IPL 2025: ಪಂದ್ಯದ ಗತಿಯನ್ನೇ ಬದಲಿಸಬಲ್ಲ 3 ವಿಕೆಟ್ ಕೀಪರ್‌ಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್!
ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಮೆಗಾ ಹರಾಜಿನಲ್ಲಿ ವಿಕೆಟ್‌ಕೀಪರ್-ಬ್ಯಾಟರ್‌ಗಳಿಗೆ ಭಾರೀ ಬೇಡಿಕೆಯಿದೆ. ಅದಕ್ಕಾಗಿ ಐಪಿಎಲ್ ಎಲ್ಲಾ ಹತ್ತು ಫ್ರಾಂಚೈಸಿ ತಂಡಗಳು 3 ಸ್ಟಾರ್ ವಿಕೆಟ್‌ಕೀಪರ್‌ಗಳ ಮೇಲೆ ಕಣ್ಣಿಟ್ಟಿವೆ. ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜೆಡ್ಡಾ ನಗರದಲ್ಲಿ ನಡೆಯಲಿರುವ ಐಪಿಎಲ್ 2025ರ ಮೆಗಾ ಹರಾಜು ಅಖಾಡದಲ್ಲಿ ಈ 3 ವಿಕೆಟ್‌ಕೀಪರ್‌ಗಳ ಭವಿಷ್ಯ ನಿರ್ಧಾರವಾಗಲಿದೆ.
ಐಪಿಎಲ್ ಮೆಗಾ ಹರಾಜಿನಲ್ಲಿ ಈ 3 ವಿಕೆಟ್‌ಕೀಪರ್‌ಗಳ ಬಿಡ್ 10 ಕೋಟಿ ರೂ. ದಾಟಬಹುದು. ಏಕೆಂದರೆ ಈ 3 ಆಟಗಾರರು ವಿಕೆಟ್‌ಕೀಪಿಂಗ್ ಮಾತ್ರವಲ್ಲದೆ ತಮ್ಮ ಬಿರುಸಿನ ಬ್ಯಾಟಿಂಗ್ ಮೂಲಕ ಪಂದ್ಯದ ಗತಿಯನ್ನೇ ಬದಲಿಸಬಲ್ಲರು. ಹೀಗಾಗಿ 3 ವಿಕೆಟ್ ಕೀಪರ್-ಬ್ಯಾಟರ್‌ಗಳು ಭಾರೀ ಮೊತ್ತಕ್ಕೆ ಬಿಡ್ ಆಗುವ ಸಾಧ್ಯತೆಯಿದೆ.

ಕ್ವಿಂಟನ್ ಡಿ ಕಾಕ್
ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ ಟಿ20 ಕ್ರಿಕೆಟ್‌ನ ಅತ್ಯಂತ ಅಪಾಯಕಾರಿ ಬ್ಯಾಟರ್‌ಗಳಲ್ಲಿ ಒಬ್ಬರು. ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಕ್ವಿಂಟನ್ ಡಿ ಕಾಕ್ ಬಿಡ್ ಮಾಡಲು ಫ್ರಾಂಚೈಸಿಗಳು ಯೋಜನೆ ರೂಪಿಸಿವೆ. ಕ್ವಿಂಟನ್ ಡಿ ಕಾಕ್ ಸ್ಫೋಟಕ ಆರಂಭಿಕ ಬ್ಯಾಟರ್ ಮಾತ್ರವಲ್ಲದೆ, ಬುದ್ಧಿವಂತ ವಿಕೆಟ್ ಕೀಪರ್ ಕೂಡ ಹೌದು. ಲಕ್ನೋ ಸೂಪರ್ ಜೈಂಟ್ಸ್ ಮುಂದಿನ ಐಪಿಎಲ್ 2025ರ ಟೂರ್ನಿಗೂ ಮುನ್ನ ಕ್ವಿಂಟನ್ ಡಿ ಕಾಕ್ ಅವರನ್ನು ಬಿಡುಗಡೆ ಮಾಡಿದೆ. ಇದೀಗ ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಕ್ವಿಂಟನ್ ಡಿ ಕಾಕ್ ಭಾರೀ ಮೊತ್ತಕ್ಕೆ ಬಿಡ್ ಆಗುವ ನಿರೀಕ್ಷೆಯಿದೆ.
ಇಶಾನ್ ಕಿಶನ್
ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಇಶಾನ್ ಕಿಶನ್ ಮೇಲೆ ಫ್ರಾಂಚೈಸಿಗಳು ಕಣ್ಣಿಟ್ಟಿವೆ. ಕಳೆದ ಬಾರಿ 2022ರಲ್ಲಿ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಇಶಾನ್ ಕಿಶನ್ ಅವರನ್ನು 15.25 ಕೋಟಿ ರೂಪಾಯಿಗೆ ಖರೀದಿಸಿತ್ತು. ಕಿಶನ್ ಕೂಡ ಇನ್ನಿಂಗ್ಸ್ ಆರಂಭಿಸುವುದರ ಜೊತೆಗೆ ವಿಕೆಟ್‌ಕೀಪಿಂಗ್‌ನಲ್ಲಿ ಪರಿಣಿತರಾಗಿದ್ದಾರೆ. ಆದರೆ, ಮುಂಬೈ ಇಂಡಿಯನ್ಸ್ ಮುಂದಿನ ಐಪಿಎಲ್ ಆವೃತ್ತಿಗೆ ಅವರನ್ನು ಉಳಿಸಿಕೊಂಡಿಲ್ಲ. ಕಿಶನ್ ಬಿಡ್ ಮಾಡಲು ಫ್ರಾಂಚೈಸಿಗಳು ಪೈಪೋಟಿ ನಡೆಸಲಿವೆ.
ಜೋಸ್ ಬಟ್ಲರ್
ಇಂಗ್ಲೆಂಡ್ ವೈಟ್ ಬಾಲ್ ತಂಡದ ನಾಯಕ ಜೋಸ್ ಬಟ್ಲರ್ ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ಪ್ರಮುಖ ಆಟಗಾರನಾಗಿದ್ದಾರೆ. ಜೋಸ್ ಬಟ್ಲರ್ ಅವರನ್ನು ಬಿಡ್ ಮಾಡಲು ಫ್ರಾಂಚೈಸಿಗಳು ಈಗಾಗಲೇ ತಂತ್ರ ರೆಡಿ ಮಾಡಿಕೊಂಡಿವೆ. ಟಿ20 ಕ್ರಿಕೆಟ್‌ಗೆ ಜೋಸ್ ಬಟ್ಲರ್ ಹೇಳಿ ಮಾಡಿಸಿದ ಬ್ಯಾಟರ್ ಆಗಿದ್ದಾರೆ. ಐಪಿಎಲ್ 2025ರ ಆವೃತ್ತಿ ಮೊದಲು ರಾಜಸ್ಥಾನ ರಾಯಲ್ಸ್ ಜೋಸ್ ಬಟ್ಲರ್ ಅವರನ್ನು ಬಿಡುಗಡೆ ಮಾಡಿದೆ. ಇದೀಗ ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಜೋಸ್ ಬಟ್ಲರ್ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಜೋಸ್ ಬಟ್ಲರ್ ಆರಂಭಿಕ ಮತ್ತು ಮಧ್ಯಮ ಕ್ರಮಾಂಕದ ಎರಡೂ ಸ್ಥಾನಗಳಲ್ಲಿ ಬ್ಯಾಟಿಂಗ್ ಮಾಡಬಲ್ಲರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications