ICC Ranking: ತಿಲಕ್ ವರ್ಮಾ ಜೀವನ ಶ್ರೇಷ್ಠ ಸಾಧನೆ, ಭಾರೀ ಜಿಗಿತ ಕಂಡ ವರುಣ್
ಮಂಗಳವಾರ ರಾಜ್‌ಕೋಟ್‌ನಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಅಲ್ಲದೆ ಮೂರನೇ ಪಂದ್ಯವನ್ನು ಕೈ ಚೆಲ್ಲಿದೆ. ಈ ಮೂಲಕ ಇಂಗ್ಲೆಂಡ್ ಸರಣಿಯಲ್ಲಿ ಭರ್ಜರಿ ಕಂ ಬ್ಯಾಕ್ ಮಾಡಿದೆ. ಟೀಮ್ ಇಂಡಿಯಾದ ಸ್ಟಾರ್ ಪ್ಲೇಯರ್‌ಗಳ ಬ್ಯಾಟಿಂಗ್ ವೈಫಲ್ಯದಿಂದ ಟೀಮ್ ಇಂಡಿಯಾ ಮುಖಭಂಗ ಅನುಭವಿಸಿದೆ. ಆದರೆ ಟೀಮ್ ಇಂಡಿಯಾದ ಮಿಡ್ಲ್ ಆರ್ಡರ್ ಬ್ಯಾಟರ್ ತಿಲಕ್ ವರ್ಮಾ ಮುಖದಲ್ಲಿ ಬುಧವಾರ ಮಂದಹಾಸ ಮೂಡಿದೆ.
ಬುಧವಾರ ಐಸಿಸಿ ಶ್ರೇಯಾಂಕ ಬಿಡುಗಡೆ ಆಗಿದೆ. ನೂತನ ಶ್ರೇಯಾಂಕದಲ್ಲಿ ತಿಲಕ್ ವರ್ಮಾ ಅಮೋಘ ಸಾಧನೆ ಮಾಡಿದ್ದಾರೆ. ಚೆನ್ನೈನಲ್ಲಿ ನಡೆದಿದ್ದ ಟಿ20 ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿ ತಂಡದ ಗೆಲುವಿನಲ್ಲಿ ಮಹತ್ವದ ಕಾಣಿಕೆ ನೀಡಿದ್ದ ತಿಲಕ್, ಅಬ್ಬರಿಸಿದ್ದರು. ಅಲ್ಲದೆ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅಜೇಯರಾಗಿ 300ಕ್ಕೂ ಹೆಚ್ಚು ರನ್ ಬಾರಿಸಿದ ಹಿರಿಮೆ ತಮ್ಮದಾಗಿಸಿಕೊಂಡಿದ್ದರು. ಈಗ ತಿಲಕ್ ಮತ್ತೊಂದು ಮೈಲಿಗಲ್ಲು ತಲುಪಿದ್ದಾರೆ.

ಶ್ರೇಯಾಂಕದ ತಿಲಕ
ಟಿ20 ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ತಿಲಕ್ ವರ್ಮಾ ಶ್ರೇಯಾಂಕದಲ್ಲೂ ಬಡ್ತಿ ಪಡೆದಿದ್ದಾರೆ. ತಿಲಕ್ ವರ್ಮಾ 832 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನ ತಲುಪಿದ್ದು, ಜೀವನ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಮೊದಲ ಸ್ಥಾನ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ಹೆಸರಿನಲ್ಲಿದೆ. ಇವರ ಖಾತೆಯಲ್ಲಿ 855 ಅಂಕಗಳಿವೆ. ಇಂಗ್ಲೆಂಡ್ ಆಟಗಾರ ಫಿಲ್ ಸಾಲ್ಟ್ ಒಂದು ಸ್ಥಾನ ಕುಸಿತ ಕಂಡಿದ್ದಾರೆ. ಇವರು 782 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಟೀಮ್ ಇಂಡಿಯಾದ ನಾಯಕ ಸೂರ್ಯಕುಮಾರ್ ನಾಲ್ಕನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಆಡದ ಯಶಸ್ವಿ ಜೈಸ್ವಾಲ್ ಸಹ ಒಂದು ಸ್ಥಾನ ಕುಸಿತ ಕಂಡಿದ್ದಾರೆ. ರುತುರಾಜ್ ಗಾಯಕ್ವಾಡ್ 2 ಸ್ಥಾನ ಇಳಿಕೆ ಕಂಡಿದ್ದಾರೆ. ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿರುವ ಸ್ಟಾರ್ ಬ್ಯಾಟರ್ ಸಂಜು ಸ್ಯಾಮ್ಸನ್, 12 ಸ್ಥಾನ ಕುಸಿತ ಕಂಡಿದ್ದಾರೆ. ಸದ್ಯ ಸಂಜು 29ನೇ ಸ್ಥಾನದಲ್ಲಿದ್ದಾರೆ. ಟೀಮ್ ಇಂಡಿಯಾದ ಸ್ಟಾರ್ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ 59 ಸ್ಥಾನ ಜಿಗಿತ ಕಂಡಿದ್ದು, 40 ಸ್ಥಾನದಲ್ಲಿದ್ದಾರೆ.

25 ಸ್ಥಾನ ಜಿಗಿತ ಕಂಡ ವರುಣ್
ಟೀಮ್ ಇಂಡಿಯಾದ ಯುವ ಸ್ಪಿನ್ ಬೌಲರ್ ವರುಣ್ ಚಕ್ರವರ್ತಿ ಬೌಲಿಂಗ್ ಶ್ರೇಯಾಂಕದಲ್ಲಿ ಭಾರೀ ಜಿಗಿತ ಕಂಡಿದ್ದಾರೆ. ಇವರು ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ಇವರು ಮೂರು ಪಂದ್ಯಗಳಲ್ಲಿ 10 ವಿಕೆಟ್ ಕಬಳಿಸಿದ್ದಾರೆ. ವರುಣ್ 679 ಅಂಕಗಳೊಂದಿಗೆ ಐಸಿಸಿ ಟಿ20 ಬೌಲಿಂಗ್ ಶ್ರೇಯಾಂಕದಲ್ಲಿ ನಂಬರ್ 5ನೇ ಸ್ಥಾನದಲ್ಲಿದ್ದಾರೆ.
ಬೌಲರ್‌ಗಳ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡದ ಆದೀಲ್ ರಶೀದ್ ಅಗ್ರ ಸ್ಥಾನ ಮುಂದುವರಿದಿದ್ದಾರೆ. ವಿಂಡೀಸ್ ತಂಡದ ಅಕೇಲ್ ಹೊಸೈನ್ ಎರಡನೇ ಸ್ಥಾನದಲ್ಲಿದ್ದಾರೆ. ಶ್ರೀಲಂಕಾ ತಂಡದ ವನಿಂದು ಹಸರಂಗ ಮೂರನೇ ಸ್ಥಾನದಲ್ಲಿದ್ದಾರೆ.
ರವಿ ಬಿಷ್ಣೋಯಿ 5 ಸ್ಥಾನ ಕುಸಿತ ಕಂಡಿದ್ದು 10ನೇ ಶ್ರೇಯಾಂಕದಲ್ಲಿದ್ದಾರೆ. ಅರ್ಷದೀಪ್ ಸಿಂಗ್ 9ನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಟೀಮ್ ಇಂಡಿಯಾದ ಉಪನಾಯಕ ಅಕ್ಷರ್ ಪಟೇಲ್ 11ನೇ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications