For Quick Alerts
ALLOW NOTIFICATIONS  
For Daily Alerts
 

ಭಾರತ vs ಐರ್ಲೆಂಡ್: ಮೊದಲ ಎರಡು ಟಿ20 ಪಂದ್ಯಗಳ ಟಿಕೆಟ್ ಕ್ಷಣಾರ್ಧದಲ್ಲಿ ಖಾಲಿ: ಕ್ರಿಕೆಟ್ ಐರ್ಲೆಂಡ್ ಮಾಹಿತಿ

ಭಾರತ ಹಾಗೂ ಐರ್ಲೆಂಡ್ ತಂಡಗಳು ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಮುಖಾಮುಖಿಯಾಗುತ್ತಿದೆ. ಆಗಸ್ಟ್ 18ರಂದು ಮೊದಲ ಪಂದ್ಯ ನಡೆಯುವ ಮೂಲಕ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದ್ದು ಆಗಸ್ಟ್ 23ರಂದು ಸರಣಿಯ ಕೊನೆಯ ಪಂದ್ಯ ನಡೆಯಲಿದೆ. ಈ ಸರಣಿಯ ಮೊದಲ ಎರಡು ಪಂದ್ಯಗಳ ಟಿಕೆಟ್ ಇಂದು ಆಗಸ್ಟ್ 17ರಂದು ಮಾರಾಟ ಮಾಡಲಾಗಿದ್ದು ಕ್ಷಣಾರ್ಧದಲ್ಲಿ ಈ ಎರಡು ಪಂದ್ಯಗಳ ಟಿಕೆಟ್ ಕೂಡ ಮಾರಾಟವಾಗಿದೆ ಎಂದು ಕ್ರಿಕೆಟ್ ಐರ್ಲೆಂಡ್ ಮಾಹಿತಿ ನೀಡಿದೆ.

ಸರಣಿಯ ಮೂರು ಪಂದ್ಯಗಳು ಕೂಡ ಡಬ್ಲಿನ್‌ನ ಮಾಲೆಹೈಡ್‌ ಕ್ರಿಕೆಟ್ ಮೈದಾನದಲ್ಲಿ ಆಯೋಜನೆಯಾಗಲಿದೆ. ಟಕೆಟ್ ಮಾರಾಟದ ಬಗ್ಗೆ ಐರ್ಲೆಂಡ್ ಕ್ರಿಕೆಟ್ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿದೆ. "ಭಾರತ ಹಾಗೂ ಐರ್ಲೆಂಡ್ ತಂಡಗಳ ನಡುವಿನ ಟಿ20 ಸರಣಿಯ ಮೊದಲ ಎರಡು ಪಂದ್ಯಗಳ ಟಿಕೆಟ್ ಸಂಪೂರ್ಣವಾಗಿ ಮಾರಾಟವಾಗಿದೆ. ಮೂರನೇ ಪಂದ್ಯದ ಟಿಕೆಟ್‌ಗಳು ಕೂಡ ವೇಗವಾಗಿ ಮಾರಾಟಗೊಳ್ಳುತ್ತಿದೆ" ಎಂದು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

Tickets for the first two T20Is between Ireland and India were quickly sold out: Cricket Ireland

ಗಮನಾರ್ಹ ಅಂಶವೆಂದರೆ ಭಾರತ ಸತತ ಎರಡನೇ ವರ್ಷ ಐರ್ಲೆಂಡ್‌ಗೆ ಪ್ರವಾಸಕೈಗೊಳ್ಳುತ್ತಿದ್ದು ಟಿ20 ಸರಣಿಯಲ್ಲಿ ಭಾಗಿಯಾಗುತ್ತಿದೆ. 2022ರಲ್ಲಿ ನಡೆದ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕತ್ವವನ್ನು ಹಾರ್ದಿಕ್ ಪಾಂಡ್ಯ ವಹಿಸಿಕೊಂಡಿದ್ದರು. ಎರಡು ಪಂದ್ಯದ ಆ ಸರಣಿಯಲ್ಲಿ ಭಾರತ 2-0 ಅಂತರದಿಂದ ಗೆಲುವು ಸಾಧಿಸಿತ್ತು.

ಇನ್ನು ಮತ್ತೊಂದು ಪ್ರಮುಖ ಅಂಶವೆಂದರೆ ಈ ಬಾರಿಯ ಪ್ರವಾಸದಲ್ಲಿಯೂ ಭಾರತ ಮೊದಲ ಆಯ್ಕೆಯ ಆಟಗಾರರನ್ನು ಹೊರತುಪಡಿಸಿ ಕಣಕ್ಕಿಳಿಯುತ್ತಿದೆ. ಆದರೆ ಜಸ್ಪ್ರೀತ್ ಬೂಮ್ರಾ ಈ ಸರಣಿಯ ಮೂಲಕ ಕಮ್‌ಬ್ಯಾಕ್ ಮಾಡುತ್ತಿದ್ದು ಕುತೂಹಲ ಮೂಡಿಸಿದೆ. ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ಗಾಯಗೊಂಡು ತಂಡದಿಂದ ಹೊರಬಿದ್ದ ಬಳಿಕ ಇದೇ ಮೊದಲ ಬಾರಿಗೆ ಬೂಮ್ರಾ ಟೀಮ್ ಇಂಡಿಯಾ ಪರವಾಗಿ ಕಣಕ್ಕಿಳಿಯುತ್ತಿದ್ದಾರೆ.

