ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೀಮ್ ಇಂಡಿಯಾಗೆ ಹೇಗೆ ತಿರುಗಿ ಬೀಳಬೇಕೆಂದು ತಿಳಿದಿದೆ ಎಂದ ಇಂಗ್ಲೆಂಡ್ ಕೋಚ್

They know how to fight back, England coach Chris Silverwood on team India

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯವನ್ನು ಗೆದ್ದ ಟೀಮ್ ಇಂಡಿಯಾ ಪ್ರದರ್ಶನವನ್ನು ಇಂಗ್ಲೆಂಡ್ ಕೋಚ್ ಕ್ರಿಸ್ ಸಿಲ್ವರ್‌ವುಡ್ ಪ್ರಶಂಸಿಸಿದ್ದಾರೆ. ವಿರಾಟ್ ಕೊಹ್ಲಿ ನೇತೃತ್ಬದ ಭಾರತೀಯ ತಂಡಕ್ಕೆ ಹೇಗೆ ತಿರುಗು ಬೀಳಬೇಕು ಎಂಬುದು ಚೆನ್ನಾಗಿ ತಿಳಿದಿದೆ ಎಂದು ಸಿಲ್ವರ್‌ವುಡ್ ಹೇಳಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ 99 ರನ್‌ಗಳ ಹಿನ್ನಡೆಯ ಬಳಿಕವೂ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ಮೂಲಕ ಇಂಗ್ಲೆಂಡ್‌ಗೆ ಎದುರೇಟು ನೀಡುವಲ್ಲಿ ಯಶಸ್ವಿಯಾಗಿತ್ತು.

ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಭುತ ಆಟವನ್ನು ಪ್ರದರ್ಶಿಸಿದ ಟೀಮ್ ಇಂಡಿಯಾ ಬ್ಯಾಟಿಂಗ್‌ನಲ್ಲಿ 466 ರನ್‌ಗಳನ್ನು ಗಳಿಸಿ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು 368 ರನ್‌ಗಳ ದೊಡ್ಡ ಗುರಿಯನ್ನು ನಿಗದಿಪಡಿಸಿತ್ತು. ಈ ಮೂಲಕ ಟೀಮ್ ಇಂಡಿಯಾ ಈ ಪಂದ್ಯದಲ್ಲಿ 157 ರನ್‌ಗಳ ಅಂತರದ ಜಯ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಈ ಸೋಲಿನ ಬಳಿಕ ಮಾತನಾಡಿದ ಕ್ರಿಸ್ ಸಿಲ್ವರ್‌ವುಡ್ ಮೊದಲ ಇನ್ನಿಂಗ್ಸ್‌ನಲ್ಲಿ 200 ರನ್‌ಗಳ ಮುನ್ನಡೆ ಸಾಧಿಸುವ ಮೂಲಕ ಭಾರತವನ್ನು ಒತ್ತಡಕ್ಕೆ ಸಿಲುಕಿಸುವ ಅವಕಾಶವಿತ್ತು ಎಂದಿದ್ದಾರೆ.

ರೋಹಿತ್ ಶರ್ಮಾಗೆ ಗಾಯ, 5ನೇ ಟೆಸ್ಟ್‌ನಲ್ಲಿ ಆಡೋ ಬಗ್ಗೆ ಸುಳಿವಿತ್ತ ಹಿಟ್‌ಮ್ಯಾನ್ರೋಹಿತ್ ಶರ್ಮಾಗೆ ಗಾಯ, 5ನೇ ಟೆಸ್ಟ್‌ನಲ್ಲಿ ಆಡೋ ಬಗ್ಗೆ ಸುಳಿವಿತ್ತ ಹಿಟ್‌ಮ್ಯಾನ್

"ಒಂದು ಹಂತದಲ್ಲಿ ನಾವು ಟೀಮ್ ಇಂಡಿಯಾ ವಿರುದ್ಧ ಮೇಲುಗೈ ಸಾಧಿಸುವ ಅವಕಾಶವನ್ನು ಹೊಂದಿದ್ದೆವು. ಇದು ಭಾರತೀಯ ತಂಡದ ವಿರುದ್ಧ ಮೇಲುಗೈ ಸಾಧಿಸಲು ನಮಗಿದ್ದ ಉತ್ತಮವಾದ ಅವಕಾಶವಾಗಿತ್ತು. ಈ ಮೂಲಕ ಭಾರತ ತಂಡದ ಮೇಲೆ ಒತ್ತಡವನ್ನು ಹೇರುವ ಅವಕಾಶವಿತ್ತು" ಎಂದು ಸಿಲ್ವರ್‌ವುಡ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಪಂದ್ಯದ ಸೋಲಿನ ಬಳಿಕ ಕ್ರಿಕ್‌ಇನ್ಫೋಗೆ ನೀಡಿದ ಪ್ರತಿಕ್ರಿಯೆಯಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಇಂಗ್ಲೆಂಡ್ ತಂಡದ ಕೋಚ್.

"ಆದರೆ ನಾವು ಈ ಅವಕಾಶವನ್ನು ಬಳಸಿಕೊಳ್ಳುವಲ್ಲಿ ವಿಫಲವಾದೆವು. ಇದು ನಮ್ಮ ಡ್ರೆಸ್ಸಿಂಗ್‌ರೂಮ್‌ನಲ್ಲಿಯೂ ಪರಿಣಾಮ ಬೀರಿದೆ. ಈ ವಿಚಾರವಾಗಿ ನಾವು ಚರ್ಚಿಸುತ್ತೇವೆ. ನಾವು 190 ರನ್‌ಗಳಿಗೂ ಅಧಿಕ ಅಂತರದ ಮುನ್ನಡೆ ಸಾಧಿಸುವ ಅವಕಾಶ ಹೊಂದಿದ್ದೆವು. ಈ ಮೂಲಕ ಎದುರಾಳಿ ತಂಡದ ಮೇಲೆ ಒತ್ತಡ ಹೇರುವ ಅವಕಾಶವಿತ್ತು. ಆದರೆ ಇದನ್ನು ಭಾರತ ವಿಫಲಗೊಳಿಸಿತು. ಒದರ ಸಂಪೂರ್ಣ ಶ್ರೇಯಸ್ಸು ಭಾರತ ತಂಡಕ್ಕೆ ಸಲ್ಲಬೇಕು. ಅವರಿಗೆ ಯಾವ ರೀತಿಯಾಗಿ ತಿರುಗಿಬಿದ್ದು ಹೋರಾಟ ನಡೆಸಬೇಕು ಎಂಬುದು ತಿಳಿದಿದೆ" ಎಂದಿದ್ದಾರೆ ಇಂಗ್ಲೆಂಡ್ ತಮಡದ ಕೋಚ್ ಕ್ರಿಸ್ ಸಿಲ್ವರ್‌ವುಡ್.

ಮುನ್ನಡೆಯ ಕನಸು ಕಂಡಿದ್ದ ಇಂಗ್ಲೆಂಡ್: ಹೆಡಿಂಗ್ಲೆ ಪಂದ್ಯವನ್ನು ಗೆದ್ದು ಸಂಭ್ರಮದಲ್ಲಿದ್ದ ಇಂಗ್ಲೆಂಡ್ ತಂಡ ಅದೇ ಉತ್ಸಾಹದಲ್ಲಿ ಲಂಡನ್‌ನ ಓವಲ್ ಕ್ರೀಡಾಂಗಣಕ್ಕೆ ಇಳಿದಿತ್ತು. ಐವತ್ತು ವರ್ಷಗಳಿಂದ ಭಾರತ ಗೆಲುವನ್ನೇ ಕಾಣದ ಓವಲ್ ಅಂಗಳದಲ್ಲಿಯೂ ಇಂಗ್ಲೆಂಡ್ ತಂಡ ಗೆದ್ದು ಬೀಗುವ ಹುಮ್ಮಸ್ಸಿನಲ್ಲಿತ್ತು. ಇದಕ್ಕೆ ಪೂರಕವಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ ಬೌಲಿಂಗ್‌ನಲ್ಲಿ ಭಾರತ ತಂಡಕ್ಕೆ ಆಘಾತ ನೀಡಿತ್ತು. ಭಾರತ ತಂಡವನ್ನು 191 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಇಂಗ್ಲೆಂಡ್ ತಮಡ ಸಫಲವಾಗಿತ್ತು. ನಂತರ ಮೊದಲ ಇನ್ನಿಂಗ್ಸ್‌ನ ಬ್ಯಾಟಿಂಗ್‌ನಲ್ಲಿ ಆರಂಭಿಕ ಆಘಾತ ಅನುಭವಿಸಿದ ನಂತರ ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ಹೋರಾಟದ ಪರಿಣಾಮವಾಗಿ ಇಂಗ್ಲೆಂಡ್ 99 ರನ್‌ಗಳ ಮುನ್ನಡೆ ಪಡೆಯಲು ಸಾಧ್ಯವಾಗಿತ್ತು.

ಓವಲ್ ಟೆಸ್ಟ್ ಪಂದ್ಯದಲ್ಲಿ ಬೃಹತ್ ದಾಖಲೆ ನಿರ್ಮಿಸಿದ ಎರಡೂ ತಂಡಗಳ ನಾಲ್ವರು ಆಟಗಾರರುಓವಲ್ ಟೆಸ್ಟ್ ಪಂದ್ಯದಲ್ಲಿ ಬೃಹತ್ ದಾಖಲೆ ನಿರ್ಮಿಸಿದ ಎರಡೂ ತಂಡಗಳ ನಾಲ್ವರು ಆಟಗಾರರು

Kohli ಅವರ ಈ celebration ಇಷ್ಟರ ಮಟ್ಟಿಗೆ ಚರ್ಚೆಗೆ ಗ್ರಾಸವಾಗಿದೆ | Oneindia Kannada

ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತದ ಎದುರೇಟು: ಇನ್ನು ಮೊದಲ ಇನ್ನಿಂಗ್ಸ್‌ನಲ್ಲಿ 99 ರನ್‌ಗಳ ಹಿನ್ನಡೆ ಅನುಭವಿಸಿದ ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿತು. ಆರಂಭಿಕ ಆಟಗಾರರಿಂದ ಹಿಡಿದು ಟೀಮ್ ಇಂಡಿಯಾದ ಬಹುತೇಕ ಎಲ್ಲಾ ಆಟಗಾರರು ಕೂಡ ಉತ್ತಮ ಕೊಡುಗೆ ನೀಡಲು ಸಾಧ್ಯವಾಗಿತ್ತು. ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿ ತಂಡದ ಬೃಹತ್ ಮೊತ್ತಕ್ಕೆ ಉತ್ತಮ ವೇದಿಕೆ ಸೃಷ್ಟಿಸಿದರು. ಬಳಿಕ ಶಾರ್ದೂಲ್ ಠಾಕೂರ್ ಹಾಗೂ ರಿಷಭ್ ಪಂತ್ ಕೂಡ ಉತ್ತಮ ಪ್ರದರ್ಶನ ನೀಡಿ ಅರ್ಧ ಶತಕದ ಪ್ರದರ್ಶನ ನೀಡಿದರು. ಈ ಮೂಲಕ ಭಾರತ 466 ರನ್‌ಗಳನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಗಳಿಸಲು ಶಕ್ತವಾಯಿತು. ಈ ಮೂಲಕ ಎದುರಾಳಿ ಇಂಗ್ಲೆಂಡ್‌ಗೆ ಎರಡನೇ ಇನ್ನಿಂಗ್ಸ್‌ನಲ್ಲಿ 367 ರನ್‌ಗಳ ದಾಖಲೆಯ ಗುರಿಯನ್ನು ನೀಡಿತ್ತು. ಬಳಿಕ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಬೌಲಿಂಗ್‌ನಲ್ಲಿಯೂ ಅಮೋಘ ಯಶಸ್ಸು ಸಾಧಿಸಲು ಸಾಧ್ಯವಾಯಿತು. ಮೊದಲ ವಿಕೆಟ್‌ಗೆ ಭರ್ಜರಿ 100 ರನ್‌ಗಳ ಜೊತೆಯಾಟ ನೀಡಿದ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳು ಬಳಿಕ ಕುಸಿಯುತ್ತಾ ಸಾಗಿತು. ಟೀಮ್ ಇಂಡಿಯಾದ ಒಟ್ಟಾರೆ ನೀಡಿದ ಪ್ರದರ್ಶನದಿಂದಾಗಿ ಕೇವಲ 210 ರನ್‌ಗಳಿಗೆ ಇಂಗ್ಲೆಂಡ್ ಆಲೌಟ್ ಆಗಿತ್ತು. ಈ ಮೂಲಕ ಭಾರತ ತಂಡ 157 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

Story first published: Tuesday, September 7, 2021, 19:01 [IST]
Other articles published on Sep 7, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X