Champions Trophy 2025: ಮೂರು ಆಟಗಾರರು ಟೀಮ್ ಇಂಡಿಯಾ ಪರ ಪದಾರ್ಪಣೆ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್ ಗವಾಸ್ಕರ್ ಸರಣಿ ಮುಗಿದಿದೆ. ಇಗ ಸದ್ಯ ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ವಿಶ್ರಾಂತಿ ಮೂಡನಲ್ಲಿದ್ದಾರೆ. ಯುವ ಆಟಗಾರರು ವಿಜಯ್ ಹಜಾರೆ ಟ್ರೋಫಿ ಆಡಲು ಸಜ್ಜಾಗುತ್ತಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗುವ ಚಾಂಪಿಯನ್ಸ್ ಟ್ರೋಫಿಯ ಮೇಲೆ ಭಾರತ ಚಿತ್ತ ನೆಟ್ಟಿದೆ. ಈ ವೇಳೆ ಬಲಿಷ್ಠ ತಂಡವನ್ನು ಕಟ್ಟಲು ಟೀಮ್ ಇಂಡಿಯಾ ಪ್ಲ್ಯಾನ್ ಮಾಡಿಕೊಂಡಿದೆ. ಈ ಬಾರಿ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಯುವ ಆಟಗಾರರು ಸಹ ಕಾಣಿಸಿಕೊಳ್ಳಲಿದ್ದಾರೆ. ಪಾಕ್ ಆಯೋಜಿಸುತ್ತಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಮುವರು ಆಟಗಾರರು ಪದಾರ್ಪಣೆ ಮಾಡಲಿದ್ದಾರೆ.
ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ಈಗಾಗಲೇ ಸತತ ಸರಣಿಗಳಿಂದ ಕಂಗೆಟ್ಟಿದ್ದಾರೆ. ಈಗ ವಿಶ್ರಾಂತಿಯ ಬಳಿಕ ಮತ್ತೊಂದು ಮಹಾ ಸವಾಲು ಎದುರಾಗಲಿದೆ. ಈ ಸವಾಲಿನ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ಇನ್ನು ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಗೂ ಮೊದಲು ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯನ್ನು ಆಡಲಿದೆ. ಈ ವೇಳೆ ಚಾಂಪಿಯನ್ಸ್ ಟ್ರೋಫಿಗೆ ಇಳಿಸುವ ತಂಡವನ್ನೇ ಕಣಕ್ಕೆ ಇಳಿಸುವ ಸಾಧ್ಯತೆ ಇದೆ. ಈ ಬಾರಿ ಚಾಂಪಿಯನ್ಸ್ ಟ್ರೋಫಿಯನ್ನು ಹಲವು ಆಟಗಾರರು ಮೊದಲ ಬಾರಿಗೆ ಆಡಲಿದ್ದಾರೆ. ಆ ಆಟಗಾರರ ಬಗ್ಗೆ ವರದಿ ಇಲ್ಲಿದೆ. ಈ ಮೂವರು ಆಟಗಾರರು ಒಂದು ಬಾರಿಯೂ ಏಕದಿನ ವಿಶ್ವಕಪ್‌ನ್ನು ಸಹ ಆಡಿಲ್ಲ.