ಈ ಮಧ್ಯೆ ಡಬ್ಲಿನ್‌ನಲ್ಲಿ ಐರ್ಲೆಂಡ್ ವಿರುದ್ಧದ ಟಿ20 ಸರಣಿಗಾಗಿ ಅಭ್ಯಾಸ ನಡೆಸುತ್ತಿದ್ದಾಗ ಬೂಮ್ರಾ ತೀಕ್ಷ್ಣವಾದ ಯಾರ್ಕರ್ ಹಾಗೂ ಬೌನ್ಸರ್‌ಗಳ ಮೂಲಕ ಭಾರತೀಯ ಬ್ಯಾಟರ್‌ಗಳನ್ನು ನೆಟ್ಸ್‌ನಲ್ಲಿ ಹಿಮ್ಮೆಟ್ಟಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ಹೀಗಾಗಿ ಸುದೀರ್ಘ ಕಾಲದ ಬಳಿಕ ಕಮ್‌ಬ್ಯಾಕ್ ಮಾಡುತ್ತಿದ್ದರೂ ಬೂಮ್ರಾ ಉತ್ತಮ ಲಯದಲ್ಲಿರುವುದು ಗೋಚರಿಸುತ್ತಿದೆ.

ಇನ್ನು ಈ ಸರಣಿಯ ಮೂರು ಪಂದ್ಯಗಳಲ್ಲಿ 12 ಓವರ್‌ಗಳ ಸಂಪೂರ್ಣ ಪ್ರಮಾಣದ ಬೌಲಿಂಗ್ ನಡೆಸಿ ಏಷ್ಯಾ ಕಪ್ ಹಾಗೂ ವಿಶ್ವಕಪ್‌ಗೆ ಮುನ್ನ ತಮ್ಮ ಫಿಟ್‌ನೆಸ್ ಕೂಡ ಬಹಿರಂಗಪಡಿಸುವ ಜವಾಬ್ಧಾರಿಯಿದೆ. ಪ್ರಸ್ತುತ ಬೂಮ್ರಾ ಅಂತಾರಾಷ್ಟ್ರೀಯ ಪಂದ್ಯವನ್ನಾಡಲು ಸಂಪೂರ್ಣವಾಗಿ ಫಿಟ್ ಆಗಿದ್ದಾರೆ ಎನ್ನುವುದನ್ನು ಈ ಮೂಲಕ ಖಚಿತಪಡಿಸಲಿದ್ದಾರೆ.

ಏಷ್ಯನ್ ಗೇಮ್ಸ್ 2023 ತಂಡದ ಭಾಗವಾಗಿರುವ ಋತುರಾಜ್ ಗಾಯಕ್ವಾಡ್, ಜಿತೇಶ್ ಶರ್ಮಾ ಮತ್ತು ರಿಂಕು ಸಿಂಗ್ ಅವರಂತ ಯುವ ಆಟಗಾರರಿಗೆ ಐರ್ಲೆಂಡ್ ಸರಣಿ ಉತ್ತಮ ತಾಲೀಮು ಎಂಬುದನ್ನು ಗಮನಿಸಬೇಕಿದೆ. ಈ ಆಟಗಾರರು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಮಿಂಚಲು ಅದ್ಭುತ ಅವಕಾಶ ಇದಾಗಿದೆ.

ಇನ್ನು ಟೀಮ್ ಇಂಡಿಯಾ ಐರ್ಲೆಂಡ್ ವಿರುದ್ಧ ಟಿ20 ಮಾದರಿಯಲ್ಲಿ ಪರಿಪೂರ್ಣ ದಾಖಲೆಯನ್ನು ಹೊಂದಿದ್ದು ಈವರೆಗೆ ಆಡಿರುವ ಎಲ್ಲಾ ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಐರ್ಲೆಂಡ್ ವಿರುದ್ಧ ಭಾರತ ಟಿ20 ಮಾದರಿಯಲ್ಲಿ 5-0ಅಂತರದ ನಿಚ್ಚಳ ಮೇಲುಗೈ ಸಾಧಿಸಿದೆ. ಇಂಗ್ಲೆಂಡ್‌ನ ನಾಟಿಂಗ್‌ಹ್ಯಾಮ್‌ನಲ್ಲಿ 2009ರ ಟಿ20 ವಿಶ್ವಕಪ್ ಪಂದ್ಯದಲ್ಲಿ ಎಂಎಸ್ ಧೋನಿ ನೇತೃತ್ವದಲ್ಲಿ ಭಾರತ ಐರ್ಲೆಂಡ್ ತಂಡವನ್ನು ಮೊಟ್ಟ ಮೊದಲ ಬಾರಿಗೆ ಎದುರಿಸಿತ್ತು. ಮೊದಲ ಪಂದ್ಯದಲ್ಲಿ 8 ವಿಕೆಟ್‌ಗಳ ಗೆಲುವು ಸಾಧಿಸಿತ್ತು. 2018 ರಲ್ಲಿ ಡಬ್ಲಿನ್‌ನಲ್ಲಿ ನಡೆದ ಸರಣಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಭಾರತ 2-0 ಅಂತರದಿಂದ ವೈಟ್‌ವಾಶ್ ಮಾಡಿತ್ತು.

ಐರ್ಲೆಂಡ್ ತಂಡ: ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ಮಾರ್ಕ್ ಅಡೇರ್, ರಾಸ್ ಅಡೇರ್, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಫಿಯಾನ್ ಹ್ಯಾಂಡ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್, ಥಿಯೋ ವ್ಯಾನ್ ವೋರ್ಕಾಮ್, ಬೆನ್ ವೈಟ್, ಕ್ರೇಗ್ ಯಂಗ್

ಭಾರತ ತಂಡ: ಜಸ್ಪ್ರೀತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್.

Story first published: Thursday, August 17, 2023, 15:21 [IST]
Other articles published on Aug 17, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+