ಐಪಿಎಲ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಮೂವರ ಬಂಧನ

ಜೈಪುರ: ಸೆಪ್ಟೆಂಬರ್ 19ರಿಂದಲೇ ಇಂಡಿಯನ್ ಪ್ರೀಮಿಯರ್ ಲೀಗ್ ಹಬ್ಬ ಶುರುವಾಗಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಟೂರ್ನಿ ನಡೆಯುತ್ತಿದೆ. ಐಪಿಎಲ್ 13ನೇ ಆವೃತ್ತಿಗೆ ಸಂಬಂಧಿಸಿ ಬೆಟ್ಟಿಂಗ್ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಪಿಟಿಐ ವರದಿಯ ಪ್ರಕಾರ, ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯಗಳ ಮೇಲೆ ಜೈಪುರ್‌ನಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 8 ಲಕ್ಷ ರೂ. ಮತ್ತು 15 ಕೆಜಿ ಬೆಳ್ಳಿಯ ಬಿಸ್ಕತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದರಿಂದ ಪೊಲೀಸ್ ದಾಳಿ ನಡೆಸಲಾಗಿದೆ. ಶ್ಯಾಮ್ ನಗರ್ ನಲ್ಲಿ ಸೋಮವಾರ ನಡೆಸಲಾದ ದಾಳಿಯ ವೇಳೆ ಆರೋಪಿಗಳು ಬೆಟ್ಟಿಂಗ್ ನಡೆಸುತ್ತಿದ್ದುದು ಕಂಡುಬಂದಿತ್ತು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಅಜಯ್ ಪಾಲ್ ಲಂಬ ತಿಳಿಸಿದ್ದಾರೆ.
ಬಂಧಿತರನ್ನು ಮಹೇಂದ್ರ ಕುಮಾರ್, ಸಿದ್ಧಾರ್ಥ್ ಅಗರ್ವಾಲ್ ಮತ್ತು ಆಶಿಷ್ ಅಗರ್ವಾಲ್ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ಬೆಟ್ಟಿಂಗ್‌ನಲ್ಲಿ ಪಾಲ್ಗೊಂಡ ಇತರರಿಗೂ ಹುಡುಕಾಡಲಾಗುತ್ತಿದೆ ಎಂದು ಅಜಯ್‌ಪಾಲ್ ಮಾಹಿತಿ ನೀಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications