಧೋನಿ- ಚೆನ್ನೈ ಸೂಪರ್ ಕಿಂಗ್ಸ್
ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನಾಗಿ ಎಂಎಸ್ ಧೋನಿ 200 ಪಂದ್ಯಗಳಲ್ಲಿ ಈ ತಂಡವನ್ನು ಮುನ್ನಡೆಸಿರುವುದು ಐಪಿಎಲ್‌ನ ದಾಖಲೆಯಾಗಿದೆ. 2008ರಿಂದ ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವ ವಹಿಸಿಕೊಂಡಿದ್ದು ನಾಲ್ಕು ಬಾರಿ ಸಿಎಸ್‌ಕೆ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಎಂಎಸ್ ಧೋನಿ 200ನೇ ಪಂದ್ಯದಲ್ಲಿ ಸಿಎಸ್‌ಕೆ ತಂಡವನ್ನು ಮುನ್ನಡೆಸಿದ ಸಾಧನೆ ಮಾಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications