ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

'ಕೊಹ್ಲಿ ಬಗ್ಗೆ ಟೀಕಿಸುವ ನಿಮಗೆ ಮುಂದೊಂದು ದಿನ ಆತನ ಬೆಲೆ ತಿಳಿಯುತ್ತದೆ'; ಕಿಡಿಕಾರಿದ ಮಾಜಿ ಕ್ರಿಕೆಟಿಗ

Those criticising Kohlis leadership will admire his tactical genius in future days says Aakash Chopra

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತ ಸಂಪೂರ್ಣವಾಗಿ ಮುಗಿದಿದ್ದು, ಕಳೆದ ಭಾನುವಾರದಿಂದ ಪ್ಲೇ ಆಫ್ ಸುತ್ತಿನ ಪಂದ್ಯಗಳು ಆರಂಭವಾಗಿವೆ. ಅಕ್ಟೋಬರ್ 10ರಂದು ದುಬೈ ಕ್ರೀಡಾಂಗಣದಲ್ಲಿ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ಗೆಲುವು ಸಾಧಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನೇರವಾಗಿ ಫೈನಲ್ ಪ್ರವೇಶವನ್ನು ಪಡೆದುಕೊಂಡಿದೆ.

ಐಪಿಎಲ್ 2021: ಈ ಬಾರಿಯ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿ ನೆಲಕಚ್ಚಿದ 11 ಆಟಗಾರರ ಪಟ್ಟಿಐಪಿಎಲ್ 2021: ಈ ಬಾರಿಯ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿ ನೆಲಕಚ್ಚಿದ 11 ಆಟಗಾರರ ಪಟ್ಟಿ

ಮತ್ತೊಂದೆಡೆ ಅಕ್ಟೋಬರ್ 11ರ ಸೋಮವಾರದಂದು ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಈ ಪಂದ್ಯದಲ್ಲಿ ಗೆದ್ದ ತಂಡವು ಕ್ವಾಲಿಫೈಯರ್ 2 ಪಂದ್ಯಕ್ಕೆ ಪ್ರವೇಶವನ್ನು ಪಡೆದುಕೊಳ್ಳಲಿದ್ದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅಕ್ಟೋಬರ್ 13ರಂದು ಸೆಣಸಾಟ ನಡೆಸಲಿದೆ.

 ಲಾಸ್ಟ್ ಬಾಲ್ ಸಿಕ್ಸ್‌ ಸಿಡಿಸಿ ಹೀರೋ ಆದ ಭರತ್ ಆ ಒಂದೇ ಒಂದು ಪಂದ್ಯದಲ್ಲಿ ಗಳಿಸಿದ ಹಣವೆಷ್ಟು ಗೊತ್ತಾ? ಲಾಸ್ಟ್ ಬಾಲ್ ಸಿಕ್ಸ್‌ ಸಿಡಿಸಿ ಹೀರೋ ಆದ ಭರತ್ ಆ ಒಂದೇ ಒಂದು ಪಂದ್ಯದಲ್ಲಿ ಗಳಿಸಿದ ಹಣವೆಷ್ಟು ಗೊತ್ತಾ?

ಇನ್ನು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ನಂತರ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವದಿಂದ ಕೆಳಗಿಳಿಯುವ ಸುದ್ದಿ ನಿಮಗೆಲ್ಲರಿಗೂ ತಿಳಿದಿರುವುದೇ. ಹೌದು, ಯುಎಇ ಚರಣ ಆರಂಭವಾಗುವ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕತ್ವದಿಂದ ಕೆಳಗಿಳಿಯುವ ವಿಷಯವನ್ನು ಸ್ವತಃ ವಿರಾಟ್ ಕೊಹ್ಲಿ ಅವರೇ ಪ್ರಕಟಿಸಿದ್ದರು. ಇಷ್ಟು ಮಾತ್ರವಲ್ಲದೇ ಯುಎಇ ಚರಣ ಆರಂಭವಾಗುವ ಮುನ್ನ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಮುಗಿದ ಬಳಿಕ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವದಿಂದಲೂ ಸಹ ಕೆಳಗಿಳಿಯುವ ನಿರ್ಧಾರವನ್ನು ವಿರಾಟ್ ಕೊಹ್ಲಿಲಾಸ್ಟ್ ಬಾಲ್ ಸಿಕ್ಸ್‌ ಸಿಡಿಸಿ ಹೀರೋ ಆದ ಭರತ್ ಆ ಒಂದೇ ಒಂದು ಪಂದ್ಯದಲ್ಲಿ ಗಳಿಸಿದ ಹಣವೆಷ್ಟು ಗೊತ್ತಾ? ಪ್ರಕಟಿಸಿದ್ದರು. ಹೀಗೆ ವಿರಾಟ್ ಕೊಹ್ಲಿ ಈ ರೀತಿಯ ನಿರ್ಧಾರಗಳನ್ನು ಕೈಗೊಂಡ ನಂತರ ಸಾಕಷ್ಟು ಟೀಕೆಗಳು ಕೊಹ್ಲಿ ನಾಯಕತ್ವದ ವಿರುದ್ಧ ವ್ಯಕ್ತವಾದವು. ಉತ್ತಮವಾಗಿ ನಾಯಕತ್ವವನ್ನು ನಿರ್ವಹಿಸುವಲ್ಲಿ ವಿರಾಟ್ ಕೊಹ್ಲಿ ಎಡವಿರುವುದರಿಂದ ಈ ರೀತಿಯ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂಬ ಟೀಕೆಗಳು ವಿರಾಟ್ ಕೊಹ್ಲಿ ವಿರುದ್ಧ ವ್ಯಕ್ತವಾದವು. ಇದೀಗ ಈ ಟೀಕೆಗಳ ಕುರಿತು ಕಿಡಿಕಾರಿರುವ ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಈ ಕೆಳಕಂಡಂತೆ ಪ್ರತಿಕ್ರಿಯಿಸಿದ್ದಾರೆ.

ಕೊಹ್ಲಿಯನ್ನು ಟೀಕಿಸುತ್ತಿರುವವರೇ ಮುಂದೊಂದು ದಿನ ಆತನ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡುತ್ತಾರೆ

ಕೊಹ್ಲಿಯನ್ನು ಟೀಕಿಸುತ್ತಿರುವವರೇ ಮುಂದೊಂದು ದಿನ ಆತನ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡುತ್ತಾರೆ


'ಮುಂದಿನ ಕೆಲ ವರ್ಷಗಳಲ್ಲಿಯೇ ಕ್ಯಾಪ್ಟನ್ ವಿರಾಟ್ ಕೊಹ್ಲಿಯನ್ನು ನಾವು ಮಿಸ್ ಮಾಡಿಕೊಳ್ಳಲಿದ್ದೇವೆ. ಸದ್ಯಕ್ಕೆ ಆತನ ನಾಯಕತ್ವವನ್ನು ಟೀಕಿಸುತ್ತಿರುವವರು ಮುಂದಿನ ದಿನಗಳಲ್ಲಿ ಆತನ ನಾಯಕತ್ವದ ಕುಶಲತೆಯ ಕುರಿತು ಮೆಚ್ಚುಗೆಯ ಮಾತುಗಳನ್ನು ಆಡಲು ಆರಂಭಿಸುತ್ತಾರೆ' ಎಂದು ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಟೀಕಾಕಾರರ ವಿರುದ್ಧ ಚಾಟಿ ಬೀಸಿದ್ದಾರೆ.

ಕೊಹ್ಲಿ ನಾಯಕತ್ವದಲ್ಲಿ ಮಿಂಚುತ್ತಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಕೊಹ್ಲಿ ನಾಯಕತ್ವದಲ್ಲಿ ಮಿಂಚುತ್ತಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ಎಡವಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ಆದರೆ ಪ್ರಸಕ್ತ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊಹ್ಲಿ ನಾಯಕತ್ವದಡಿಯಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಟೂರ್ನಿಯ ಲೀಗ್ ಹಂತದಲ್ಲಿ ಎಂ ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡದಷ್ಟೇ ಗೆಲುವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ದಾಖಲಿಸಿದೆ.

Dan Christian ಅವರ ಪತ್ನಿಗೆ ಹಿಂಸೆ ಕೊಡುತ್ತಿರುವ RCB ಅಭಿಮಾನಿಗಳು | Oneindia Kannada
ಕೊಹ್ಲಿ ನಾಯಕತ್ವ ತ್ಯಜಿಸುತ್ತಿರುವುದು ವಿಫಲತೆಯಿಂದಲ್ಲ

ಕೊಹ್ಲಿ ನಾಯಕತ್ವ ತ್ಯಜಿಸುತ್ತಿರುವುದು ವಿಫಲತೆಯಿಂದಲ್ಲ

ಸಾಕಷ್ಟು ವಿಫಲತೆಯಿಂದ ವಿರಾಟ್ ಕೊಹ್ಲಿ ನಾಯಕತ್ವವನ್ನು ತ್ಯಜಿಸುತ್ತಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ. ಆದರೆ ಅಸಲಿಯತ್ತೇನೆಂದರೆ ಭಾರತ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ತಂಡಗಳತ್ತ ಮತ್ತು ತಮ್ಮ ವೈಯಕ್ತಿಕ ಬ್ಯಾಟಿಂಗ್‌ನತ್ತ ಗಮನ ನೀಡುವ ಸಲುವಾಗಿ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಭಾರತ ಟಿ ಟ್ವೆಂಟಿ ಕ್ರಿಕೆಟ್ ತಂಡದ ನಾಯಕತ್ವದಿಂದ ಕೆಳಗಿಳಿಯುತ್ತಿದ್ದಾರಷ್ಟೇ.

Story first published: Tuesday, October 12, 2021, 9:47 [IST]
Other articles published on Oct 12, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X