Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs ZIM: ಟೀಮ್ ಇಂಡಿಯಾ ಸೇರಿಕೊಂಡ ಮೂವರು ಟಿ20 ವಿಶ್ವಕಪ್‌ ವಿಜೇತರು; ಪ್ಲೇಯಿಂಗ್‌-11 ಬದಲಾವಣೆ ಮಾಡ್ತಾರಾ ಶುಭಮನ್‌ ಗಿಲ್‌?

ಜುಲೈ 9 ಮಂಗಳವಾರ, 5 ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯ ಭಾರತ ಮತ್ತು ಜಿಂಬಾಬ್ವೆ ನಡುವೆ ಜುಲೈ 10 ರಂದು (ಬುಧವಾರ) ನಡೆಯಲಿದೆ. ಈ ಪಂದ್ಯ ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಭಾರತೀಯ ಕಾಲಮಾನ ಸಂಜೆ 4.30ಕ್ಕೆ ಆರಂಭವಾಗಲಿದೆ.

ಈ ಪಂದ್ಯಕ್ಕೂ ಮುನ್ನ ಟೀಮ್‌ ಇಂಡಿಯಾದಲ್ಲಿ ಆರಂಭಿಕ ಸ್ಥಾನಕ್ಕಾಗಿ ಕಠಿಣ ಹೋರಾಟ ನಡೆಯಲಿದ್ದು, ಎಡಗೈ ಬಿರುಸಿನ ಬ್ಯಾಟರ್‌ ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್‌ ಮತ್ತು ಶಿವಂ ದುಬೆ ಅವರು ತಂಡಕ್ಕೆ ಮರಳಿದ್ದಾರೆ.

Three T20 World Cup winners joins the India squad for T20 series against Zimbabwe

ಯಶಸ್ವಿ 2024ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದೊಂದಿಗೆ ಉಪಸ್ಥಿತರಿದ್ದರು. ಎರಡನೇ ಟಿ20ಯಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿದ ಅಭಿಷೇಕ್ ಶರ್ಮಾ ಅವರ ಆರಂಭಿಕ ಸ್ಥಾನಕ್ಕೆ ಜೈಸ್ವಾಲ್‌ ನೇರ ಪೈಪೋಟಿ ನಡೆಸಲಿದ್ದಾರೆ.

ಜೈಸ್ವಾಲ್ vs ಅಭಿಷೇಕ್

ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕಾಗಿ ಅಭಿಷೇಕ್ ಶರ್ಮಾ ಚೊಚ್ಚಲ ಪಾದರ್ಪಣೆ ಪಂದ್ಯವಾಡಿದರು. ಈ ಪಂದ್ಯದಲ್ಲಿ ಅವರು ಶೂನ್ಯಕ್ಕೆ ಪೆವಿಲಿಯನ್‌ಗೆ ಮರಳಿದರು. ಇದಾದ ಬಳಿಕ ಎರಡನೇ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಷೇಕ್‌ ಅವರು 47 ಎಸೆತಗಳಲ್ಲಿ 7 ಬೌಂಡರಿ ಹಾಗೂ 8 ಸಿಕ್ಸರ್ ನೆರವಿನಿಂದ 100 ರನ್ ಗಳಿಸಿದರು.

ಜೈಸ್ವಾಲ್ ಅವರು 17 ಟಿ20 ಪಂದ್ಯಗಳ 16 ಇನ್ನಿಂಗ್ಸ್‌ಗಳಲ್ಲಿ 1 ಶತಕ ಮತ್ತು 4 ಅರ್ಧಶತಕಗಳೊಂದಿಗೆ 502 ರನ್ ಗಳಿಸಿದ್ದಾರೆ. ಇದೀಗ ಅಭಿಷೇಕ್ ಶರ್ಮಾ ಬದಲಿಗೆ ಟೀಮ್‌ ಇಂಡಿಯಾ ಇನ್ನಿಂಗ್ಸ್ ತೆರೆಯಲು ಜೈಸ್ವಾಲ್‌ ಪ್ರಬಲ ಸ್ಪರ್ಧಿಯಾಗಿದ್ದಾರೆ.

ಯಶಸ್ವಿ ಜೈಸ್ವಾಲ್ ಅವರು ನಾಯಕ ಶುಭಮನ್ ಗಿಲ್ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದರೆ, ಅಭಿಷೇಕ್ ಶರ್ಮಾ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಹುದು. ಸನ್‌ರೈಸರ್ಸ್ ಹೈದರಾಬಾದ್‌ಗಾಗಿ ಐಪಿಎಲ್‌ನಲ್ಲಿ ಹಲವಾರು ಸಂದರ್ಭಗಳಲ್ಲಿ ಅಭಿಷೇಕ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದಾರೆ.

ಇದರೊಂದಿಗೆ ಅವರು ಪಂಜಾಬ್ ಪರ ದೇಶೀಯ ಕ್ರಿಕೆಟ್‌ನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಯಶಸ್ವಿ ಓಪನ್ ಮಾಡಿದರೆ, ಅಭಿಷೇಕ್ 3ನೇ ಸ್ಥಾನದಲ್ಲಿ ಮತ್ತು ಋತುರಾಜ್ ಗಾಯಕ್ವಾಡ್ 4ನೇ ಸ್ಥಾನಕ್ಕೆ ಹೋಗಬಹುದು.

ಇಂತಹ ಪರಿಸ್ಥಿತಿಯಲ್ಲಿ ಮೂರನೇ ಟಿ20 ಪಂದ್ಯಕ್ಕೆ ಟೀಮ್‌ ಇಂಡಿಯಾದ ಪ್ಲೇಯಿಂಗ್-11 ರಲ್ಲಿ ಬದಲಾವಣೆಗಳಾಗಬಹುದು . ವಿಕೆಟ್ ಕೀಪರ್ ಮತ್ತು ಬ್ಯಾಟರ್‌ ಧ್ರುವ ಜುರೆಲ್ ಬದಲಿಗೆ ಅನುಭವಿ ಸಂಜು ಸ್ಯಾಮ್ಸನ್ ಅವರಿಗೆ ಅವಕಾಶ ನೀಡಬಹುದು.

ಮತ್ತೊಂದೆಡೆ ವಾಷಿಂಗ್ಟನ್ ಸುಂದರ್ ಬದಲಿಗೆ ಶಿವಂ ದುಬೆ ಆಡಬಹುದು. ಏಕೆಂದರೆ ಅಭಿಷೇಕ್ ಶರ್ಮಾ ಮತ್ತು ರಿಯಾನ್ ಪರಾಗ್ ಬ್ಯಾಟಿಂಗ್‌ನೊಂದಿಗೆ ಬೌಲಿಂಗ್ ಕೂಡ ಮಾಡಲಿದ್ದಾರೆ.

ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್‌-11 : ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಅಭಿಷೇಕ್ ಶರ್ಮಾ, ಋತುರಾಜ್ ಗಾಯಕ್ವಾಡ್, ರಿಯಾನ್ ಪರಾಗ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವಿ ಬಿಷ್ಣೋಯ್, ಅವೇಶ್ ಖಾನ್, ಮುಖೇಶ್ ಕುಮಾರ್.

Story first published: Tuesday, July 9, 2024, 20:18 [IST]
Other articles published on Jul 9, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+