ಯಶಸ್ವಿ ಜೈಸ್ವಾಲ್
ಈಗಾಗಲೇ ಟೀಮ್ ಇಂಡಿಯಾದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅಮೋಘ ಬ್ಯಾಟಿಂಗ್ ಮೂಲಕ ಸದ್ದು ಮಾಡಿರುವ ಆಟಗಾರ ಯಶಸ್ವಿ ಜೈಸ್ವಾಲ್. ಕಳೆದ ಕ್ಯಾಲೆಂಡರ್ ವರ್ಷದಲ್ಲಿ ಹಲವು ದಾಖಲೆಗಳನ್ನು ಬರೆದಿದ್ದ ಯುವ ಪ್ಲೇಯರ್ ಏಕದಿನ ತಂಡವನ್ನು ಸೇರುವ ಕನಸು ಕಾಣುತ್ತಿದ್ದಾರೆ. ಇವರು ಈ ವರೆಗೆ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆಯನ್ನು ಮಾಡಿಲ್ಲ. ಇವರು ಟೆಸ್ಟ್‌ನಲ್ಲಿ ಆಡಿದ 19 ಪಂದ್ಯಗಳಲ್ಲಿ 1798 ರನ್‌ಗಳಿಸಿದ್ದು, ಇದರಲ್ಲಿ 4 ಶತಕ 10 ಅರ್ಧಶತಕ ಸೇರಿವೆ. ಅಲ್ಲದೆ ಟಿ20 ಕ್ರಿಕೆಟ್‌ನಲ್ಲಿ 23 ಪಂದ್ಯಗಳನ್ನು ಆಡಿದ್ದು 723 ರನ್ ಸಿಡಿಸಿದ್ದು, ಇದರಲ್ಲಿ 1 ಶತಕ, 5 ಅರ್ಧಶತಕಗಳು ಸೇರಿವೆ.
ಅರ್ಷದೀಪ್ ಸಿಂಗ್
ಭಾರತದ ಪರ ಟಿ 20 ಕ್ರಿಕೆಟ್‌ನಲ್ಲಿ ಸೊಗಸಾದ ಪ್ರದರ್ಶನ ನೀಡಿರುವ ಆಟಗಾರ ಅರ್ಷದೀಪ್ ಸಿಂಗ್. ಇವರು ಸಹ ಏಕದಿನ ಕ್ರಿಕೆಟ್‌ಗೆ ಕಂ ಬ್ಯಾಕ್ ಮಾಡುವ ಸೂಚನೆಯಲ್ಲಿದ್ದಾರೆ. ಇವರು ಸಹ ಒಮ್ಮೆಯೂ ಐಸಿಸಿ ಏಕದಿನ ವಿಶ್ವಕಪ್ ಆಡಿಲ್ಲ. ಅಲ್ಲದೆ ಚಾಂಪಿಯನ್ಸ್ ಟ್ರೋಫಿಯನ್ನು ಸಹ ಆಡಿಲ್ಲ. ಹೀಗಾಗಿ ಇವರು ಚಾಂಪಿಯನ್ಸ್ ಟ್ರೋಫಿಯಲ್ಲಿ ಚೊಚ್ಚಲ ಪಂದ್ಯವನ್ನು ಮಾಡುವ ಅವಕಾಶವನ್ನು ಪಡೆಯಬಲ್ಲದೆ.

ರಿಷಭ್ ಪಂತ್
ಕಾರು ಅಪಘಾತದ ನಂತರ, ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಸುಮಾರು ಒಂದೂವರೆ ವರ್ಷಗಳ ಕಾಲ ಕ್ರಿಕೆಟ್ ಮೈದಾನದಿಂದ ದೂರವಿದ್ದರು. ಇವರು ಏಕದಿನ ವಿಶ್ವಕಪ್ 2023 ಅನ್ನು ಸಹ ಆಡಲು ಸಾಧ್ಯವಾಗಲಿಲ್ಲ. ಆದರೆ ಪಂತ್ ಐಪಿಎಲ್ 2024 ರಲ್ಲಿ ಕ್ರಿಕೆಟ್ ಮೈದಾನದಲ್ಲಿ ಅಮೋಘ ಪ್ರದರ್ಶನ ನೀಡಿ ಗಮನ ಸೆಳೆದರು. ಪಂತ್ ಟೀಂ ಇಂಡಿಯಾ ಪರ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದಾರೆ. ಹೀಗಾಗಿ ಇವರು ಸಹ ಚಾಂಪಿಯನ್ಸ್ ಟ್ರೋಫಿಗೆ ಪದಾರ್ಪಣೆ ಮಾಡಬಹುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications