Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Tilak Verma: ಚೊಚ್ಚಲ ಟಿ20 ಶತಕ ಸಿಡಿಸಿ ತಿಲಕ್ ವರ್ಮಾ ದಾಖಲೆ

ಸೂಪರ್‌ಸ್ಪೋರ್ಟ್ ಪಾರ್ಕ್‌ನ ಸೆಂಚುರಿಯನ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ನಡೆಯುತ್ತಿದೆ. ಈ ಮೂರನೇ ಟಿ20 ಪಂದ್ಯದಲ್ಲಿ ಭಾರತದ ಬ್ಯಾಟರ್‌ಗಳು ಭರ್ಜರಿ ಪ್ರದರ್ಶ ನೀಡಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾದ ಯುವ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ ಅಮೋಘ ಶತಕ ಬಾರಿಸಿ ಮಿಂಚಿದ್ದಾರೆ. ತಮ್ಮ ಟಿ20 ವೃತ್ತಿಜೀವನದ ಚೊಚ್ಚಲ ಶತಕ ಸಿಡಿಸಿದ ತಿಲಕ ವರ್ಮಾ ಹೊಸ ದಾಖಲೆ ಬರೆದಿದ್ದಾರೆ.

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ ಮೊದಲ ಶತಕವನ್ನು ಪೂರ್ಣಗೊಳಿಸಿದ ತಿಲಕ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ಅಷ್ಟೇ ಅಲ್ಲ ಕೊನೆಯವರೆಗೂ ಅಜೇಯರಾಗಿ ಕ್ರೀಸ್ ಕಚ್ಚಿ ನಿಂತು ಟೀಮ್ ಇಂಡಿಯಾದ ಸ್ಕೋರ್ ಹೆಚ್ಚಿಸಿದ್ದಾರೆ. ಈ ಅದ್ಭುತ ಇನ್ನಿಂಗ್ಸ್‌ನೊಂದಿಗೆ ತಿಲಕ್ ವರ್ಮಾ ಹಲವು ದಾಖಲೆಗಳನ್ನು ಮುರಿದ್ದಾರೆ.

Tilak Varma created record by scoring century on debut T20

ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಎರಡನೇ ಎಸೆತದಲ್ಲಿಯೇ ಆಕ್ರಮಣಕಾರಿ ಆಟವಾಡಿತು. ಆದರೆ ಮೊದಲ ಪಂದ್ಯದಲ್ಲಿ ಶತಕ ಬಾರಿಸಿದ ಸಂಜು ಸ್ಯಾಮ್ಸನ್ ಮತ್ತೊಮ್ಮೆ ಖಾತೆ ತೆರೆಯದೆ ಔಟಾದರು. ಇದಾದ ಬಳಿಕ ಅಭಿಷೇಕ್ ಶರ್ಮಾ ಜೊತೆಗೂಡಿದ ತಿಲಕ್ ವರ್ಮಾ ದಕ್ಷಿಣ ಆಫ್ರಿಕಾ ಬೌಲರ್‌ಗಳನ್ನು ಬೆಂಡೆತ್ತಿದರು. ಅಭಿಷೇಕ್ ಶರ್ಮಾ (50) ಅರ್ಧಶತಕ ಸಿಡಿಸಿದರೆ, ತಿಲಕ್ ವರ್ಮಾ ಭರ್ಜರಿ ಶತಕ ಬಾರಿಸಿದರು. 56 ಎಸೆತಗಳನ್ನು ಎದುರಿಸಿದ ತಿಲಕ್ 8 ಬೌಂಡರಿ ಹಾಗೂ 7 ಸಿಕ್ಸರ್ ನೆರವಿನಿಂದ 107 ರನ್ ಗಳಿಸಿದರು.

ಹೊಸ ದಾಖಲೆ

ತಿಲಕ್ ವರ್ಮಾ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಶತಕ ಸಿಡಿಸಿದ ಅತಿ ಕಿರಿಯ ಭಾರತದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು 22 ವರ್ಷ ಮತ್ತು 5 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದಾರೆ. ಇದಲ್ಲದೆ, ಟಿ20 ಕ್ರಿಕೆಟ್‌ನಲ್ಲಿ ಭಾರತಕ್ಕಾಗಿ ಶತಕ ಬಾರಿಸಿದ ಎರಡನೇ ಕಿರಿಯ ಬ್ಯಾಟರ್‌ ಎನಿಸಿಕೊಂಡಿದ್ದಾರೆ. 21 ವರ್ಷ 279 ದಿನಗಳಲ್ಲಿ ಈ ಸಾಧನೆ ಮಾಡಿದ ಯಶಸ್ವಿ ಜೈಸ್ವಾಲ್ ನಂಬರ್-1 ಸ್ಥಾನದಲ್ಲಿದ್ದಾರೆ.

Story first published: Wednesday, November 13, 2024, 23:37 [IST]
Other articles published on Nov 13, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+