For Quick Alerts
ALLOW NOTIFICATIONS  
For Daily Alerts
 

ಲಂಕಾ ದಹನ ಮಾಡುವ 11 ಆಟಗಾರು ಇವರೇ: ಫೈನಲ್ ಗೆಲ್ಲಿಸುವ ಭಾರತದ ಬಲಿಷ್ಠ ಆಡುವ ಬಳಗ ಇಲ್ಲಿದೆ!

ಏಷ್ಯಾಕಪ್ 2023ರ ಚಾಂಪಿಯನ್ ಯಾರು ಎನ್ನುವುದಕ್ಕೆ ಇನ್ನು ಒಂದೇ ದಿನದಲ್ಲಿ ಉತ್ತರ ದೊರೆಯಲಿದೆ. ಭಾನುವಾರ ಭಾರತ ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಈ ಪಂದ್ಯ ಏಷ್ಯಾದ ಚಾಂಪಿಯನ್ ಯಾರು ಎನ್ನುವುದನ್ನು ನಿರ್ಧರಿಸಿದ್ದು ವಿಶ್ವಕಪ್ ಸನಿಹದಲ್ಲಿ ಈ ಪಟ್ಟ ಎರಡು ತಂಡಗಳಿಗೂ ಅತ್ಯಂತ ಮಹತ್ವದ್ದಾಗಿರಲಿದೆ.

ಹೀಗಾಗಿ ರೋಹಿತ್ ಶರ್ಮಾ ಪಡೆ ಈ ಪಂದ್ಯಕ್ಕೆ ಬಲಿಷ್ಠ ಆಡುವ ಬಳಗದೊಂದಿಗೆ ಕಣಕ್ಕಿಳಿಯಲು ಸಿದ್ಧವಾಗಿದೆ. ಏಷ್ಯಾಕಪ್ ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿರುವ ಭಾರತ ತಂಡ ಸೂಪರ್ 4 ಹಂತದ ಕೊನೆಯ ಪಂದ್ಯದಲ್ಲಿ ಬಾಂಗ್ಲದೇಶದ ವಿರುದ್ಧ ರೋಚಕ ಸೆಣೆಸಾಟದ ಬಳಿಕ ಸೋಲು ಕಂಡಿತ್ತು. ಆದರೆ ಫೈನಲ್ ಪಂದ್ಯದಲ್ಲಿ ಭಾರತ ಬಲಿಷ್ಠ ಆಟಗಾರರ ಪಡೆಯೊಂದಿಗೆ ಮತ್ತೆ ಕಣಕ್ಕಿಳಿಯಲಿದ್ದು ಯಾರೆಲ್ಲಾ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಳ್ಳಬಹುದು ಎನ್ನುವುದು ಕುತೂಹಲ ಮೂಡಿಸಿದೆ.

These Key Players Must Play for Team India in the Asia Cup 2023 Final to Ensure Victory

ಸಂದರ್ಭದಲ್ಲಿ ಶ್ರೀಲಂಕಾ ವಿರುದ್ಧ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯಬಹುದಾದ ಟೀಮ್ ಇಂಡಿಯಾದ ಬಲಿಷ್ಠ ಆಡುವ ಬಳಗ ಹೇಗಿರಬಹುದು? ಇಲ್ಲಿದೆ ಸಂಭಾವ್ಯ ತಂಡ

ಅಗ್ರ ಕ್ರಮಾಂಕ ಬಲಿಷ್ಠ

ರೋಹಿತ್, ಗಿಲ್, ಕೊಹ್ಲಿ

ಟೀಮ್ ಇಂಡಿಯಾದ ಅಗ್ರ ಕ್ರಮಾಂಖ ಬಲಿಷ್ಠವಾಗಿದ್ದು ದಿಗ್ಗಜ ಆಟಗಾರರನ್ನು ಒಳಗೊಂಡಿದೆ. ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿಯುವುದರಲ್ಲಿ ಅನುಮಾನವಿಲ್ಲ. ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ವಿಭಾಗ ಯಶಸ್ಸಾದರೆ ಟೀಮ್ ಇಂಡಿಯಾದ ಬ್ಯಾಟಿಂಗ್ ವಿಭಾಗ ಬಹುತೇಕ ಯಶಸ್ಸು ಸಾಧಿಸಿದಂತೆಯೇ.

ಮಧ್ಯಮ ಕ್ರಮಾಂಕ ಹಾಗೂ ಆಲ್‌ರೌಂಡರ್‌ಗಳು

ರಾಹುಲ್- ಇಶಾನ್-ಹಾರ್ದಿಕ್-ಜಡೇಜಾ

ಇನ್ನು ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ರಾಹುಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದು ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿ ಅಬ್ಬರಿಸಿದ್ದರು. ಇನ್ನು ಇಶಾನ್ ಕಿಶನ್ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದು ಆರನೇ ಕ್ರಮಾಂಕದಲ್ಲಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಆಲ್‌ರೌಂಡರ್ ಆಗಿ ಕಣಕ್ಕಿಳಿಯಲಿದ್ದಾರೆ. ಇನ್ನು ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ 7 ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದು ಸ್ಪಿನ್ ವಿಭಾಗದಲ್ಲಿ ಪ್ರಮುಖ ಅಸ್ತ್ರವಾಗಲಿದ್ದಾರೆ.

ಬೌಲಿಂಗ್ ವಿಭಾಗ

ಶಾರ್ದೂಲ್, ಕುಲ್‌ದೀಪ್, ಸಿರಾಜ್, ಬೂಮ್ರಾ

ಇನ್ನು ಟೀಮ್ ಇಂಡಿಯಾದ ಬೌಲಿಂಗ್ ವಿಭಾಗದಲ್ಲಿ ಶಾರ್ದೂಲ್ ಠಾಕೂರ್ ವೇಗದ ಬೌಲಿಂಗ್ ಜೊತೆಗೆ ಬ್ಯಾಟಿಂಗ್‌ನಲ್ಲಿಯೂ ಅಲ್ಪ ಕೊಡುಗೆ ನೀಡುವ ಸಾಮರ್ಥ್ಯವಿರುವ ಆಟಗಾರ ಎನಿಸಿಕೊಂಡಿದ್ದಾರೆ. ಇನ್ನು ಕುಲ್‌ದೀಪ್ ಯಾದವ್ ಭಾರತದ ಪ್ರಮುಖ ಸ್ಪಿನ್ ಬೌಲಿಂಗ್ ಅಸ್ತ್ರ. ಟೂರ್ನಿಯಲ್ಲಿ ಕುಲ್‌ದೀಪ್ ಯಾದವ್ ಅದ್ಭುತ ಯಶಸ್ಸು ಸಾಧಿಸಿ ಅಬ್ಬರಿಸಿದ್ದಾರೆ. ಇನ್ನು ಜಸ್ಪ್ರೀತ್ ಬೂಮ್ರಾ ತಂಡದ ಪ್ರಮುಖ ಅಸ್ತ್ರವಾಗಲಿದ್ದು ಮೊಹಮ್ಮದ್ ಸಿರಾಜ್ ಕೂಡ ಆಡುವ ಬಳಗದಲ್ಲಿ ಸ್ಥಾನ ಪಡೆಯುವುದು ನಿಶ್ಚಿತ.

ಸಂಭಾವ್ಯ ಆಡುವ ಬಳಗ:

ರೋಹಿತ್ ಶರ್ಮಾ(ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ

Story first published: Saturday, September 16, 2023, 16:21 [IST]
Other articles published on Sep 16, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+