Tilak Varma ಪಾಕ್ ವಿರುದ್ದದ ಪಂದ್ಯದಲ್ಲಿ ತಿಲಕ್ ಸಿಕ್ಸರ್ ಬಾರಿಸುತ್ತಲೇ ದಾಖಲೆ
ಭಾನುವಾರ ಕೊಲಂಬೊದಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಭಾರತ ಈ ಪಂದ್ಯ ಗೆದ್ದು ಸೂಪರ್ 8ಗೆ ಅರ್ಹತೆ ಪಡೆಯಲು ಪ್ಲ್ಯಾನ್ ಮಾಡಿಕೊಂಡಿದೆ. ಎರಡೂ ತಂಡಗಳಲ್ಲಿ ಸ್ಟಾರ್ ಆಟಗಾರರು ಇದ್ದಾರೆ. ಆದರೆ ಭಾರತೀಯ ಬ್ಯಾಟರ್‌ಗಳು ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಬ್ಯಾಟರ್ ತಿಲಕ್ ವರ್ಮಾ ದೊಡ್ಡ ದಾಖಲೆ ನಿರ್ಮಿಸುವ ಕನಸು ಹೊಂದಿದ್ದಾರೆ.
ಚುಟುಕು ಕ್ರಿಕೆಟ್‌ನಲ್ಲಿ ತಿಲಕ್ ವರ್ಮಾ ಪಾಕಿಸ್ತಾನದ ವಿರುದ್ಧ ಭಾರತದ ಪರ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯನ್ನು ನಿರ್ಮಿಸಬಹುದು. ಈ ಮೂಲಕ ತಿಲಕ್ ವರ್ಮಾ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಅಳಿಸಿ ಹಾಕುವ ಕನಸಿನಲ್ಲಿದ್ದಾರೆ. ವಿರಾಟ್ ಕೊಹ್ಲಿ ಈಗಾಗಲೇ ಟಿ20 ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ.

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ ವಿರಾಟ್ ಕೊಹ್ಲಿ ತಮ್ಮ ಸ್ಥಿರ ಆಟದ ಪ್ರದರ್ಶನ ನೀಡಿದ್ದಾರೆ. ಪಾಕ್ ವಿರುದ್ಧ ವಿರಾಟ್ 11 ಸಿಕ್ಸರ್ ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ ಯುವರಾಜ್ ಸಿಂಗ್ ಎರಡನೇ ಸ್ಥಾನದಲ್ಲಿದ್ದು, 8 ಪಂದ್ಯಗಳಲ್ಲಿ 9 ಸಿಕ್ಸರ್ ಸಿಡಿಸಿದ್ದಾರೆ. ಇನ್ನು ತಿಲಕ್ ವರ್ಮಾ, ಅಭಿಷೇಕ್ ಶರ್ಮಾ ಹಾಗೂ ರೋಹಿತ್ ಶರ್ಮಾ ತಲಾ 7 ಸಿಕ್ಸರ್ ಬಾರಿಸಿದ್ದಾರೆ. ಹೀಗಾಗಿ ಭಾನುವಾರ ನಡೆಯಲಿರುವ ಪಂದ್ಯದಲ್ಲಿ ತಿಲಕ್ ಹಾಗೂ ಅಭಿಷೇಕ್‌ಗೆ ದೊಡ್ಡ ದಾಖಲೆ ಬರೆಯುವ ಅವಕಾಶ ಇದೆ.
5 ಸಿಕ್ಸರ್ ಬಾರಿಸುತ್ತಲೇ ದಾಖಲೆ
ತಿಲಕ್ ವರ್ಮಾ ಪಾಕ್ ವಿರುದ್ಧದ ಪಂದ್ಯದಲ್ಲಿ ಆಡುವುದು ಫಿಕ್ಸ್. ಆದರೆ ಅಭಿಷೇಕ್ ಶರ್ಮಾ ಇನ್ನು ಗಾಯದಿಂದ ಚೇತರಿಸಿಕೊಳ್ಳದ ಕಾರಣ, ಇವರು ಆಡುವುದು ಅನುಮಾನ. ಹೀಗಾಗಿ ತಿಲಕ್ ವರ್ಮಾ ಅವರ ಬಳಿಕ ದೊಡ್ಡ ದಾಖಲೆಯನ್ನು ನಿರ್ಮಿಸುವ ಸುವರ್ಣ ಅವಕಾಶ ಇದೆ. ತಿಲಕ್ ವರ್ಮಾ ಭಾನುವಾರ ನಡೆಯಲಿರುವ ಪಂದ್ಯದಲ್ಲಿ 5 ಸಿಕ್ಸರ್ ಬಾರಿಸಿದಲ್ಲಿ, ಪಾಕ್ ವಿರುದ್ಧ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications