IND vs AUS: ಸೆಮಿಫೈನಲ್‌ನಲ್ಲಿ ಭಾರತಕ್ಕೆ ಕಂಟಕವಾಗಬಲ್ಲ 3 ಆಸೀಸ್ ಪ್ಲೇಯರ್ಸ್
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಸೆಮಿಫೈನಲ್ ಫೈಟ್‌ಗೆ ನಾಲ್ಕು ತಂಡಗಳು ಸಜ್ಜಾಗಿವೆ. ಈ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ. ಎರಡನೇ ಸೆಮಿಫೈನಲ್ ಪಂದ್ಯ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ವಿಶ್ವ ಕ್ರಿಕೆಟ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಎರಡೂ ತಂಡಗಳು ಬಲಿಷ್ಠವಾಗಿವೆ. ಮಾರ್ಚ್ 4 ರಂದು ದುಬೈನಲ್ಲಿ ನಡೆಯಲಿರುವ ಉಭತ ತಂಡಗಳ ರೋಚಕ ಹಣಾಹಣಿಗೆ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿದ್ದಾರೆ.
ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು ಹಾಟ್ ಫೇವರಿಟ್ ಎನ್ನಲಾಗುತ್ತಿದೆ. ಈ ಪಂದ್ಯದಲ್ಲಿ ಭಾರತ ತಂಡಕ್ಕೆ ಆಸ್ಟ್ರೇಲಿಯಾದ ಮೂವರು ಆಟಗಾರರು ಕಂಟಕವಾಗಬಹುದು. ಈ ಮೂವರು ಆಟಗಾರರು ಯಾರು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

ಟ್ರಾವಿಸ್ ಹೆಡ್ : ಆಸ್ಟ್ರೇಲಿಯಾ ತಂಡದ ಸ್ಟಾರ್ ಆರಂಭಿಕ ಬ್ಯಾಟರ್ ಟ್ರಾವಿಸ್ ಹೆಡ್ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ವಿಶ್ವ ಕ್ರಿಕೆಟ್‌ನ ಸ್ಪೋಟಕ ಬ್ಯಾಟರ್‌ಗಳಲ್ಲಿ ಟ್ರಾವಿಸ್ ಹೆಡ್ ಕೂಡ ಒಬ್ಬರು. ಕಳೆದ ಕೆಲವು ವರ್ಷಗಳಲ್ಲಿ ಟೀಮ್ ಇಂಡಿಯಾಕ್ಕೆ ಟ್ರಾವಿಸ್ ಹೆಡ್ ಸಾಕಷ್ಟು ಕಾಟ ನೀಡಿದ್ದಾರೆ. ಈಗ ಟೀಮ್ ಇಂಡಿಯಾ ವಿರುದ್ಧ ಟ್ರಾವಿಸ್ ಹೆಡ್ ಮತ್ತೊಮ್ಮೆ ಆಡಲು ಸಜ್ಜಾಗಿದ್ದಾರೆ. ಒಮ್ಮೆ ಕ್ರೀಸ್‌ನಲ್ಲಿ ಹೆಡ್ ಕಚ್ಚಿ ನಿಂತರೆ ಟೀಮ್ ಇಂಡಿಯಾದ ಗೆಲುವನ್ನು ಕಸಿದುಕೊಳ್ಳಬಹುದು. ಇಂತಹ ಪರಿಸ್ಥಿತಿಯಲ್ಲಿ ಟೀಮ್ ಇಂಡಿಯಾ ಹೆಡ್ ಅವರನ್ನು ಬೇಗ ಔಟ್ ಮಾಡುವುದು ಒಳ್ಳೆಯದು.
ಸ್ಟೀವ್ ಸ್ಮಿತ್: ಆಸ್ಟ್ರೇಲಿಯಾ ನಾಯಕ ಮತ್ತು ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ವಿಶ್ವ ಕ್ರಿಕೆಟ್‌ನಲ್ಲಿ ಪ್ರಾಬಲ್ಯ ಹೊಂದಿದ್ದಾರೆ. ಸ್ಟೀವ್ ಸ್ಮಿತ್ ಕೆಲವು ಸಮಯದಿಂದ ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದರು. ಆದರೆ ಇತ್ತೀಚೆಗೆ ಅವರು ತಮ್ಮ ಲಯವನ್ನು ಕಂಡುಕೊಂಡಿದ್ದು, ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಭಾರತ ವಿರುದ್ಧದ ಸೆಮಿಫೈನಲ್‌ನಲ್ಲಿ ನಾಯಕನಾಗಿ ಸ್ಟೀವ್ ಸ್ಮಿತ್ ಅದ್ಭುತಗಳನ್ನು ಸೃಷ್ಟಿಸಲು ಸಜ್ಜಾಗಿದ್ದಾರೆ. ಟೀಮ್ ಇಂಡಿಯಾ ವಿರುದ್ಧ ಸ್ಮಿತ್ ಉತ್ತಮ ದಾಖಲೆಯನ್ನು ಹೊಂದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸ್ಮಿತ್ ಭಾರತ ತಂಡಕ್ಕೆ ಸವಾಲಾಗಬಹುದು.
ಆಡಮ್ ಜಂಪಾ: ಆಸ್ಟ್ರೇಲಿಯಾ ತಂಡದ ಪ್ರಮುಖ ಸ್ಪಿನ್ ಅಸ್ತ್ರ ಎಂದರೆ ಆಡಮ್ ಜಂಪಾ. ತಮ್ಮ ಸ್ಪಿನ್ ಬೌಲಿಂಗ್ ಮೂಲಕ ಘಟಾನುಘಟಿ ಬ್ಯಾಟರ್‌ಗಳನ್ನು ಖೆಡ್ಡಕ್ಕೆ ಬೀಳಿಸಿದ್ದಾರೆ. ಈಗ ಸೆಮಿಫೈನಲ್‌ನಲ್ಲಿ ಭಾರತ ತಂಡಕ್ಕೆ ಆಡಮ್ ಜಂಪಾ ತಮ್ಮ ಸ್ಪಿನ್ ಬೌಲಿಂಗ್ ಮೂಲಕ ಕಂಟಕವಾಗಬಹುದು. ಭಾರತ ವಿರುದ್ದ ಜಂಪಾ ಕೂಡ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ವಿರಾಟ್ ಕೊಹ್ಲಿ ಅವರನ್ನು ಜಂಪಾ ಕಟ್ಟಿ ಹಾಕುವ ನಿರೀಕ್ಷೆಯಿದೆ. ಜಂಪಾ ಎದುರು ಟೀಮ್ ಇಂಡಿಯಾ ಬ್ಯಾಟರ್‌ಗಳು ಎಚ್ಚರಿಕೆ ಆಟ ಆಡಬೇಕಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications